ರಾಯಚೂರು | ಮೈಕ್ರೋ ಫೈನಾನ್ಸ್ ಕಿರುಕುಳ: ಮರುಪಾವತಿಗೆ ಕಾಲಾವಕಾಶ ನೀಡಲು ಒತ್ತಾಯ

Date:

ಮೈಕ್ರೋ ಫೈನಾನ್ಸ್ ಕಿರುಕುಳ ದಿನದಿಂದ ದಿನಕ್ಕೆ ಎಲ್ಲೆಡೆ ಹೆಚ್ಚಾಗುತ್ತಿದ್ದು, ಮಹಿಳೆಯರ ಮೇಲೆ ಮಾನಸಿಕ ದೌರ್ಜನ್ಯ ಮಾಡುತ್ತಿದ್ದಾರೆ. ಮೈಕ್ರೋ ಫೈನಾನ್ಸ್, ಸಂಘ ಸಂಸ್ಥೆಗಳಿಂದ ಹಾಗೂ ಇನ್ನಿತರ ಫೈನಾನ್ಸ್ ಕಂಪನಿಗಳಿಂದ ತೆಗೆದುಕೊಂಡ ಹಣವನ್ನು ವಾಪಸ್‌ ಮರುಪಾವತಿಸಲು ಒಂದೆರಡು ಬಾರಿ ಅವಕಾಶ ಕೊಡಬೇಕು ಎಂದು ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ( ಪಾವಗಡ ಶ್ರೀ ರಾಮ ಬಣ) ಸಮಿತಿ ವತಿಯಿಂದ ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ ಸಲ್ಲಿಸಿದರು.

- Advertisement -

“ಪ್ರಸ್ತುತ ಮನೆಗಳಲ್ಲಿ ಒಂದಲ್ಲಾ ಒಂದು ಸಮಸ್ಯೆಗಳು, ದುರ್ಘಟನೆಗಳು ನಡೆದಿರುತ್ತವೆ. ಇಂತಹ ಸಂದರ್ಭದಲ್ಲಿಯೂ ಫೈನಾನ್ಸ್‌ಗಳಿಂದ ನಿತ್ಯವೂ ಕಿರುಕುಳ ಹೆಚ್ಚಾಗುತ್ತಿದೆ. ಸಾಲ ವಾಪಸ್ ನೀಡುವುದಿಲ್ಲವೆಂದು ಹೇಳುವುದಿಲ್ಲ. ಸ್ವಲ್ಪ ಕಾಲಾವಕಾಶ ಕೊಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಯಚೂರು ಜಿಲ್ಲೆಯಾದ್ಯಂತ ಕಿರುಸಾಲ ಪಡೆದ ಮಹಿಳೆಯರ ಮನೆಗೆ ನುಗ್ಗಿ ಸಮಯದ ಪ್ರಜ್ಞೆ ಇಲ್ಲದೆ ಮನೆಯಲ್ಲಿ ಧರಣಿ ಹೂಡಿದಂತೆ ಕುಳಿತುಕೊಂಡು ಹಣ ಕಟ್ಟುವಂತೆ ಒತ್ತಾಯಿಸುತ್ತಾರೆ. ಮನೆಯಂಗಳದಲ್ಲಿ, ಓಣಿಯಲ್ಲಿ ನಿಂತು ನಮ್ಮ ಮರ್ಯಾದೆಗೆ ಧಕ್ಕೆಯುಂಟು ಮಾಡುತ್ತಿದ್ದಾರೆ” ಎಂದು ಅಳಲು ತೋಡಿಕೊಂಡರು. ಹಣ ಕಟ್ಟಲು ಕಾಲಾವಕಾಶ ಕೋರಿದರೂ ಕೂಡ ಬಾಯಿಗೆ ಬಂದಂತೆ ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಾರೆ ಎಂದು ಹೇಳಿದರು.

ಸಾಲ ಪಡೆದ ಮಹಿಳೆಯರಿಗೆ ನೆಮ್ಮದಿಯಿಲ್ಲದಂತಾಗಿದೆ. ಕೆಲವು ಸೂಕ್ಷ್ಮ ಮತಿಯ ಹೆಣ್ಣು ಮಕ್ಕಳು ಇವರ ಕಿರಿಕಿರಿಯಿಂದಾಗಿ ಆತ್ಮಹತ್ಯೆಗೆ ಪ್ರಯತ್ನ ಪಟ್ಟರೆ ಇದಕ್ಕೆ ನೇರ ಹೊಣೆಗಾರರು ಮೈಕ್ರೋ ಫೈನಾನ್ಸ್ ಕಂಪನಿಗಳೇ ಆಗುತ್ತವೆ ಎಂದು ಕಿಡಿಕಾರಿದರು.

ಸರಕಾರದ ಸುತ್ತೋಲೆ ಮೂಲಕ ಕೊಟ್ಟಿರುವ ಸಾಲಗಳಿಗೆ ಒತ್ತಾಯ ಪೂರ್ವಕವಾಗಿ ಹಣ ಕಟ್ಟುವಂತೆ ಪೀಡಿಸಬಾರದು. ಒಂದೆರಡು ಬಾರಿ ಕಾಲಾವಕಾಶ ಕೊಡಬೇಕು ಎಂದು ಸಂಘಟನೆಯಿಂದ ಮನವಿ ಮಾಡಿದರು.

ಈ ವೇಳೆ ರಾಜ್ಯಾಧ್ಯಕ್ಷರು ಹೇಮರಾಜ್ ಅಸ್ಕಿಹಾಳ, ಜಿಲ್ಲಾಧ್ಯಕ್ಷ ನರಸಿಂಹಲು , ಪ್ರಭು ಮರ್ಚಟ್ಹಾಲ , ನರಸಿಂಹಲು ಪೋತಗಲ್ , ಉರುಕುಂದಪ್ಪ , ತಾಯಣ್ಣ ಗದಾರ , ಲಿಂಗಣ್ಣ ಮಾಡಗಿರಿ , ಎನ್ ಸುನೀಲ್ , ಸಿ ರಾಘವೇಂದ್ರ , ಪ್ರವೀಣ ಕುಮಾರ , ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...