ಆರಗ ಜ್ಞಾನೇಂದ್ರರಿಂದ ಕಲ್ಯಾಣ ಕರ್ನಾಟಕದ ಜನತೆಗೆ ಅವಮಾನ: ಈಶ್ವರ ಖಂಡ್ರೆ ಕಿಡಿ

Date:

  • ‘ಗಾಂಧೀಜಿ ಹುಟ್ಟಿದ ನಾಡಿನಲ್ಲಿ ವರ್ಣಭೇದ ನೀತಿ ಪೋಷಿಸುತ್ತಿರುವ ಬಿಜೆಪಿ’
  • ಕೇಂದ್ರದ ಮೇಲೆ ಒತ್ತಡ ಹೇರಿ ಕಸ್ತೂರಿ ರಂಗನ್ ವರದಿ ರದ್ದುಪಡಿಸಿ: ಆಗ್ರಹ

ದಕ್ಷಿಣ ಆಫ್ರಿಕಾದಲ್ಲಿ ವರ್ಣಭೇದ ನೀತಿಯ ವಿರುದ್ಧ ಹೋರಾಡಿದ ಮಹಾತ್ಮಾ ಗಾಂಧೀಜಿ ಹುಟ್ಟಿದ ದೇಶದಲ್ಲಿ ಬಿಜೆಪಿ ವರ್ಣಭೇದ ನೀತಿಯನ್ನು ಪೋಷಿಸುತ್ತಿರುವುದು ನಿಜಕ್ಕೂ ದುರ್ದೈವ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಸಿ ಈಶ್ವರ ಖಂಡ್ರೆ ವಿಷಾದ ವ್ಯಕ್ತಪಡಿಸಿದ್ದಾರೆ.

- Advertisement -

“ನಮ್ಮ ಭಾಗದ ಜನರು ಸುಟ್ಟು ಕರಕಲಾಗಿರುತ್ತಾರೆ, ಖರ್ಗೆ ಅವರನ್ನು ನೋಡಿದರೆ ಇದು ಗೊತ್ತಾಗುತ್ತದೆ” ಎಂದು ಹೇಳುವ ಮೂಲಕ ಆರಗ ಜ್ಞಾನೇಂದ್ರ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮತ್ತು ದಲಿತ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಷ್ಟೇ ಅಲ್ಲದೆ ರಾಜ್ಯದ ಅದರಲ್ಲೂ ಇಡೀ ಕಲ್ಯಾಣ ಕರ್ನಾಟಕದ ಜನತೆಗೆ ಅವಮಾನ ಮಾಡಿದ್ದಾರೆ ಇದು ಮಾಜಿ ಸಚಿವರ ಘನತೆಗೆ ಶೋಭೆ ತರುವುದಿಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮ ಒಂದರ ಸಂವಾದದ ವೇಳೆ ಕೆಲವರು ಕಸ್ತೂರಿರಂಗನ್ ವರದಿ ಕುರಿತಂತೆ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ತಾವು ಯಾವುದೇ ಹಂತದಲ್ಲೂ “ಕಸ್ತೂರಿ ರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ’’ ಎಂದು ತಿಳಿಸಿರುವುದಿಲ್ಲ. ಇದು ತಿರುಚಿದ ಹೇಳಿಕೆ. ಈ ಬಗ್ಗೆ ಭಾನುವಾರವೇ ಬೀದರ್‌ನಲ್ಲಿ ನಡೆದ ಪತ್ರಿಕಾ ದಿನಾಚರಣೆಯಲ್ಲಿ ತಾವು ಸ್ಪಷ್ಟೀಕರಣ ನೀಡಿದ್ದೇನೆ. ಸೋಮವಾರ ಮತ್ತೊಮ್ಮೆ ಸ್ಪಷ್ಟೀಕರಣ ಹೇಳಿಕೆ ಬಿಡುಗಡೆ ಮಾಡಿದ್ದು, ಇದು ಎಲ್ಲ ಮಾಧ್ಯಮದಲ್ಲೂ ಪ್ರಕಟವಾಗಿದೆ. ಹೀಗಿದ್ದೂ, ಬಿಜೆಪಿ ರಾಜಕೀಯ ದುರ್ಲಾಭಕ್ಕಾಗಿ ಮಂಗಳವಾರ ಪ್ರತಿಭಟನೆ ನಡೆಸಿರುವುದು ಅರ್ಥಹೀನ” ಎಂದರು.

