ವಿಜಯಪುರದಲ್ಲಿ ಸಚಿವ ಎಂ.ಬಿ ಪಾಟೀಲ ಸೌಹಾರ್ದ ಯಾತ್ರೆ

Date:

ನೂತನ ಸಂಪುಟದಲ್ಲಿ ಸಚಿವರಾದ ನಂತರ ಇದೇ ಮೊದಲ ಬಾರಿಗೆ ವಿಜಯಪುರ ನಗರಕ್ಕೆ ಆಗಮಿಸಿರುವ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ ಶನಿವಾರ ಸಂಜೆ ಹಾಸೀಂಪೀರ ದರ್ಗಾ ಮತ್ತು ಅರ್ಕಟ್ ದರ್ಗಾ ಹಾಗೂ ಶ್ರೀ ಸಿದ್ಧರಾಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.

- Advertisement -

ಸೌಹಾರ್ದತೆ ಮತ್ತು ಭಾವೈಕ್ಯತೆಯ ಪ್ರತೀಕವಾದ‌ ಹಾಸೀಂಪೀರ ದರ್ಗಾ ಮತ್ತು‌ ಅರ್ಕಟ್ ದರ್ಗಾಗಳಿಗೆ ಭೇಟಿ ನೀಡಿ, ನಾಡಿನ ಎಲ್ಲ ಜನತೆಯ ಒಳಿತು, ಶಾಂತಿ, ಸುಖ-ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಈ ಸಂದರ್ಭದಲ್ಲಿ ಮಾತನಾಡಿ, “ಸೂಫಿ ಸಂತರು ತಮ್ಮ ಪ್ರೀತಿ, ಕರುಣೆ, ಸಹಿಷ್ಣುತೆ ಮತ್ತು ಮಾನವೀಯತೆಯ ಸಂದೇಶಗಳ ಮೂಲಕ ಸಮಾಜದಲ್ಲಿ ಸೌಹಾರ್ದತೆ, ಸಾಮರಸ್ಯ ಹಾಗೂ ಸಹಬಾಳ್ವೆಯ ಮೌಲ್ಯಗಳನ್ನು ಬಿತ್ತಿದ್ದಾರೆ. ಅವರ ಆದರ್ಶಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿದ್ದು, ಸರ್ವಧರ್ಮ ಸಮಭಾವ ಮತ್ತು ಭ್ರಾತೃತ್ವದ ಸಂದೇಶವನ್ನು ಸಾರುತ್ತಿವೆ‌” ಎಂದು ಹೇಳಿದರು.

ಹಾಸಿಂಪೀರ ದರ್ಗಾ ಭೇಟಿ‌ ಸಂದರ್ಭದಲ್ಲಿ ಹಾಸಿಂಪೀರ್ ದರ್ಗಾದ ಸಯ್ಯದ್ ಮೆಹಮೂದ್ ಹುಸೇನಿ ಹಾಸ್ಮಿ, ಸಯ್ಯದ್ ಮೊಯಿನೋದ್ದೀನ್ ಹುಸೇನಿ ಹಾಸ್ಮಿ, ಸೈಯದ್ ಜೈನುಲ್ ಅಬಿದಿನ್ ಹಾಸ್ಮಿ, ಸೈಯದ್ ವಾಜೇದಪಿರಾಂ ಹಾಸ್ಮಿ, ಮುಖಂಡರಾದ ಜಮೀರ್ ಭಕ್ಷಿ, ಶಕೀಲ್ ಬಾಗಮಾರೆ ಮುಂತಾದವರು ಉಪಸ್ಥಿತರಿದ್ದರು.

ಅರ್ಕಾಟ್ ದರ್ಗಾ ಭೇಟಿ ಸಂದರ್ಭದಲ್ಲಿ‌ ಅರ್ಕಾಟ್ ದರ್ಗಾದ ಸಜ್ಜಾದೆ ಡಾ. ಸೈಯ್ಯದ ಶಾ ತಕಿಪಿರಾಂ ಹುಸೇನಿ, ಸಯ್ಯದ ಶಾ ಇಕ್ಬಾಲ್ ಪೀರಾಂ ಹುಸೇನಿ, ಸೈಯ್ಯದ ಶಾ ಅಲಿ ಪೀರಾಂ ಹುಸೇನಿ, ಮುಖಂಡರಾದ ಮೊಹ್ಮದ್ ರಫೀಕ್ ಟಪಾಲ್, ರಫೀಕ್ ಅಹ್ಮದ್ ಕಾಣೆ, ಅಬ್ದುಲ್ ರಜಾಕ್ ಹೊರ್ತಿ, ಎಂ. ಸಿ. ಮುಲ್ಲಾ, ಅಶ್ಪಾಕ್ ಮನಗೂಳಿ ಮುಂತಾದವರು ಉಪಸ್ಥಿತರಿದ್ದರು.

