ಮೈಸೂರು | ಹೆಣ್ಣುಮಕ್ಕಳು ವೈಜ್ಞಾನಿಕ-ವೈಚಾರಿಕ ಶಿಕ್ಷಣ ಪಡೆದುಕೊಳ್ಳಲಿ: ಸಚಿವ ಮಹದೇವಪ್ಪ ಕರೆ

Date:

ಮೈಸೂರು ನಗರದ ಮಹಾರಾಣಿ ಮಹಿಳಾ ಮತ್ತು ನಿರ್ವಹಣಾ ಕಾಲೇಜು ವತಿಯಿಂದ ಆಯೋಜಿಸಲಾಗಿದ್ದ ಸಾಂಸ್ಕೃತಿಕ ವೇದಿಕೆ 2025-26ರ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಹೆಣ್ಣುಮಕ್ಕಳು ವೈಜ್ಞಾನಿಕ ಹಾಗೂ ವೈಚಾರಿಕ ಶಿಕ್ಷಣವನ್ನು ಪಡೆದುಕೊಳ್ಳುವ ಮೂಲಕ ಸಬಲರಾಗಬೇಕು ಎಂದು ಕರೆ ನೀಡಿದರು.

- Advertisement -

ಮೈಸೂರಿನ ಸರ್ವಾಂಗೀಣ ಅಭಿವೃದ್ಧಿಗೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿಯೇ ಮೂಲ ಕಾರಣವಾಗಿದ್ದು, ಅವರ ಕೊಡುಗೆಯಿಂದಲೇ ಮೈಸೂರು ಮಾದರಿ ನಗರವಾಗಿ ಬೆಳೆದಿದೆ ಎಂದು ಅವರು ಹೇಳಿದರು. ಇದೇ ವೇಳೆ, ದೇಶದ ನಾಗರಿಕರಿಗೆ ಸ್ವತಂತ್ರವಾಗಿ ಬದುಕುವ ಶಕ್ತಿ ನೀಡಿದವರು ಡಾ. ಬಿ.ಆರ್. ಅಂಬೇಡ್ಕರ್ ಆಗಿದ್ದು, ಅವರ ಸಂವಿಧಾನವೇ ನಮ್ಮೆಲ್ಲರ ಶಕ್ತಿ ಎಂದು ಅಭಿಪ್ರಾಯಪಟ್ಟರು. ಇಂದಿನ ದಿನಗಳಲ್ಲಿ ಸರ್ವೋಚ್ಚ ನ್ಯಾಯಾಲಯದಿಂದ ಹಿಡಿದು ಸಾಮಾನ್ಯ ಸಂಸ್ಥೆಗಳವರೆಗೆ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಪದ್ಧತಿ ರೂಪುಗೊಂಡಿರುವುದು ಅದರ ಮಹತ್ವವನ್ನು ಪ್ರತಿಬಿಂಬಿಸುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಡಾ. ಅಂಬೇಡ್ಕರ್ ಅವರು ಕೇವಲ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಪರವಾಗಿ ಮಾತ್ರವಲ್ಲದೆ, ಮಹಿಳೆಯರ ಮೇಲಿನ ಶೋಷಣೆಯ ವಿರುದ್ಧವೂ ಹೋರಾಟ ನಡೆಸಿ, ಸತಿ ಪದ್ಧತಿಯಂತಹ ಕ್ರೂರ ಸಂಪ್ರದಾಯಗಳನ್ನು ಖಂಡಿಸಿ, ಮಹಿಳಾ ಶಿಕ್ಷಣ ಹಾಗೂ ಹಕ್ಕುಗಳ ಪರವಾಗಿ ಧ್ವನಿ ಎತ್ತಿದವರು ಎಂದು ಹೇಳಿದರು. ಇಂದಿನ ದಿನಗಳಲ್ಲಿ ಪರೀಕ್ಷಾ ಫಲಿತಾಂಶಗಳಲ್ಲಿ ಹೆಣ್ಣುಮಕ್ಕಳು ಮೇಲುಗೈ ಸಾಧಿಸುತ್ತಿರುವುದಕ್ಕೆ ಅವರ ಹೋರಾಟವೇ ಪ್ರಮುಖ ಕಾರಣ ಎಂದು ತಿಳಿಸಿದರು.

