ಚಾಮರಾಜನಗರ | ‘ಅಕ್ಕ ಪಡೆ’ ಗಸ್ತು ವಾಹನಕ್ಕೆ ಚಾಲನೆ ನೀಡಿದ ಸಚಿವ ಕೆ ವೆಂಕಟೇಶ್

Date:

ಚಾಮರಾಜನಗರದ ಭುವನೇಶ್ವರಿ (ಪಚ್ಚಪ್ಪ) ವೃತ್ತದಲ್ಲಿ ಜಿಲ್ಲಾ ಪೊಲೀಸ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಶು ಸಂಗೋಪನೆ, ರೇಷ್ಮೆ ಸಚಿವ ಹಾಗು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ‘ಅಕ್ಕ ಪಡೆ’ ಗಸ್ತು ವಾಹನವನ್ನು ಪೊಲೀಸ್ ಇಲಾಖೆಗೆ ಹಸ್ತಾಂತರಿಸಿ ವಾಹನ ಕಾರ್ಯಾಚರಣೆಗೆ ಹಸಿರು ನಿಶಾನೆ ತೋರಿದರು.

- Advertisement -

ಸಚಿವ ಕೆ. ವೆಂಕಟೇಶ್ ಮಾತನಾಡಿ, “ಮಹಿಳೆಯರು ಮತ್ತು ಮಕ್ಕಳ ವಿರುದ್ಧ ನಡೆಯುವ ದೌರ್ಜನ್ಯಗಳನ್ನು ಪರಿಣಾಮಕಾರಿಯಾಗಿ ತಡೆಯುವ ಸದುದ್ಧೇಶದಿಂದ ಸರ್ಕಾರವು ಯೋಜನೆ ಜಾರಿಗೊಳಿಸಿದೆ. ಮಹಿಳೆಯರು ಮತ್ತು ಮಕ್ಕಳ ವಿರುದ್ಧ ನಡೆಯುವ ಲೈಂಗಿಕ ಕಿರುಕುಳ, ಅತ್ಯಾಚಾರ, ಮಾನವ ಕಳ್ಳಸಾಗಣೆ, ಬಾಲ್ಯವಿವಾಹ, ವರದಕ್ಷಿಣೆ ಕಿರುಕುಳದಂತಹ ದೌರ್ಜನ್ಯಗಳನ್ನು ತಡೆಯಲು ಅಕ್ಕ ಪಡೆ ಗಸ್ತು ವಾಹನವು ನೆರವಾಗಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇಂದಿನ ಆಧುನಿಕ, ತಂತ್ರಜ್ಞಾನ ಯುಗದಲ್ಲಿ ಮಹಿಳೆಯರು, ಮಕ್ಕಳ ವಿರುದ್ಧ ನಡೆಯುವ ದೌರ್ಜನ್ಯಗಳನ್ನು ತಡೆದು ಕಾನೂನು ಅರಿವು ಮೂಡಿಸಿ ಸಂಕಷ್ಟದಲ್ಲಿರುವವರಿಗೆ ತಕ್ಷಣವೇ ರಕ್ಷಣೆ ಮತ್ತು ನೆರವು ನೀಡಲು ಅಕ್ಕ ಪಡೆ ಜಿಲ್ಲೆಯಲ್ಲಿ ಇಂದಿನಿಂದ ಕಾರ್ಯಾಚರಣೆ ಆರಂಭಿಸಲಿದೆ. ವಾಹನದಲ್ಲಿ ಮಹಿಳಾ ಪೊಲೀಸ್ ಇರಲಿದ್ದು, ಗೃಹರಕ್ಷಕ ದಳ ಸಿಬ್ಬಂದಿ ಪೊಲೀಸರಿಗೆ ನೆರವು ನೀಡಲಿದ್ದಾರೆ. ಗಸ್ತು ವಾಹನವು ಪ್ರತಿದಿನ ಶಾಲಾ ಕಾಲೇಜು, ಬಸ್, ರೈಲು ನಿಲ್ದಾಣ, ಬಾಲಕಿಯರ ವಿದ್ಯಾರ್ಥಿನಿಲಯ, ಮಾರುಕಟ್ಟೆ, ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಿ ಮಹಿಳೆಯರು ಮತ್ತು ಮಕ್ಕಳ ವಿರುದ್ಧ ನಡೆಯುವ ದೌರ್ಜನ್ಯಗಳನ್ನು ತಡೆಯಲು ಪ್ರಮುಖ ಪಾತ್ರ ವಹಿಸಲಿದೆ ಎಂದು ತಿಳಿಸಿದರು.

ಅಕ್ಕ ಪಡೆಯು ಶಾಲಾ ಕಾಲೇಜುಗಳಲ್ಲಿ ದೌರ್ಜನ್ಯಗಳ ಕುರಿತು ಮುಂಜಾಗ್ರತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವುದು, ಫೋಕ್ಸೋ ಹಾಗೂ ಸೈಬರ್ ಅಪರಾಧ ಮತ್ತು ಮಾದಕ ವಸ್ತುಗಳ ಸೇವನೆ ಕುರಿತ ದುಷ್ಪರಿಣಾಮಗಳ ಬಗ್ಗೆ ಮಹಿಳೆಯರು ಮತ್ತು ಮಕ್ಕಳಲ್ಲಿ ಅರಿವು ಮೂಡಿಸಿ ಧೈರ್ಯ ತುಂಬಲಿದೆ. ವಾರದಲ್ಲಿ ಒಂದು ದಿನ ಜಿಲ್ಲೆಯ ಇತರೆ ತಾಲೂಕುಗಳ ವ್ಯಾಪ್ತಿಯಲ್ಲಿ ಸಂಚರಿಸುವ ವಾಹನವು ಅಲ್ಲಿನ ಜನಸಂದಣಿ ಪ್ರದೇಶಗಳಲ್ಲಿ ನಡೆಯುವ ದೌರ್ಜನ್ಯಗಳನ್ನು ತಡೆಯುವ ಮೂಲಕ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಲಿದೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಜಶೇಖರ ನೀರಮಾನ್ವಿ ಅವರ ಕತೆ | ಹಂಗಿನರಮನೆಯ ಹೊರಗೆ

ಕಾರ್ಯಕ್ರಮದಲ್ಲಿ ಶಾಸಕ ಹಾಗೂ ಎಂ.ಎಸ್.ಐ.ಎಲ್ ಅಧ್ಯಕ್ಷ ಸಿ. ಪುಟ್ಟರಂಗಶೆಟ್ಟಿ, ಶಾಸಕ ಎಚ್.ಎಂ. ಗಣೇಶ್ ಪ್ರಸಾದ್, ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಚ್.ಆರ್. ಸುರೇಶ್, ಡಿ.ವೈ.ಎಸ್.ಪಿ. ಸ್ನೇಹರಾಜ್, ಧರ್ಮೇಂದ್ರ, ಪೊಲೀಸ್ ಅಧಿಕಾರಿಗಳು ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...