ಬೀದರ್‌ | ಎದೆಯ ಮೇಲೆ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ

Date:

ನೆಚ್ಚಿನ ರಾಜಕೀಯ ನಾಯಕ, ಸಿನಿಮಾ ನಟ-ನಟಿಯರ ಪ್ರೀತಿ, ಅಭಿಮಾನಕ್ಕಾಗಿ ಹಲವು ಅಭಿಮಾನಿಗಳು ತಮ್ಮ ಎದೆಯ ಮೇಲೆ ಅಚ್ಚೆ ಹಾಕಿಸಿಕೊಂಡ ಉದಾಹರಣೆಗಳಿವೆ. ಅಭಿಮಾನ ತೋರಿಸಿಕೊಳ್ಳಲು ಅಭಿಮಾನಿಗಳು ನಾನಾ ಕಸರತ್ತು ನಡೆಸುತ್ತಾರೆ. ಇಲ್ಲೊಬ್ಬ ಅಭಿಮಾನಿ ತಮ್ಮ ಎದೆಯ ಮೇಲೆ ನೆಚ್ಚಿನ ನಾಯಕರಾದ ಅರಣ್ಯ, ಪರಿಸರ ಹಾಗೂ ಜೈವಿಕ ಖಾತೆ ಸಚಿವ ಈಶ್ವರ ಖಂಡ್ರೆ ಅವರ ಭಾವಚಿತ್ರದ ಟ್ಯಾಟೂ ಹಾಕಿಸಿಕೊಂಡು ಗಮನ ಸೆಳೆದಿದ್ದಾರೆ.

ಬೀದರ್‌ ತಾಲೂಕಿನ ಕಮಠಾಣ ಶಿವಾಜಿ ಗಾಯಕವಾಡ ಎಂಬುವರು ತಮ್ಮ ಎದೆಯ ಎಡ ಭಾಗದ ಮೇಲೆ ಟ್ಯಾಟೂ ಹಾಕಿಸಿಕೊಂಡು ಗಮನ ಸೆಳೆದಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿಯಾದ ಅಭಿಮಾನಿ ಶಿವಾಜಿ ಗಾಯಕವಾಡ

ಟ್ಯಾಟೂ ಹಾಕಿಸಿಕೊಂಡ ಶಿವಾಜಿ ಗಾಯಕವಾಡ ಈದಿನ.ಕಾಮ್‌ ಜೊತೆಗೆ ಮಾತನಾಡಿ, “ಕಳೆದ ಹತ್ತು ವರ್ಷಗಳಿಂದ ನಾನು ಸಚಿವ ಈಶ್ವರ ಖಂಡ್ರೆಯವರ ಅಭಿಮಾನಿ, ಅಂದಿನಿಂದ ಅವರ ಭಾವಚಿತ್ರದ ಟ್ಯಾಟೂ ಹಾಕಿಸಿಕೊಳ್ಳಬೇಕೆಂಬ ಆಸೆಯಿತ್ತು. ಈಗ ಎದೆಯ ಮೇಲೆ ಟ್ಯಾಟೂ ಹಾಕಿಸಿಕೊಂಡು ಈಶ್ವರ ಖಂಡ್ರೆ ಅವರನ್ನು ಭೇಟಿಯಾಗಿ ತೋರಿಸಿದ್ದೇನೆ. ಇಂದು ಕಮಠಾಣ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಾಗರ್‌ ಖಂಡ್ರೆ ಅವರನ್ನು ಭೇಟಿಯಾಗಿ ಟ್ಯಾಟೂ ತೋರಿಸಿದ್ದೇನೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ತೆಲಂಗಾಣ | ಮಸೀದಿಯತ್ತ ಬಾಣದ ಸನ್ನೆ; ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ವಿರುದ್ಧ ಪ್ರಕರಣ ದಾಖಲು

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನಾನೊಬ್ಬ ಸಮಾಜ ಸೇವಕ, ಸಚಿವ ಈಶ್ವರ ಖಂಡ್ರೆ ಅವರು ನನ್ನ ಮತಕ್ಷೇತ್ರದವರು ಇಲ್ಲದಿದ್ದರೂ ಅವರ ಜನಪರ ಕೆಲಸಗಳು, ಜನರ ಸುಖ-ದುಃಖಗಳಲ್ಲಿ ಭಾಗಿಯಾಗಿ ಸ್ಪಂದಿಸುವ ಅವರ ಒಳ್ಳೆಯ ಗುಣಗಳನ್ನು ಮೆಚ್ಚಿ ಅಭಿಮಾನಿಯಾಗಿದ್ದೇನೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಈಶ್ವರ ಖಂಡ್ರೆ ಅವರ ಪುತ್ರ ಸಾಗರ್‌ ಖಂಡ್ರೆಯವರು ಗೆದ್ದೇ ಗೆಲ್ಲುತ್ತಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಮೇ 30ರಂದು ‘ಹೋರಾಟದ ನಡಿಗೆ, ಹಾಸನದ ಕಡೆಗೆ’; ಬೃಹತ್ ಪ್ರತಿಭಟನೆ

ಪೆನ್‌ಡ್ರೈವ್ ರಾಸಲೀಲೆ ಪ್ರಕರಣದಲ್ಲಿ ಸಿಲುಕಿ, ದೇಶ ಬಿಟ್ಟು ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್...

ಬೆಂ. ಗ್ರಾ | ಸಾರ್ವಜನಿಕವಾಗಿ ಧೂಮಪಾನ ತಡೆಗೆ ಸ್ಟಾಪ್ ಟ್ಯೊಬ್ಯಾಕೋ ಮೊಬೈಲ್ ಆಪ್‌ನಲ್ಲಿ ದೂರು ನೀಡಿ:ಜಿಲ್ಲಾಧಿಕಾರಿ ಶಿವಶಂಕರ

ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಭಿತ್ತಿ ಪತ್ರಗಳು, ನಾಮಫಲಕಗಳನ್ನು ಶಾಲೆ-ಕಾಲೇಜು,...

ಜುಲೈ 5ರಂದು ಬಡ ಮಹಿಳೆಯರ ಖಾತೆಗೆ 8,500 ರೂ ಜಮೆ: ರಾಹುಲ್ ಗಾಂಧಿ

ಮಹಾಲಕ್ಷ್ಮೀ ಯೋಜನೆ ದೇಶದಲ್ಲಿರುವ ಬಡ ಮಹಿಳೆಯರ ಬ್ಯಾಂಕ್ ಖಾತೆಗೆ ಜುಲೈ 5ರಂದು...

ಗದಗ | ಮುಖ್ಯ ರಸ್ತೆ ದುರಸ್ಥಿ ಮಾಡುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹ

ಗದಗ ಮುಖ್ಯ ರಸ್ತೆ ರೈಲ್ವೆ ಇಲಾಖೆಗೆ ಸಂಬಂಧಪಟ್ಟಿದ್ದು ಈ ರಸ್ತೆಯ ದುರಸ್ತಿ...