ಸಚಿವ ಡಿ. ಸುಧಾಕರ್ ರಾಜೀನಾಮೆ ನೀಡಲಿ: ಬಸವರಾಜ ಬೊಮ್ಮಾಯಿ‌ ಆಗ್ರಹ

Date:

  • ಸಚಿವ ಡಿ. ಸುಧಾಕರರಿಂದ ಜಾತಿನಿಂದನೆ ಆರೋಪ
  • ‘ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯಬಾರದು’

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.‌ಸುಧಾಕರ್ ಅವರಿಂದ ಜಾತಿ ನಿಂದನೆ ಆಗಿದ್ದರೆ, ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸಚಿವ ಸುಧಾಕರ್ ಅವರು ತಮ್ಮ ವಿರುದ್ದ ಕೇಳಿ ಬಂದಿರುವ ಆರೋಪಗಳಿಗೆ ಕಾನೂನು ರೀತಿ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ದಲಿತರ ಮೇಲೆ ದೌರ್ಜನ್ಯ ದಬ್ಬಾಳಿಕೆ ನಡೆಸಿರುವುದು ಸರಿಯಲ್ಲ. ಈ ಪ್ರಕರಣದಲ್ಲಿ ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯಬಾರದು” ಎಂದರು.

“ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಸಾಮಾನ್ಯ ಜನರನ್ನು ಹೇಗೆ ಪೊಲಿಸ್ ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸುತ್ತಾರೋ, ಅದೇ ರೀತಿ ಸಚಿವರನ್ನು ವಿಚಾರಣೆ ನಡೆಸಬೇಕು. ಪೊಲಿಸರು ಒತ್ತಡಕ್ಕೆ ಮಣಿದರೆ, ರಾಜ್ಯದ ದಲಿತರು ಸರ್ಕಾರದ ವಿರುದ್ಧ ಹೋರಾಟ ನಡೆಸಲಿದ್ದಾರೆ” ಎಂದು ಎಚ್ಚರಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕಾಂಗ್ರೆಸ್ ನಾಯಕರು ಭಾಷಣದಲ್ಲಿ ಮಾತ್ರ ದಲಿತರ ಪರ ಮಾತನಾಡುತ್ತಾರೆ. ಆದರೆ, ಅವರ ಸಚಿವರ ನಡವಳಿಕೆ ಸಂಪೂರ್ಣ ದಲಿತ ವಿರೋಧಿಯಾಗಿದೆ. ಗ್ಯಾರಂಟಿ ಯೋಜನೆಗಳಿಗೆ ದಲಿತರಿಗೆ ಮೀಸಲಿಟ್ಟ 11 ಸಾವಿರ ಕೋಟಿ ರೂ. ಬಳಕೆ ಮಾಡಿಕೊಳ್ಳುತ್ತಿದ್ದಾರೆ. ದಲಿತರು ಇವರನ್ನು ಕ್ಷಮಿಸುವುದಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಭೂ ಕಬಳಿಕೆ, ಹಲ್ಲೆ, ಜಾತಿ ದೌರ್ಜನ್ಯ ಆರೋಪ; ಸಚಿವ ಡಿ.ಸುಧಾಕರ್ ವಿರುದ್ಧ ಪ್ರಕರಣ

ಸ್ಟಾಲಿನ್ ಮನವೊಲಿಸಲಿ

“ರಾಜ್ಯ ಸರ್ಕಾರ ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಳಿ ಸರ್ವ ಪಕ್ದ ‌ನಿಯೋಗ‌ ಕರೆದುಕೊಂಡ ಹೋಗುವ ಬದಲು ತಮಿಳುನಾಡು ಸಿಎಂ ಸ್ಟಾಲಿನ್ ಅವರಿಗೆ ರಾಜ್ಯದ ವಸ್ತುಸ್ಥಿತಿ ಮನವರಿಕೆ ಮಾಡಿ, ಅವರ ಮನವೊಲಿಸಬೇಕು. ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣ ಇರುವುದರಿಂದ ಪ್ರಧಾನಿ ಮಧ್ಯಸ್ಥಿಕೆ ವಹಿಸಲು ಬರುವುದಿಲ್ಲ” ಎಂದು ಹೇಳಿದರು.

“ತಮಿಳುನಾಡು ಅಗತ್ಯಕ್ಕಿಂತ ಹೆಚ್ಚು ನೀರನ್ನು ಕುರುವೈ ಬೆಳೆಗೆ ಅಕ್ರಮವಾಗಿ ಬಳಸಿಕೊಂಡಿದೆ ಎಂದು ರಾಜ್ಯ ಸರ್ಕಾರ ಸಿಡಬ್ಲುಎಂಎ ಸಭೆಯಲ್ಲಿ ಬಲವಾಗಿ ಹೇಳುತ್ತಿಲ್ಲ. ಸೆ. 12 ರ ನಂತರ ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರ ತನ್ನ ನಿಲುವಿಗೆ ಎಷ್ಟು ಬದ್ಧವಾಗಿರುತ್ತದೆ ಎಂದು ಕಾದು ನೋಡೋಣ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಳೆ ನೀರು ಒಳಚರಂಡಿಗೆ ಹರಿಬಿಡುತ್ತಿರುವ ಜನರ ವಿರುದ್ಧ ಕ್ರಮ; ಜಲಮಂಡಳಿ ಅಧ್ಯಕ್ಷ

ಮಳೆ ನೀರು ಕೋಯ್ಲು ಪದ್ದತಿಯ ಅಳವಡಿಕೆಯ ಮೂಲಕ ಆ ನೀರಿನ ಸದ್ಬಳಕೆ...

ʼನಾವೆದ್ದು ನಿಲ್ಲದಿದ್ದರೆ- ಕರ್ನಾಟಕʼ ಸಂಘಟನೆಯಿಂದ ಹಾಸನ ಚಲೋಗೆ ಬೆಂಬಲ

‘ನಾವೆದ್ದು ನಿಲ್ಲದಿದ್ದರೆ’ ಎಂಬುದು ಮಹಿಳೆಯರಿಗೆ ಮತ್ತು ಮಾನವಹಕ್ಕುಗಳಿಗೆ ಸಂಬಂಧಪಟ್ಟ ಎಲ್ಲ ವಿಷಯಗಳ...

ಬೀದರ್‌ | ಹೋರಾಟದ ಚಿಂತನೆಯಿಲ್ಲದ ಸಾಹಿತ್ಯ ಉಳಿಯದು : ಗಂಧರ್ವ ಸೇನಾ

ಸಮತಾ ಸಂಸ್ಕ್ರತಿ ವೇದಿಕೆ ಸ್ಥಾಪಿಸಿ, ಅದರ ಮೂಲಕ ಬಡವರ, ನಿರ್ಗತಿಕರ ಬಾಳು...

ಮೋದಿ ಭಕ್ತರಿಗೆ ಶ್ರೇಯಸ್ ಅಯ್ಯರ್ ಬ್ಯಾಟಿನ ಏಟು; ವಿಶ್ವಕಪ್‌ನಲ್ಲಿ ಶ್ರೇಯಸ್ ಕೈಬಿಡಲು ಮೋದಿ ಕಾರಣವೇ?

ಬೆಟ್ಟಿಂಗ್‌ ದಂಧೆಗೂ ಹೆಸರಾಗಿರುವ, ಭಾರತದ ಕ್ರಿಕೆಟ್‌ ಪ್ರೇಮಿಗಳ ಹುಚ್ಚಿನ ಆಟ ಐಪಿಎಲ್‌-2024...