ಪ್ರಧಾನಮಂತ್ರಿ ಗ್ರಾಮೀಣ ಅವಾಸ್ ಯೋಜನೆಗೆ ವಾರದಲ್ಲಿ ಫಲಾನುಭವಿಗಳ ಪಟ್ಟಿ ಕೊಡಲು ಸಚಿವ ಜಮೀರ್ ಸೂಚನೆ

Date:

  • ಗ್ರಾಮಸಭೆ, ಶಾಸಕರ ಸಮಿತಿಯಿಂದ 2.90 ಲಕ್ಷ ಫಲಾನುಭವಿಗಳ ಆಯ್ಕೆ ಆಗಬೇಕಿದೆ
  • ಜುಲೈ 20 ಕ್ಕೆ ಫಲಾನುಭವಿಗಳ ಪಟ್ಟಿ ಅಂತಿಮಗೊಳಿಸಲು ಡೆಡ್ ಲೈನ್ ನೀಡಲಾಗಿದೆ

ಪ್ರಧಾನಮಂತ್ರಿ ಗ್ರಾಮೀಣ ಅವಾಜ್ ಯೋಜನೆಯಡಿ ಗ್ರಾಮೀಣ ಭಾಗದ ವಸತಿ ರಹಿತರಿಗೆ ಮನೆ ಕಟ್ಟಿಸಿಕೊಡುವ ಯೋಜನೆಗೆ ಗ್ರಾಮಸಭೆಗಳಿಂದ ಒಂದು ವಾರದಲ್ಲಿ ಫಲಾನುಭವಿಗಳ ಪಟ್ಟಿ ಅಂತಿಮಗೊಳಿಸಿ ಕಳುಹಿಸುವಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ನಿರ್ದೇಶನ ನೀಡಿದ್ದಾರೆ.

ಕೇಂದ್ರ ಪುರಸ್ಕೃತ ಯೋಜನೆಯಡಿಯಲ್ಲಿ ರಾಜ್ಯಕ್ಕೆ 1.41 ಲಕ್ಷ ಮನೆ ಹಂಚಿಕೆಯಾಗಿದ್ದು ಇದುವರೆಗೂ 63 ಸಾವಿರ ಮನೆಗೆ ಫಲಾನುಭವಿಗಳ ಆಯ್ಕೆಯಾಗಿದ್ದು ಉಳಿದ 78 ಸಾವಿರ ಮನೆಗಳಿಗೆ ಫಲಾನುಭವಿಗಳ ಆಯ್ಕೆ ಮಾಡಬೇಕಾಗಿದೆ. ಸಂಬಂಧಪಟ್ಟ ಶಾಸಕರು ಈ ಬಗ್ಗೆ ಗಮನಹರಿಸಿ ತಕ್ಷಣ ಗ್ರಾಮ ಸಭೆಗಳಿಂದ ಫಲಾನುಭವಿಗಳ ಪಟ್ಟಿ ಅಂತಿಮಗೊಳಿಸಲು ಖುದ್ದು ಆಸಕ್ತಿ ವಹಿಸಬೇಕು ಎಂದು ಹೇಳಿದ್ದಾರೆ.

ಈಗಾಗಲೇ ಯೋಜನೆಯ ಫಲಾನುಭವಿಗಳ ಆಯ್ಕೆಗೆ ಎರಡು ಬಾರಿ ಗಡುವು ವಿಸ್ತರಣೆ ಮಾಡಿದ್ದರೂ ಪಟ್ಟಿ ನೀಡಿಲ್ಲ. ಇದೀಗ ಜುಲೈ 20 ಕ್ಕೆ ಪಟ್ಟಿ ಅಂತಿಮಗೊಳಿಸಲು ಡೆಡ್ ಲೈನ್ ನೀಡಲಾಗಿದೆ. ಹೀಗಾಗಿ ಇದುವರೆಗೆ ಪಟ್ಟಿ ಅಂತಿಮಗೊಳಿಸದ ಶಾಸಕರು ಕೂಡಲೇ ಕ್ರಮ ವಹಿಸಬೇಕು. ಇಲ್ಲದಿದ್ದರೆ ಯೋಜನೆ ಕೇಂದ್ರಕ್ಕೆ ವಾಪಸ್ ಹೋಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ಎಂಬ ಗ್ರೇಟ್ ಇಂಡಿಯನ್ ವಾಶಿಂಗ್ ಮಶೀನ್!

