ಚಾಮರಾಜನಗರ | ಬಿಳಿಗಿರಿರಂಗನ ಬೆಟ್ಟದ ರೇಷ್ಮೆ ಕೃಷಿ ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಕೆ. ವೆಂಕಟೇಶ್

Date:

Advertisements

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಬೆಳೆಗಾರರನ್ನು (ನೇಕಾರರು) ಪ್ರೋತ್ಸಾಹಿಸಿ, ರೇಷ್ಮೆ ಉತ್ಪಾದನೆ ಹೆಚ್ಚಿಸುವ ಸಲುವಾಗಿ ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಬಿಳಿಗಿರಿರಂಗನ ಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಿಳಿಗಿರಿರಂಗನ ಬೆಟ್ಟದ ರೇಷ್ಮೆ ಕೃಷಿ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ರೇಷ್ಮೆ ಕೃಷಿ ಕೇಂದ್ರ ಹಾಗೂ ಕೇಂದ್ರದ ಅವರಣ ಸ್ಥಳ ಪರಿಶೀಲನೆ ನಡೆಸಿ ಅಲ್ಲಿನ ಕಾರ್ಯವೈಖರಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಬೆಟ್ಟದಲ್ಲಿ ರೇಷ್ಮೆ ಕೃಷಿ ಕೇಂದ್ರದ ಒಟ್ಟು 38 ಎಕರೆ ವಿಸ್ತೀರ್ಣದ ಜಾಗ ಒತ್ತುವರಿಯಾಗಿದೆ. ಕಾಡು ಪ್ರಾಣಿಗಳ ಹಾವಳಿಯು ಇದೆ. ಕಾಡು ಪ್ರಾಣಿಗಳ ಉಪಟಳ ತಡೆಯಲು ರೈಲ್ವೆ ಬ್ಯಾರಿಕೇಡ್ ಅವಶ್ಯವಿದೆ. ಆವರಣದಲ್ಲಿರುವ ರೇಷ್ಮೆ ಕಾರ್ಖಾನೆಗಳು ತುಂಬಾ ಹಳೇಯದಾಗಿ ಶಿಥಿಲಗೊಂಡಿವೆ. ಕೇಂದ್ರದ ನಿರ್ವಹಣೆಗಾಗಿ ಸಿಬ್ಬಂದಿ ಕೊರತೆ ಇದೆ. ಪ್ರಸ್ತುತ ಇಲ್ಲಿನ ರೇಷ್ಮೆ ಕೃಷಿ ಕೇಂದ್ರವನ್ನು ಪುನಶ್ಛೇತನಗೊಳಿಸುವ ಅಗತ್ಯವಿದೆ ಎಂದು ಅಧಿಕಾರಿಗಳು ಸಚಿವರಿಗೆ ಮನವರಿಕೆ ಮಾಡಿದರು.

Advertisements

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ” ಹಿಂದೆ ಚಾಮರಾಜನಗರ ರೇಷ್ಮೆ ಬೆಳೆಗೆ ಬಹಳ ಹೆಸರುವಾಸಿಯಾಗಿತ್ತು. ಕಾಲ ಕ್ರಮೇಣ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳ ಅಭಿವೃದ್ಧಿಯಿಂದ ರೇಷ್ಮೆ ಬೆಳೆ ಬಗ್ಗೆ ರೈತರಲ್ಲಿ ಆಸಕ್ತಿ ಕಡಿಮೆಯಾಗಿದೆ. ಚೀನಾ ಮತ್ತು ಜಪಾನ್ ದೇಶಗಳಲ್ಲಿಯೂ ರೇಷ್ಮೆ ಉತ್ಪಾದನೆ ಕುಸಿತ ಕಂಡಿದೆ. ಇತ್ತೀಚೆಗೆ ಉತ್ತರ ಕರ್ನಾಟಕದಲ್ಲಿ ರೇಷ್ಮೆ ಬೆಳೆ ಹೆಚ್ಚಾಗುತ್ತಿದೆ. ರೈತರು ಹೆಚ್ಚಿನ ಆಸಕ್ತಿ ವಹಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಭಾಗದಲ್ಲಿಯೂ ರೇಷ್ಮೆ ನೇಕಾರರನ್ನು ಪ್ರೋತ್ಸಾಹಿಸಿ, ಉತ್ಪಾದನೆ ಹೆಚ್ಚಿಸಲು ಕ್ರಮ ವಹಿಸಲಾಗುವುದು. ರೇಷ್ಮೆ ಬೆಳೆಗೆ ರೈತರನ್ನು ಉತ್ತೇಜಿಸಬೇಕಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ರೇಷ್ಮೆ ಬೆಳೆ ಅಭಿವೃದ್ಧಿ ಬಗ್ಗೆ ವಿಸ್ತರವಾದ ವರದಿ ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ” ಎಂದು ತಿಳಿಸಿದರು.

ರೇಷ್ಮೆ ಬೆಳೆಗಾರರನ್ನು ಪ್ರೋತ್ಸಾಹಿಸಿ ಉತ್ಪಾದನೆ ಹೆಚ್ಚಿಸಲು 15 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ರೇಷ್ಮೆ ಅಭಿವೃದ್ಧಿಗಾಗಿ ಅವಶ್ಯವಾಗಿರುವ ಕಾರ್ಯಕ್ರಮಗಳ ಸಮಗ್ರ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಇಲಾಖೆಗೆ ಅಗತ್ಯವಿರುವ ಸಿಬ್ಬಂದಿ ಕೊರತೆಯನ್ನು ನೀಗಿಸಲು ಕ್ರಮವಹಿಸಲಾಗುವುದು ಎಂದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಕುಡಿಯುವ ನೀರಿನ ಯೋಜನೆ ಕಾಮಗಾರಿ ತ್ವರಿತ ಪೂರ್ಣಗೊಳಿಸಿ : ಸಚಿವ ಕೆ. ವೆಂಕಟೇಶ್

ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ನಿರ್ದೇಶಕ ಶ್ರೀರೂಪ, ರಿಜಿಸ್ಟ್ರಾರ್ ಡಾ. ರಾಮೇಗೌಡ, ಕೊಳ್ಳೇಗಾಲ ತಹಶೀಲ್ದಾರ್ ಬಸವರಾಜು ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X