“ಆರಗ ಜ್ಞಾನೇಂದ್ರ ಅವರು ನಮ್ಮ ಕಲ್ಯಾಣ ಕರ್ನಾಟಕದಲ್ಲಿ ಮರಗಳಿಲ್ಲ ನೆರಳಿಲ್ಲ ನಮ್ಮ ತಲೆಕೂದಲೇ ನೆರಳು ಎಂದೆಲ್ಲಾ ತುಚ್ಛವಾಗಿ ಮಾತನಾಡಿರುವುದು ಅವರ ಕೀಳು ಅಭಿರುಚಿಗೆ ಹಿಡಿದ ಕನ್ನಡಿಯಾಗಿದೆ. ಗೃಹ ಮಂತ್ರಿಯಾಗಿ ಸೇವೆ ಸಲ್ಲಿಸಿದ ವ್ಯಕ್ತಿ ಮನುಷ್ಯರ ಬಣ್ಣದ ಮೇಲೆ ಟೀಕೆ ಮಾಡಿ, ಈ ರೀತಿ ನಾಡಿನ ಒಂದು ಕಾಲು ಕೋಟಿ ಜನತೆಗೆ ಅವಮಾನ ಮಾಡಿರುವುದು ನಿಜಕ್ಕೂ ದುರ್ದೈವ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಈ ಹತ್ಯೆಗಳಲ್ಲಿ ಮೋದಿ- ಯೋಗಿ- ಮೀಡಿಯಾ ಸಮಾನ ಪಾಲುದಾರರು

“ಆರಗ ಜ್ಞಾನೇಂದ್ರ ಅವರು ಮಲ್ಲಿಕಾರ್ಜುನ ಖರ್ಗೆ ಹಾಗೂ ತಮಗಷ್ಟೇ ಅಲ್ಲದೆ ಇಡೀ ಕಲ್ಯಾಣ ಕರ್ನಾಟಕದ ಜನತೆಯ ಬೇಷರತ್ ಕ್ಷಮೆ ಕೋರಬೇಕು. ತಾವು ಅರಣ್ಯ ಇಲ್ಲದ ಪ್ರದೇಶದಿಂದ ಬಂದಿರಬಹುದು. ಆದರೆ ಹಸಿರಿನ ಮಹತ್ವ ತಮಗೆ ತಿಳಿದಿದೆ. ಅರಣ್ಯ ಸಚಿವನಾಗಿ ರಾಜ್ಯದ ಹಸಿರು ವ್ಯಾಪ್ತಿಯನ್ನು ಹೆಚ್ಚಿಸಲು ಶಕ್ತಿಮೀರಿ ಶ್ರಮಿಸುತ್ತಿದ್ದು, ಕಲ್ಯಾಣ ಕರ್ನಾಟಕವನ್ನು ಹಸಿರುಮಯಗೊಳಿಸಲು ಮುಂದಾಗಿದ್ದೇನೆ. ಈ ಕಾರ್ಯವನ್ನು ಬಿಜೆಪಿ ಸರ್ಕಾರ ಮಾಡಿರಲಿಲ್ಲ” ಎಂದಿದ್ದಾರೆ.

“ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರವೇ ಇದೆ ಜೊತೆಗೆ ರಾಜ್ಯದಲ್ಲೂ ಬಿಜೆಪಿ ಸರ್ಕಾರ ಇತ್ತು ಆಗ ಇವರು ಏಕೆ ಕಸ್ತೂರಿರಂಗನ್ ವರದಿಯನ್ನು ರದ್ದು ಮಾಡಲಿಲ್ಲ ಎಂದು ಪ್ರಶ್ನಿಸಿರುವ ಈಶ್ವರ ಖಂಡ್ರೆ, ಈಗಲೂ ಮಲೆನಾಡಿನ ಮತ್ತು ಕರಾವಳಿಯ ಬಿಜೆಪಿ ಶಾಸಕರು, ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಕಸ್ತೂರಿರಂಗನ್ ವರದಿಯನ್ನು ರದ್ದುಪಡಿಸಲಿ” ಎಂದು ಸವಾಲು ಹಾಕಿದ್ದಾರೆ.

“ಕೇಂದ್ರ ಸರ್ಕಾರವೇ ನಿವೃತ್ತ ಐಎಫ್ಎಸ್ ಅಧಿಕಾರಿ ಸಂಜಯ್ ಕುಮಾರ್ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ ಎಲ್ಲ ಪಶ್ಚಿಮ ಘಟ್ಟದ ರಾಜ್ಯಗಳಿಗೆ ಅಧ್ಯಯನಕ್ಕೆ ಕಳಿಸಿದೆ, ವರದಿ ಜಾರಿಗೆ ಪಟ್ಟು ಹಿಡಿದಿರುವುದು ಕೇಂದ್ರ ಸರ್ಕಾರವೇ ಹೊರತು ರಾಜ್ಯ ಸರ್ಕಾರವಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...