ಗ್ರಾಮೀಣ ಭಾಗದಲ್ಲಿ ವಸತಿ ರಹಿತರ ಪಟ್ಟಿ ಸಿದ್ದಪಡಿಸಿ ಯೋಜನೆಗೆ ಅರ್ಹತೆ ಪಡೆದಿರುವವರನ್ನು ಗುರುತಿಸಲಾಗಿದೆ. ಅ ಪಟ್ಟಿಯಲ್ಲಿ ಹಂಚಿಕೆಗೆ ನಿಗದಿಯಾಗಿರುವ ಮನೆಗಳ ಸಂಖ್ಯೆಯಷ್ಟು ಫಲಾನುಭವಿಗಳ ಆಯ್ಕೆ ಆಗಬೇಕಾಗಿದೆ. ಗ್ರಾಮಸಭೆಗಳಿಗೆ ಈ ಕುರಿತು ಶಾಸಕರು ಸೂಚನೆ ನೀಡಿ ಒಂದು ವಾರದಲ್ಲಿ ಪಟ್ಟಿ ಅಂತಿಮಗೊಳಿಸಿದರೆ ಯೋಜನೆಯ ಲಾಭ ರಾಜ್ಯದ ವಸತಿ ರಹಿತರಿಗೆ ಸಿಗುತ್ತದೆ. ಆನ್ ಲೈನ್ ಮೂಲಕವೇ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಸಚಿವರು ಹೇಳಿದ್ದಾರೆ.

ಈ ಯೋಜನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ 60:40 ಅನುದಾನ ನೀಡಲಿದೆ. ಸಾಮಾನ್ಯ ವರ್ಗಕ್ಕೆ ಒಂದು ಲಕ್ಷದ ಮೂರು ಸಾವಿರ ರೂ. ಎಸ್ಸಿ ಎಸ್ಟಿ ಸಮುದಾಯಕ್ಕೆ ಒಂದು ಲಕ್ಷ ಇಪ್ಪತ್ತು ಸಾವಿರ ರೂ. ಸಬ್ಸಿಡಿ ಸಿಗಲಿದ್ದು, 150 ರಿಂದ 700 ಚದರಡಿವರೆಗೆ ವೈಯಕ್ತಿಕ ಮನೆ ನಿರ್ಮಾಣ ಮಾಡಿ ಕೊಡಲಾಗುವುದು ಎಂದು ಸಚಿವ ಜಮೀರ್ ಅಹಮದ್ ಖಾನ್ ಮಾಹಿತಿ ನೀಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರದಲ್ಲಿ ಕಾಂಗ್ರೆಸ್ ಬಂದ್ರೆ ಮನೆಯ ಯಜಮಾನಿಗೆ ರೂ. 1 ಲಕ್ಷ ಜಮೆ, ರೈತರ ಸಾಲ ಮನ್ನಾ: ಸಿಎಂ ಸಿದ್ದರಾಮಯ್ಯ

"ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ....

ಮೋದಿ ಸುಳ್ಳುಗಳು: ಭಾಗ 2 | ಬೇಟಿ ಬಚಾವೋ ಬೇಟಿ ಪಡಾವೋ ಎನ್ನುವ ಮೋದಿ ಮಹಿಳೆಯರ ರಕ್ಷಣೆಗೆ ನಿಂತಿದ್ದಾರೆಯೇ?

ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯದ ಮೂವರು ಮಹಿಳೆಯರನ್ನು ಬೆತ್ತಲುಗೊಳಿಸಿ, ಲೈಂಗಿಕ ದೌರ್ಜನ್ಯ...

ಬೆಂಗಳೂರು | ತಾಯಿಯ ಫೋಟೋ ವೈರಲ್ ಮಾಡುವುದಾಗಿ ಬೆದರಿಸಿ ಮಗಳ ನಗ್ನ ಫೋಟೋ ಪಡೆದ ಕಾಮುಕ

ಅಶ್ಲೀಲವಾಗಿ ಎಡಿಟ್ ಮಾಡಿದ ತಾಯಿ ಫೋಟೋಗಳನ್ನು ಮಗಳಿಗೆ ಕಳುಹಿಸಿ ವೈರಲ್ ಮಾಡುವುದಾಗಿ...

ಹಾಸನ ಪೆನ್‌ಡ್ರೈವ್ ಪ್ರಕರಣ | ಎಸ್‌ಐಟಿ ತಂಡದ ಮುಖ್ಯಸ್ಥರಾಗಿ ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ನೇಮಕ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ವಿಶೇಷ ತನಿಖಾ...