ಪ್ರತಿಯೊಂದು ಕ್ಷೇತ್ರದಲ್ಲಿಯೂ ವಿಜ್ಞಾನದ ಕೊಡುಗೆ ಬಹು ಮುಖ್ಯವಾದುದ್ದು. ವಿಜ್ಞಾನದ ಬೆಳವಣಿಗೆ ಹಾಗೂ ಸಮಾಜದ ಅಭಿವೃದ್ಧಿಯಲ್ಲಿ ಸಂಶೋಧನಾ ಕ್ಷೇತ್ರಗಳ ಕೊಡುಗೆ ಅಗತ್ಯ ಎಂದು ಕುವೆಂಪು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ತಿಳಿಸಿದರು.
ಶಿವಮೊಗ್ಗ ನಗರದ ಕುವೆಂಪು ವಿವಿಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ 15 ಲಕ್ಷ ವೆಚ್ಚದ ನವೀಕೃತ ಸೂಕ್ಷ್ಮ ಜೀವಶಾಸ್ತ್ರ ಪ್ರಯೋಗಾಲಯದ ಉದ್ಘಾಟನಾ ಸಮಾರಂಭಡಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ವಿಜ್ಞಾನ ಕ್ಷೇತ್ರಗಳ ಸಂಶೋಧನೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು. ಸಂಶೋಧನೆಗಳು ವೈಜ್ಞಾನಿಕ ಕ್ಷೇತ್ರಕ್ಕೆ ಯಥೇಚ್ಛ ಪ್ರಮಾಣದಲ್ಲಿ ಕೊಡುಗೆ ನೀಡುವಂತಾಗಬೇಕು. ಉತ್ತಮ ಸಂಶೋಧನೆಗಳ ಮೂಲಕ ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಪ್ರಯೋಗಳಗಳ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ನೀಡುವ ಸೌಲಭ್ಯಗಳ ಸದುಪಯೋಗಪಡೆದುಕೊಳ್ಳಬೇಕು ಎಂದು ಹೇಳಿದರು.

ವಿಭಾಗದ ಯೋಜನಾ ತನಿಖಾಧಿಕಾರಿ ಎನ್.ಬಿ.ತಿಪ್ಪೇಸ್ವಾಮಿ ಮಾತನಾಡಿ, ಒಂದೊಳ್ಳೆ ಸೂಕ್ಷ್ಮ ಜೀವಶಾಸ್ತ್ರ ಪ್ರಯೋಗಾಲಯ ನಿರ್ಮಿಸುವುದು ಹಾಗೂ ವಿಜ್ಞಾನ ಕ್ಷೇತ್ರಕ್ಕೆ ಕೊಡುಗೆ ನೀಡುವುದು ನಮ್ಮೆಲ್ಲರ ಕನಸು ಹಾಗೂ ಗುರಿಯಾಗಿತ್ತು. ಈ ಕುರಿತು ನಮ್ಮ ಮನವಿಗೆ ಸ್ಪಂದಿಸಿ ಪ್ರಯೋಗಾಲಯದ ನವೀಕರಣಕ್ಕೆ ಕುಲಪತಿಗಳು ಸಹಕರಿಸಿದ್ದು ನಮಗೆ ಸಂತಸ ತಂದಿದೆ ಎಂದು ಹೇಳಿದರು.

ಸಂಶೋಧನಾ ವಿದ್ಯಾರ್ಥಿನಿ ಊರ್ಮಿಳಾ ನಾಗರಾಜ್ ಕಾರ್ಯಕ್ರಮ ನಿರೂಪಣೆ ಮಾಡಿದರು.
ಇದನ್ನೂ ಓದಿ : ಈ ದಿನ ಸಂಪಾದಕೀಯ | ಅಮೆರಿಕ ನೆಲದಲ್ಲಿ ಮೋದಿ ಸಾಧಿಸಿದ್ದಕ್ಕಿಂತ ತಲೆ ಬಾಗಿದ್ದೇ ಹೆಚ್ಚು
ಕಾರ್ಯಕ್ರಮದಲ್ಲಿ ವಿಭಾಗದ ಮುಖ್ಯಸ್ಥರಾದ ಪ್ರೊ.ಬಿ.ತಿಪ್ಪೇಸ್ವಾಮಿ, ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಜರಿದ್ದರು.