ಕರಾವಳಿ ಪ್ರವಾಸೋದ್ಯಮ ಯೋಜನೆ | ಸ್ಥಳೀಯ ಮೀನುಗಾರರಿಗೆ ಆದ್ಯತೆ: ಸಚಿವ ದಿನೇಶ್ ಗುಂಡೂರಾವ್

Date:

Advertisements

ಕರಾವಳಿ ತೀರದ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಯಲ್ಲಿ ಸ್ಥಳೀಯ ಮೀನುಗಾರರಿಗೆ ಆದ್ಯತೆ ನೀಡುವ ಬಗ್ಗೆ ವಿಶೇಷ ಕ್ರಮ ವಹಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು.

ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಸಚಿವರನ್ನು ಭೇಟಿ ಮಾಡಿದ ನಿಯೋಗದ ಜೊತೆಗಿನ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಇನ್ನಷ್ಟು ವಿಸ್ತೃತ ಚರ್ಚೆಗಳನ್ನು ನಡೆಸಿ ಬಳಿಕ ಸ್ಥಳೀಯರೊಂದಿಗೆ ಕೂಡ ಸಮಾಲೋಚನೆ ನಡೆಸಲಾಗುವುದು ಎಂದು ತಿಳಿಸಿದರು.

1000886723

ಸಭೆಯಲ್ಲಿ ಉಪಸ್ಥಿತರಿದ್ದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಕೆ.ವಿ ರಾಜೇಂದ್ರ ಕುಮಾರ್ ಮಾತನಾಡಿ, 2024-2029ರ ಉದ್ದೇಶಿತ ರಾಜ್ಯದ ಪ್ರವಾಸೋದ್ಯಮ ಯೋಜನೆಯಲ್ಲಿ ದೊಡ್ಡಮಟ್ಟದಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕರಾವಳಿಯ ಬೀಚ್ ಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ನಿರ್ಧರಿಸಿದೆ. ಈ ಸಂದರ್ಭದಲ್ಲಿ ಸ್ಥಳೀಯರಿಗೆ ಉದ್ಯೋಗ ಹಾಗೂ ವ್ಯವಹಾರಕ್ಕೆ ಪೂರಕವಾಗುವಂತೆ ಹೆಚ್ಚಿನ ಚಿಂತನ ಮಂಥನ ನಡೆಸುವುದಾಗಿ ತಿಳಿಸಿದರು.

Advertisements

ಸಚಿವರನ್ನು ಭೇಟಿ ಮಾಡಿದ ನಿಯೋಗದಲ್ಲಿ ಉಪಸ್ಥಿತರಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಹೆಚ್, ಮೀನುಗಾರರ ಮುಖಂಡ ಚೇತನ್ ಬೇಂಗ್ರೆ, ಲಕ್ಷ್ಮಣ್ ಅವರು ಮಾತನಾಡಿ, ಪ್ರವಾಸೋದ್ಯಮ ಯೋಜನೆಯ ಅನುಷ್ಠಾನದ ಸಂದರ್ಭದಲ್ಲಿ ಸ್ಥಳೀಯ ಮೀನುಗಾರರಿಗೆ ಅನುಕೂಲವಾಗುವಂತೆ ವ್ಯವಹಾರ , ಉದ್ಯಮ ಹಾಗೂ ಉದ್ಯೋಗವನ್ನು ರೂಪಿಸುವ ಬಗ್ಗೆ ಮನವಿ ಮಾಡಿದರು.

1000886715
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X