ಖ್ಯಾತ ಗಮಕ ವ್ಯಾಖ್ಯಾನಕಾರ, ಆರೋಗ್ಯ ಸಚಿವರ ವಿಶೇಷಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಎ.ವಿ ಪ್ರಸನ್ನ ಅವರು ರಾಜ್ಯ ಸರ್ಕಾರದ ಕುಮಾರವ್ಯಾಸ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ತಮ್ಮ ಆಪ್ತ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಕೆ.ಎ.ಎಸ್ ಅಧಿಕಾರಿ ಪ್ರಸನ್ನ ಅವರಿಗೆ ಕುಮಾರವ್ಯಾಸ ಪ್ರಶಸ್ತಿ ಅರಸಿ ಬಂದ ಹಿನ್ನೆಲೆಯಲ್ಲಿ ಸಂತಸ ವ್ಯಕ್ಯಪಡಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ತಮ್ಮ ಕಚೇರಿಯಲ್ಲಿ ಪ್ರಸನ್ನ ಅವರನ್ನ ಸನ್ಮಾನಿಸಿ, ಅಭಿನಂದಿಸಿದರು.

ಈ ವೇಳೆ ಸಚಿವರ ಆಪ್ತ ಕಾರ್ಯದರ್ಶಿ ಹಿದಾಯತುಲ್ಲಾ ಸೇರಿದಂತೆ ಕಚೇರಿಯ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
