ಚಾಮರಾಜನಗರ | ಕಾಗಲವಾಡಿಯಲ್ಲಿ ಸ್ತ್ರೀ ಸೌಖ್ಯ ಕ್ಯಾನ್ಸರ್ ತಪಾಸಣಾ ಶಿಬಿರ ವೀಕ್ಷಿಸಿದ ಸಚಿವ ಕೆ. ವೆಂಕಟೇಶ್

Date:

ಮಹಿಳೆಯರಲ್ಲಿ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಿ ಆರಂಭಿಕ ಹಂತದಲ್ಲಿಯೇ ರೋಗ ಪತ್ತೆ ಮಾಡಿ ಸೂಕ್ತ ಚಿಕಿತ್ಸೆ ನೀಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುತ್ತಿರುವ ‘ಸ್ತ್ರೀ ಸೌಖ್ಯ’ ಕಾರ್ಯಕ್ರಮದಡಿ ನಡೆದ ಕ್ಯಾನ್ಸರ್ ತಪಾಸಣಾ ಶಿಬಿರಕ್ಕೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಭೇಟಿ ನೀಡಿ ವೀಕ್ಷಣೆ ನಡೆಸಿದರು.

- Advertisement -

ಚಾಮರಾಜನಗರ ತಾಲ್ಲೂಕಿನ ಕಾಗಲವಾಡಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಬೆಂಗಳೂರಿನ ಕಿದ್ವಾಯಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಆಂಕಲಜಿ ಸಹಯೋಗದಲ್ಲಿ ಈ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಶಿಬಿರಕ್ಕೆ ಬೆಳಿಗ್ಗೆಯೇ ಭೇಟಿ ನೀಡಿದ ಸಚಿವರು, ಜಿಲ್ಲೆಯಲ್ಲಿ ಇದುವರೆಗೆ ಎಷ್ಟು ಕಡೆ ಇಂತಹ ಶಿಬಿರಗಳನ್ನು ಆಯೋಜಿಸಲಾಗಿದೆ, ಎಷ್ಟು ಮಂದಿ ನೋಂದಣಿ ಮಾಡಿಕೊಂಡಿದ್ದಾರೆ, ತಪಾಸಣೆ ಹಾಗೂ ಚಿಕಿತ್ಸೆಗೆ ಒಳಗಾದವರ ಸಂಖ್ಯೆ ಎಷ್ಟು ಎಂಬ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಈ ವೇಳೆ ಜಿಲ್ಲಾಧಿಕಾರಿ ಶ್ರೀರೂಪ ಮಾಹಿತಿ ನೀಡಿ, ಮಹಿಳೆಯರಿಗೆ ಗರ್ಭಕಂಠ ಕ್ಯಾನ್ಸರ್ ಹಾಗೂ ಸ್ತನ ಕ್ಯಾನ್ಸರ್ ತಪಾಸಣೆ ನಡೆಸಲಾಗುತ್ತಿದೆ. ಪುರುಷರಿಗಾಗಿ ಬಾಯಿ ಕ್ಯಾನ್ಸರ್ ತಪಾಸಣೆಯನ್ನೂ ಮಾಡಲಾಗುತ್ತಿದೆ ಎಂದು ತಿಳಿಸಿದರು. ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಮೊಬೈಲ್ ಕ್ಯಾನ್ಸರ್ ತಪಾಸಣಾ ಘಟಕ ‘ಪಿಂಕ್ ಬಸ್’ ಮೂಲಕ ವೈದ್ಯರು ಹಾಗೂ ಸಿಬ್ಬಂದಿ ಸ್ಥಳಕ್ಕೇ ಬಂದು ಪರೀಕ್ಷೆ ನಡೆಸುತ್ತಿದ್ದಾರೆ. ಘಟಕದಲ್ಲಿಯೇ ಅಗತ್ಯ ವೈದ್ಯಕೀಯ ಪರೀಕ್ಷಾ ಸೌಲಭ್ಯಗಳಿವೆ ಎಂದು ವಿವರಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ ಅವರು ಮಾತನಾಡಿ, ಇದುವರೆಗೆ ನಡೆದಿರುವ ತಪಾಸಣಾ ಶಿಬಿರಗಳು, ಜನರಿಗೆ ದೊರೆಯುತ್ತಿರುವ ವೈದ್ಯಕೀಯ ಪರೀಕ್ಷೆ ಹಾಗೂ ಔಷಧೋಪಚಾರಗಳ ಕುರಿತು ಸಚಿವರಿಗೆ ವಿವರ ನೀಡಿದರು. ಕ್ಯಾನ್ಸರ್ ತಪಾಸಣೆಗೆ ಚಾಮರಾಜನಗರ ಜಿಲ್ಲೆಯಲ್ಲಿ ವಿಶೇಷವಾಗಿ ರೂಪಿಸಿರುವ ‘ಸ್ತ್ರೀ ಸೌಖ್ಯ’ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಬೇಕು. ಜಿಲ್ಲೆಯ ಜನತೆಗೆ ಹೆಚ್ಚಿನ ಅನುಕೂಲವಾಗಬೇಕು ಎಂದು ಸಚಿವರು ಆಶಿಸಿದರು.

