ವಿಜಯಪುರ | ಆದಷ್ಟು ಶೀಘ್ರ ವಿಮಾನ ನಿಲ್ದಾಣದ ಕಾಮಗಾರಿ ಮುಗಿಯಲಿದೆ: ರಾಜ್ಯೋತ್ಸವ ಭಾಷಣದಲ್ಲಿ ಸಚಿವ ಎಂ.ಬಿ.ಪಾಟೀಲ್‌

Date:

ವಿಜಯಪುರದಲ್ಲಿ ವಿಮಾನ ನಿಲ್ದಾಣಕ್ಕೆ ಜಾಗ ಗುರುತಿಸಿ ಆರು ದಶಕದ ನಂತರ ಕಾಮಗಾರಿ ಶುರುವಾಗಿ ಐದು ವರ್ಷ ಕಳೆದಿದ್ದು. ಬಹುತೇಕ ಮುಗಿಯುವ ಹಂತಕ್ಕೆ ಬಂದಿದೆ. ಕೆಲವೇ ದಿನಗಳಲ್ಲಿ ಕಾಮಗಾರಿ ಮುಗಿಸಿ ಮುಂದಿನ ವರ್ಷದಲ್ಲಿಯೇ ವಿಮಾನ ನಿಲ್ದಾಣ ಸಾರ್ವಜನಿಕ ಸೇವೆಗೆ ಒದಗಿಸಲು ಸರ್ಕಾರ ಮುಂದಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

- Advertisement -

ವಿಜಯಪುರ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವರು ವಿಮಾನ ನಿಲ್ದಾಣದ ಪ್ರಗತಿಯ ಕುರಿತು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಹುಬ್ಬಳ್ಳಿಗಿಂತ ಮೂರು ವರ್ಷ ಮೊದಲೇ ವಿಮಾನ ನಿಲ್ದಾಣ ಭೂಸ್ವಾಧೀನವಾಗಿದ್ದರೂ ಕೆಲಸ ಮಾತ್ರ ನಾನಾ ಕಾರಣದಿಂದ ಶುರುವಾಗಿರಲಿಲ್ಲ. ಐದೇ ವರ್ಷದಲ್ಲಿ ನಿಲ್ದಾಣ ಕಾಮಗಾರಿ ತ್ವರಿತಗತಿಯಲ್ಲಿ ನಡೆದಿದೆ. ಹಗಲು ವಿಮಾನ ಸಂಚಾರಕ್ಕೆ ಬೇಕಾದ ಕಾಮಗಾರಿಗಳು ಮುಗಿದಿದ್ದರೆ, ರಾತ್ರಿ ಸಮಯದಲ್ಲಿ ವಿಮಾನ ಹಾರಾಟಕ್ಕೆ ಬೇಕಾದ ಕೆಲಸಗಳು ನಡೆದಿವೆ ಎಂದು ತಿಳಿಸಿದರು.

ವಿಜಯಪುರ ವಿಮಾನ ನಿಲ್ದಾಣದಲ್ಲಿ ಏರ್‌ಬಸ್-320 ವಿಮಾನಗಳ ಹಗಲು ಹಾರಾಟದ ವ್ಯವಸ್ಥೆಗಾಗಿ ಮಂಜೂರಾಗಿರುವ 347.92 ಕೋಟಿ ರೂಪಾಯಿಗಳ ಅನುದಾನದಲ್ಲಿ 2 ಪ್ಯಾಕೇಜ್‍ಗಳಲ್ಲಿ ಕೈಗೊಂಡ ಎಲ್ಲ ಕಾಮಗಾರಿಗಳೂ ಮುಕ್ತಾಯವಾಗಿವೆ. ವಿಮಾನಯಾನ ಕಾರ್ಯಾಚರಣೆಗೆ ಅವಶ್ಯವಿರುವ ವಿಮಾನ ನಿಲ್ದಾಣದ ಪರಿಕರಗಳನ್ನು ಖರೀದಿಸುವ ಸಲುವಾಗಿ ಟೆಂಡರ್ ಆಹ್ವಾನಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.

ಸದರಿ ವಿಮಾನ ನಿಲ್ದಾಣದಲ್ಲಿ ರಾತ್ರಿ ವೇಳೆಯಲ್ಲಿಯೂ ಕಾರ್ಯಾಚರಣೆ ಕೈಗೊಳ್ಳಲು ಮತ್ತು ರಾಷ್ಟ್ರೀಯ ಹೆದ್ದಾರಿ-50 ರಿಂದ ವಿಮಾನ ನಿಲ್ದಾಣಕ್ಕೆ ನೇರ ಸಂಪರ್ಕ ರಸ್ತೆಯನ್ನು ಅಭಿವೃದ್ಧಿಪಡಿಸಲು ಯೋಜಿಸಲಾಗಿರುತ್ತದೆ. ಇದಕ್ಕಾಗಿ 117 ಕೋಟಿ ರೂಪಾಯಿಗಳ ಹೆಚ್ಚುವರಿ ಮೊತ್ತದ ಡಿ.ಪಿ.ಆರ್ ತಯಾರಿಸಿ ಅನುಮೋದನೆಗಾಗಿ ಸಲ್ಲಿಸಲಾಗಿದೆ ಎಂದರು.

ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದ ರನ್‍ವೇ ಸಹಿತ ಎಲ್ಲ ಕಾಮಗಾರಿಗಳು ಮುಗಿದಿದೆ. ಆದರೆ, ಪರಿಸರ ಸಚಿವಾಲಯಕ್ಕೆ ಸಂಬಂಧಿಸಿದ ಅನುಮತಿಗಳು ಹಿಂದಿನಿಂದಲೂ ಬಾಕಿ ಇವೆ. ಸರ್ವೋಚ್ಚ ನ್ಯಾಯಾಲಯ ಚೆನ್ನೈ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ರಾಷ್ಟ್ರದ ಎಲ್ಲ ನೂತನ ವಿಮಾನ ನಿಲ್ದಾಣಗಳಿಗೆ ಪರಿಸರ ಸಂಬಂಧಿತ ವಿಷಯಗಳ ಇತ್ಯರ್ಥವಾಗುವವರೆಗೆ ತಡೆಯಾಜ್ಞೆ ನೀಡಿದೆ. ಈ ತಡೆಯಾಜ್ಞೆ ತೆರವಾದ ಎರಡು ತಿಂಗಳ ಒಳಗೆ ವಿಮಾನ ಹಾರಾಟ ಆರಂಭಿಸಲಾಗುವುದು ಎಂದು ಎಂ.ಬಿ.ಪಾಟೀಲ್ ಸ್ಪಷ್ಟನೆ ನೀಡಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...