ಹಾಲು ಉತ್ಪಾದಕರ ಹಿತದೃಷ್ಟಿಯಿಂದ 5 ರೂ. ಏರಿಕೆ: ಕೆಎಂಎಫ್‌ ನಿರ್ದೇಶಕ

Date:

Advertisements

ರಾಜ್ಯದ ಹಾಲು ಉತ್ಪಾದಕರ ಹಿತದೃಷ್ಟಿಯಿಂದ ಪ್ರತಿ ಲೀಟರ್‌ ಹಾಲಿಗೆ 5 ರೂ. ಹೆಚ್ಚಿಸಲಾಗುತ್ತಿದೆ. ಜೊತೆಗೆ, ಪ್ರೋತ್ಸಾಹ ಧನವನ್ನು 2 ರೂ.ಗೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೆಎಂಎಫ್ ನಿರ್ದೇಶಕ ಮೈದನಹಳ್ಳಿ ಕಾಂತರಾಜು ತಿಳಿಸಿದ್ದಾರೆ.

ಮಧುಗಿರಿಯ ಹಾಲು ಶೀಥಲೀಕರಣ ಕೇಂದ್ರಕ್ಕೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪಶು ಆಹಾರಗಳ ಬೆಲೆ ಹೆಚ್ಚಳದಿಂದಾಗಿ ಹಾಲು ಉತ್ಪಾದನೆಯಲ್ಲಿ ತೊಡಗಿರುವ ರೈತರು ನಿರಾಸಕ್ತಿ ತೋರುತ್ತಿದ್ದಾರೆ. ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ರೈತರ ಬಗ್ಗೆ ಕಾಳಜಿ ಹೊಂದಿದ್ದು, ನೇರವಾಗಿ ಉತ್ಪಾದಕರ ಖಾತೆಗೆ ಹೆಚ್ಚಳದ ಹಣವನ್ನು ನೀಡುವ ಬಗ್ಗೆ ಚರ್ಚಿಸಿದ್ದಾರೆ. ಶೀಘ್ರವೇ ಮುಖ್ಯಮಂತ್ರಿಗಳನ್ನು ಕೆಎಂಎಫ್ ಪದಾಧಿಕಾರಿಗಳ ನಿಯೋಗ ಭೇಟಿ ಮಾಡಲಿದೆ. ಹಾಲಿನ ದರ ಹೆಚ್ಚಳಕ್ಕೆ ಪ್ರಸ್ತಾಪ ಸಲ್ಲಿಸಲಿದೆ” ಎಂದು ಹೇಳಿದರು.

“ಈಗಾಗಲೇ ಸರಿಯಾದ ಸಮಯಕ್ಕೆ ಮಳೆಯಾಗದೆ, ಹಾಲಿನ ಶೇಖರಣೆ ಕಡಿಮೆಯಾಗಿದೆ. ಕ್ಷೇತ್ರದಲ್ಲಿ ಚರ್ಮಗಂಟು ರೋಗವು ನಿಯಂತ್ರಣಕ್ಕೆ ಬರುತ್ತಿದ್ದು, ಲ್ಯಾಕ್ಟೋ ಮೀಟರ್ ರೀಡಿಂಗ್ ಮೂಲಕ ಗುಣಮಟ್ಟದ ಹಾಲಿನ ನಿಯಂತ್ರಣಕ್ಕೆ ಅಧಿಕಾರಿಗಳು ಕ್ರಮಕೈಗೊಂಡಿದ್ದಾರೆ. ಉತ್ತಮವಾದ ಹಾಲು ರೈತರಿಂದ ಶೇಖರಣೆಯಾಗಲಿದೆ” ಎಂದರು.

Advertisements

“ಇತ್ತೀಚೆಗೆ ಹಾಲಿನಲ್ಲಿ ನೀರು ಮತ್ತು ಉಪ್ಪು ಬೆರೆಕೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ವರದಿ ಬಂದಾಕ್ಷಣ ತಪ್ಪಿತಸ್ಥರು ಯಾರೇ ಆದರೂ ಅವರುಗಳ ವಿರುದ್ಧ ಅಗತ್ಯ ಕಾನೂನು ಕ್ರಮಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ಈ ವೇಳೆ ವಿಸ್ತರಣಾಧಿಕಾರಿ ಶಂಕರ್ ನಾಗ್, ಸುದರ್ಶನ್, ಮಹಾಲಕ್ಷ್ಮೀ, ನಾಗರಾಜು ಹಾಗೂ ಮತ್ತಿತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X