ಈ ಸುದ್ದಿ ಓದಿದ್ದೀರಾ?ಹನೂರು | ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ಚಿರತೆ ದಾಳಿ: 10 ವರ್ಷದ ಬಾಲಕ ದುರ್ಮರಣ

ಬಳಿಕ ಕಾಗಲವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಸಚಿವರು, ಅಲ್ಲಿ ಜನರಿಗೆ ನೀಡಲಾಗುತ್ತಿರುವ ಆರೋಗ್ಯ ಸೇವೆಗಳ ಕುರಿತು ಪರಿಶೀಲನೆ ನಡೆಸಿದರು. ವೈದ್ಯರು ಹಾಗೂ ಸಿಬ್ಬಂದಿಯೊಂದಿಗೆ ಮಾತನಾಡಿ ಪ್ರತಿನಿತ್ಯ ಆಸ್ಪತ್ರೆಗೆ ಭೇಟಿ ನೀಡುವ ರೋಗಿಗಳ ಸಂಖ್ಯೆ, ನೀಡಲಾಗುತ್ತಿರುವ ಚಿಕಿತ್ಸೆ ಹಾಗೂ ಔಷಧೋಪಚಾರಗಳ ಬಗ್ಗೆ ಮಾಹಿತಿ ಪಡೆದರು. ಆರೋಗ್ಯ ಕೇಂದ್ರಕ್ಕೆ ಬಂದಿದ್ದ ಸಾರ್ವಜನಿಕರೊಂದಿಗೂ ಸಚಿವರು ಮಾತನಾಡಿ, ಅಲ್ಲಿನ ವೈದ್ಯಕೀಯ ಸೇವೆಗಳ ಕುರಿತು ಅಭಿಪ್ರಾಯ ಸಂಗ್ರಹಿಸಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?ಶೋಷಿತರ ಗಟ್ಟಿ ಧ್ವನಿ ಎನ್ ರಾಚಯ್ಯ ‘ಸಮಾನತೆಯ ಸಮಾಜʼದ ಕನಸುಗಾರ….

ಭೇಟಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ತಹಶೀಲ್ದಾರ್ ಗಿರಿಜಾ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿವಾರಣಾಧಿಕಾರಿ ಡಾ. ಪಿ. ಚಂದ್ರಶೇಖರ್, ಜಿಲ್ಲಾ ಕಾರ್ಯಕ್ರಮ ಅಭಿವೃದ್ಧಿ ಅಧಿಕಾರಿ ಡಾ. ರಾಜೇಶ್ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಜನಾರ್ಧನ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಸಂಘದ ಅಧ್ಯಕ್ಷರ ಹಾಗೂ ಅಡಳಿತ ಮಂಡಳಿ ವಿರುದ್ದ ಕಾನೂನು ಕ್ರಮ ಜರುಗಿಸಿ:ಜಿಲ್ಲಾ ನಿರ್ದೇಶಕ ಎನ್.ಸುಕುಮಾರ್

ಕೆಪಿಟಿಸಿಎಲ್ ಸಂಸ್ಥೆಯಲ್ಲಿ ಸರ್ಕಾರಿ ನೌಕರರಾಗಿ ಸೇವೆ ಸಲ್ಲಿಸುತ್ತಿರುವವರೇ ಉಚ್ಚ ನ್ಯಾಯಾಲಯ ಹಾಗೂ...

ಮಂಗಳೂರು | ಕಾರಿಡಾರ್‌ ಗೋಡೆ ಕುಸಿದು ಐವರು ವಿದ್ಯಾರ್ಥಿಗಳಿಗೆ ಗಾಯ, ಓರ್ವ ಗಂಭೀರ

ಮಂಗಳೂರಿನ ಪಾಂಡೇಶ್ವರ ಸಮೀಪದ ಎಮ್ಮೆಕೆರೆ ಕ್ರಾಸ್ ಬಳಿಯ ರಾಮಲಕ್ಷ್ಮೀ ಹಾಲ್ ಸಭಾಭವನದಲ್ಲಿ...

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...