ಉಡುಪಿ | ಕನ್ನಡ ನುಡಿ ಉಳಿಸಿ, ಬೆಳೆಸುವಲ್ಲಿ ಜಿಲ್ಲೆಯ ಕೊಡುಗೆ ಅಪಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

Advertisements

ಕನ್ನಡ ನುಡಿಯನ್ನು ಕಟ್ಟುವ, ಉಳಿಸಿ ಬೆಳೆಸುವ ಕಾಯಕದಲ್ಲಿ ಉಡುಪಿ ಜಿಲ್ಲೆಯ ಕೊಡುಗೆ ಅಪಾರ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದರು.

ಉಡುಪಿಯ ಮಹಾತ್ಮಗಾಂಧಿ ಮೈದಾನದಲ್ಲಿ ನಡೆದ 68ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. “ನಾಡು ಹರಿದು ಹಂಚಿ ಹೋಗಿದ್ದ ಅಂದಿನ ದಿನಗಳಲ್ಲಿ ಕನ್ನಡ ನಾಡಿನಾದ್ಯಂತ ಬೇರೆ ಬೇರೆ ಭಾಗಗಳಿಗೆ ಹೋಗಿ ಬೆನಗಲ್ ರಾಮರಾಯರು, ಕೋಟ ಶಿವರಾಮ ಕಾರಂತರು, ಪಂಜೆ ಮಂಗೇಶರಾಯರು ಮತ್ತಿತರ ಹಿರಿಯರು ಕನ್ನಡ ಕಹಳೆಯನ್ನು ರಾಜ್ಯಾದ್ಯಂತ ಮೊಳಗಿಸಿದ್ದರು” ಎಂದು ತಿಳಿಸಿದರು.

ನಂದಳಿಕೆ ಲಕ್ಷ್ಮೀನಾರಾಯಣ, ಗುಲ್ವಾಡಿ ವೆಂಕಟರಾಯರು, ಕೆ.ಶಿವರಾಮ ಕಾರಂತ, ಹಾವಂಜೆ ಲಕ್ಷ್ಮೀನಾರಾಯಣಪ್ಪಯ್ಯ, ಹಟ್ಟಿಯಂಗಡಿ ನಾರಾಯಣರಾಯರು, ಐರೋಡಿ ಶಿವರಾಮಯ್ಯ, ಮೊಗೇರಿ ಗೋಪಾಲಕೃಷ್ಣ ಅಡಿಗ, ಕಡೆಕಾರು ರಾಜಗೋಪಾಲಕೃಷ್ಣರಾಯ, ಎಸ್.ಯು ಪಣಿಯಾಡಿ, ಕೊರಡ್ಕಲ್ ಶ್ರೀನಿವಾಸರಾವ್, ಪಾ.ವೆಂ.ಆಚಾರ್ಯ, ಪಿ ಗುರುರಾಜ ಭಟ್, ಮಟಪಾಡಿ ರಾಜಗೋಪಾಲಾಚಾರ್ಯ ಮುಂತಾದ ಅನೇಕ ಕವಿಗಳು ಸೇರಿದಂತೆ ಕಲೆ, ಸಾಹಿತ್ಯ, ಸಂಸ್ಕೃತಿ, ಸಂಗೀತ ಕ್ಷೇತ್ರಗಳಿಗೆ ಈ ಜಿಲ್ಲೆಯ ಕೊಡುಗೆ ಅನನ್ಯವಾಗಿದೆ ಎಂದರು.

Advertisements

ಜಿಲ್ಲೆಯಲ್ಲಿ ಕನ್ನಡ ಭಾಷೆಯೊಂದೇ ಇಲ್ಲ. ಸ್ಥಳೀಯ ಭಾಷೆಗಳಾದ ತುಳು, ಕೊಂಕಣಿ, ಬ್ಯಾರಿ ಮತ್ತಿತರ ಭಾಷೆಗಳಿವೆ. ಇವೆಲ್ಲವನ್ನು ಬೇರೆ ಎಂದು ನಾವು ಎಂದೂ ಭಾವಿಸಿಯೇ ಇಲ್ಲ. ಈ ಅಚ್ಚ ಕನ್ನಡದ ಜಿಲ್ಲೆಯಲ್ಲಿ ಯಾರನ್ನೂ ಇವನಾರವ ಇವನಾರವ ಎನ್ನದೇ, ಅಣ್ಣ ಬಸವಣ್ಣ ಹೇಳಿದಂತೆ ಇವ ನಮ್ಮವ ಇವ ನಮ್ಮವ, ಎಂದು ಕೊಂಡಿದ್ದೇವೆ ಎಂದರು. ಈ ವೇಳೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ, ಅಪರ ಪೊಲೀಸ್ ವರಿಷ್ಠಾಧಿಕಾರಿ ಸಿದ್ದ ಲಿಂಗಪ್ಪ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಸುರೇಂದ್ರ ಅಡಿಗ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X