ನಂತರ ವಿಜಯಪುರ ನಗರದ ಐತಿಹಾಸಿಕ ಮತ್ತು ಪ್ರಸಿದ್ಧ ಶ್ರೀ ಸಿದ್ದೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಅವರು, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಮಾತನಾಡಿ, “ಈ ದೇವಾಲಯವು ನೂರಾರು ವರ್ಷಗಳ ಭವ್ಯ ಇತಿಹಾಸವನ್ನು ಹೊಂದಿದ್ದು, ವಿಶಿಷ್ಟ ವಾಸ್ತುಶಿಲ್ಪ ಹಾಗೂ ಶ್ರೀಮಂತ ಸಾಂಸ್ಕೃತಿಕ ಪರಂಪರೆಯಿಂದಾಗಿ ನಿತ್ಯ ಸಾವಿರಾರು ಭಕ್ತರನ್ನು ತನ್ನತ್ತ ಆಕರ್ಷಿಸುತ್ತಿದೆ.

ಶ್ರೀ ಸಿದ್ದೇಶ್ವರರ ಕೃಪಾಶೀರ್ವಾದದಿಂದ ನಾಡಿನಲ್ಲಿ ಸೌಹಾರ್ದತೆ, ಶಾಂತಿ ಮತ್ತು ಸಮೃದ್ಧಿ ನೆಲೆಸಲಿ. ಅಭಿವೃದ್ಧಿ ಮತ್ತು ಜನಕಲ್ಯಾಣದ ಕಾರ್ಯಗಳು ಮತ್ತಷ್ಟು ಯಶಸ್ವಿಯಾಗಿ ಮುನ್ನಡೆಯಲಿ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಮೇಯರ್ ಎಂ. ಎಸ್. ಕರಡಿ, ಶ್ರೀ ಸಿದ್ಧೇಶ್ವರ ಸಂಸ್ಥೆಯ ಚೇರಮನ್ ಬಸಯ್ಯ ಹಿರೇಮಠ, ಉಪಾಧ್ಯಕ್ಷ ಸಂಗು ಸಜ್ಜನ, ಕಾರ್ಪೊರೇಟರ್ ಪ್ರೇಮಾನಂದ ಬಿರಾದಾರ, ಮುಖಂಡರಾದ ಶಿವಾನಂದ, ಸುಧೀರ ಚಿಂಚಲಿ, ರಮೇಶ ಹಳ್ಳದ, ಮಲ್ಲೆಶಪ್ಪ ಗಣಿಯಾರ, ಸದಾಶಿವ ಗುಡ್ಡೋಡಗಿ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೇವೆ ಮೊದಲು, ಪರಿಶೀಲನೆ ಆಮೇಲೆ: ಫಲಾನುಭವಿಗಳಿಗೆ ತ್ವರಿತ ಸೇವೆ ನೀಡಲು ರಾಜ್ಯ ಸರ್ಕಾರದ ಹೊಸ ಆದೇಶ

ರಾಜ್ಯ ಸರ್ಕಾರವು ನಾಗರಿಕರಿಗೆ ಮುಂಚಿತವಾಗಿ ಅರ್ಹತೆಯ ಪರಿಶೀಲನೆಯಿಲ್ಲದೆ ಸೇವೆಗಳು ಮತ್ತು ಯೋಜನೆಯ...

ಅವಳ ಕಣ್ಣೋಟ | ‘ಉಯರೆ’- ಸುಟ್ಟದ್ದು ಮುಖವಷ್ಟೇ, ಬದುಕಿನ ಮೇಲಿನ ಹಕ್ಕಲ್ಲ…

ಒಬ್ಬ ಮಹಿಳೆ ತನ್ನನ್ನು ನಿರಾಕರಿಸಿದಳೆಂಬ ಕಾರಣಕ್ಕೆ ಆಕೆಯ ಬದುಕನ್ನೇ ನಾಶಮಾಡುವ ಹಕ್ಕು...

ರಾಯಚೂರು | ಈಶಾನ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಶೇ. 86.02ರಷ್ಟು ಮತದಾನ

ಅಕ್ಟೋಬ‌ರ್ 23ರಂದು ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಮತದಾನ ಸುಗಮವಾಗಿ ನಡೆದಿದ್ದು, ಒಟ್ಟು...