ಇನ್ನು ರ್‍ಯಾಪಿಡೋ, ರೆಡ್ ಬಸ್‌ ಸೇರಿದಂತೆ 9 ಡಿಜಿಟಲ್ ಕಾಮರ್ಸ್ ಆ್ಯಪ್‌ಗಳಲ್ಲೂ ಮೆಟ್ರೋ ಟಿಕೆಟ್ ಲಭ್ಯ

Date:

ಡಿಜಿಟಲ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ದೃಷ್ಟಿಯಿಂದ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ತನ್ನ ಸೇವೆಗಳಲ್ಲಿ ಮಹತ್ವಪೂರ್ಣ ನಿರ್ಧಾರ ಕೈಗೊಂಡಿದ್ದು, ಓಪನ್ ನೆಟ್ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ (ಓಎನ್‌ಡಿಸಿ) ಮೂಲಕ ಕ್ಯೂಆರ್ ಟಿಕೆಟ್ ಸೇವೆ ನೀಡಲು ಚಾಲನೆ ನೀಡಿದೆ.

- Advertisement -

ಈ ಹೊಸ ಸೌಲಭ್ಯದಿಂದಾಗಿ ಮೆಟ್ರೋ ಪ್ರಯಾಣಿಕರು ಇನ್ನು ಮುಂದೆ, ಈಜ್ ಮೈ ಟ್ರಿಪ್ (EaseMyTrip), ಹೈವೇ ಡಿಲೈಟ್ (Highway Delite), ಮೈಲ್ಸ್ ಆಂಡ್ ಕಿಲೋ ಮೀಟರ್ಸ್‌ (Miles & Kilometres via Telegram), ನಮ್ಮ ಯಾತ್ರಿ (Namma Yatri), ವನ್ ಟಿಕೆಟ್ (OneTicket), ರ್‍ಯಾಪಿಡೋ (Rapido), ರೆಡ್‌ ಬಸ್ (Redbus), ಟಮ್ಮಾಕ್ (Tummoc) ಮತ್ತು ಯಾತ್ರಿ – ಸಿಟಿ ಟ್ರಾವೆಲ್ ಗೈಡ್ (Yatri – City Travel Guide) ಎಂಬ ಒಂಬತ್ತು ಜನಪ್ರಿಯ ಅಪ್ಲಿಕೇಶನ್‌ಗಳ ಮೂಲಕ ಮೆಟ್ರೋ ಕ್ಯೂಆರ್ ಟಿಕೆಟ್‌ಗಳನ್ನು ಖರೀದಿಸಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಹೊಸ ಆಯ್ಕೆಗಳು ಈಗಾಗಲೇ ಲಭ್ಯವಿರುವ ಟಿಕೆಟ್ ಬುಕ್ಕಿಂಗ್ ಆಯ್ದ ಮಾರ್ಗಗಳಾದ ನಮ್ಮ ಮೆಟ್ರೋ ಮೊಬೈಲ್ ಆಪ್ , ಬಿಎಂಆರ್‌ಸಿಎಲ್ ವಾಟ್ಸಾಪ್ ಚಾಟ್ ಬಾಟ್ (8105556677), ಪೇಟಿಎಂ (Paytm) ಆಪ್‌ಗೆ ಪೂರಕವಾಗಿ ಸೇರುತ್ತಿದ್ದು, ಡಿಜಿಟಲ್ ಬಳಕೆದಾರರಿಗೆ ಇನ್ನಷ್ಟು ಸುಲಭ, ಲಭ್ಯವಿರುವ ಮತ್ತು ಸಹಜ ಟಿಕೆಟ್ ಬುಕ್ಕಿಂಗ್ ಅನುಭವವನ್ನು ಒದಗಿಸುತ್ತವೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಈ ಕುರಿತು ಬಿಎಂಆರ್‌ಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕರಾದ ಎಂ. ಮಹೇಶ್ವರ ರಾವ್ ಮಾತನಾಡಿ, “ಡಿಜಿಟಲ್ ಟಿಕೆಟ್ ವ್ಯವಸ್ಥೆಯ ಈ ವಿಸ್ತರಣೆಯು ಮೊದಲ ಹಂತದಿಂದ ಕೊನೆಯ ಹಂತದ ಸಂಪರ್ಕವರೆಗೆ (ಫಸ್ಟ್, ಮಿಡ್ ಮತ್ತು ಲಾಸ್ಟ್ ಮೈಲ್ ಕನೆಕ್ಟಿವಿಟಿ) ಏಕೀಕೃತಗೊಳಿಸುವ ನಮ್ಮ ದೀರ್ಘಕಾಲಿಕ ಪ್ರಯತ್ನದ ಭಾಗವಾಗಿದೆ. ಈಗಾಗಲೇ 2023ರಿಂದ ಓಎನ್‌ಡಿಸಿ ನೆಟ್ವರ್ಕಿನಲ್ಲಿ ಆಟೋ ಮತ್ತು ಟ್ಯಾಕ್ಸಿ ಸೇವೆಗಳು ಲಭ್ಯವಿರುವ ಹಿನ್ನೆಲೆಯಲ್ಲಿ, ಮೆಟ್ರೋ ಟಿಕೆಟ್‌ಗಳ ಸೇರ್ಪಡೆ ಬಹುಮಾದ್ಯಮ ಸಂಚಾರ ವ್ಯವಸ್ಥೆಯ ಪ್ರಮುಖ ಅಂಗವಾಗುತ್ತಿದೆ. ಪ್ರಯಾಣಿಕರು ಇದೀಗ ಒಂದೇ ಅಪ್ಲಿಕೇಶನ್‌ನಿಂದ ತಮ್ಮ ಮನೆಯಿಂದ ತಾವು ಪ್ರಯಾಣಿಸುವ ನಿಗದಿತ ಸ್ಥಳದವರೆಗೆ ತಮ್ಮ ಸಂಪೂರ್ಣ ಪ್ರಯಾಣವನ್ನು ಸುಲಭವಾಗಿ ಯೋಜಿಸಬಹುದಾಗಿದೆ. ಇದು ಸಮಯ ಮತ್ತು ಶ್ರಮವನ್ನು ದ್ವಿಗುಣವಾಗಿ ಉಳಿಸುತ್ತದೆ. ಬಿಎಂಆರ್‌ಸಿಎಲ್ ಈ ಮೂಲಕ ಒಂದು ಮುಕ್ತ, ಒಳಗೊಳ್ಳುವಿಕೆಯಿಂದ ಕೂಡಿದ, ತಂತ್ರಜ್ಞಾನಾಧಾರಿತ ಭವಿಷ್ಯದ ನಗದುರಹಿತ ನಗರ ಸಂಚಾರ ವ್ಯವಸ್ಥೆ ಕಡೆಗೆ ನಿರ್ಣಾಯಕ ಹೆಜ್ಜೆ ಇಡುತ್ತಿದೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಬಳಕೆದಾರರ ಗೌಪ್ಯತೆಗೆ ಆದ್ಯತೆ, ಟ್ವಿಟರ್‌ ಸಹ ಸ್ಥಾಪಕ ಜಾಕ್‌ ಡಾರ್ಸಿಯಿಂದ ಹೊಸ ಮೆಸೇಜಿಂಗ್ ಆ್ಯಪ್ ಬಿಡುಗಡೆ

ನಮ್ಮ ಮೆಟ್ರೋ ಸೇವೆಯನ್ನು ವಾರದ ದಿನಗಳಲ್ಲಿ ಪ್ರತಿ ದಿನ 8.5 ಲಕ್ಷಕ್ಕಿಂತ ಹೆಚ್ಚು ಪ್ರಯಾಣಿಕರು ಬಳಸುತ್ತಿದ್ದಾರೆ. ಅವರೆಲ್ಲರಿಗೂ ಈ ಸೇವೆಯನ್ನು ಇನ್ನಷ್ಟು ಸುಲಭವಾಗಿಸುವ ನಿಟ್ಟಿನಲ್ಲಿ 9 ಜನಪ್ರಿಯ ಅಪ್ಲಿಕೇಶನ್‌ಗಳಲ್ಲಿ ಲಭ್ಯವಿರುವಂತೆ ಬಿಎಂಆರ್‌ಸಿಎಲ್ ಮಹತ್ವದ ಹೆಜ್ಜೆಯನ್ನಿಟ್ಟಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...