“ಶಿಕ್ಷಣವೇ ಯಾರೂ ಕದಿಯಲಾರದ ಆಸ್ತಿ. ಅಸಮಾನತೆಯನ್ನು ದೂರ ಮಾಡಿ ಸಮಸಮಾಜ ನಿರ್ಮಿಸಲು ಶಿಕ್ಷಣವೇ ಮುಖ್ಯ ಸಾಧನ,” ಎಂದು ಹೇಳಿದ ಅವರು, ಹೆಣ್ಣುಮಕ್ಕಳು ಉತ್ತಮ ಶಿಕ್ಷಣ ಪಡೆದು ದೇಶದ ಜವಾಬ್ದಾರಿಯುತ ಪ್ರಜೆಗಳಾಗಬೇಕು ಎಂದು ಕರೆ ನೀಡಿದರು.

ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡ ಮಾತನಾಡಿ, ಮಹಾರಾಣಿ ಕಾಲೇಜಿನಂತಹ ಬೃಹತ್ ಶಿಕ್ಷಣ ಸಂಸ್ಥೆಯು ದೊರೆಯಲು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿಯೇ ಕಾರಣ ಎಂದು ಸ್ಮರಿಸಿದರು. ಸರ್ಕಾರವು ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣದ ಜೊತೆಗೆ ಸುಮಾರು 2,900 ಮಂದಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಜಯದೇವ್ ಆಸ್ಪತ್ರೆಯ ಪ್ರಾಧ್ಯಾಪಕರು ಹಾಗೂ ವೈದ್ಯಕೀಯ ಅಧೀಕ್ಷಕರಾದ ಡಾ. ಕೆ.ಎಸ್. ಸದಾನಂದ ಮಾತನಾಡಿ, ಈ ಸಮಾರೋಪ ಕಾರ್ಯಕ್ರಮವು ಕೇವಲ ಚಟುವಟಿಕೆಗಳ ಅಂತ್ಯವಲ್ಲ, ಬದಲಾಗಿ ವಿದ್ಯಾರ್ಥಿನಿಯರ ಸಮರ್ಪಣೆ, ತಂಡದ ಕೆಲಸ ಮತ್ತು ಶಿಸ್ತುಗಳ ಆಚರಣೆ ಎಂದು ಹೇಳಿದರು. ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ರಾಷ್ಟ್ರೀಯ ಸೇವಾ ಯೋಜನೆ, ಯುವ ರೋವರ್ಸ್ ಮತ್ತು ರೇಂಜರ್ಸ್ ಚಟುವಟಿಕೆಗಳು ವಿದ್ಯಾರ್ಥಿನಿಯರ ವ್ಯಕ್ತಿತ್ವ ವಿಕಾಸಕ್ಕೆ ಸಹಕಾರಿಯಾಗಿವೆ ಎಂದು ಹೇಳಿದರು.

“ಬಹುಮಾನ ಗೆಲ್ಲುವುದು ಮುಖ್ಯವಾದರೂ, ಭಾಗವಹಿಸುವಿಕೆಯೇ ದೊಡ್ಡ ಸಾಧನೆ. ಯಶಸ್ಸು ಪದಕಗಳಿಂದ ಮಾತ್ರವಲ್ಲ, ಅನುಭವ ಮತ್ತು ಪಾಠಗಳಿಂದ ಅಳೆಯಬೇಕು,” ಎಂದು ತಿಳಿಸಿದ ಅವರು, ವಿದ್ಯಾರ್ಥಿನಿಯರು ಶೈಕ್ಷಣಿಕ ಶ್ರೇಷ್ಠತೆಯ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ?ಮೈಸೂರು | ಚೆಲುವಾಂಬ ಆಸ್ಪತ್ರೆ ಶಿಶು ಸಾವುಗಳ ದುರಂತ: ಸೌಲಭ್ಯ ಕೊರತೆ ವಿರುದ್ಧ ಎಐಎಂಎಸ್ಎಸ್ ಹೋರಾಟದ ಎಚ್ಚರಿಕೆ

ಕಾರ್ಯಕ್ರಮದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೊ. ಡಿ.ಎಸ್. ಪ್ರತಿಭಾ, ರಂಗಾಯಣದ ಮಾಜಿ ನಿರ್ದೇಶಕ ಎಚ್. ಜನಾರ್ಧನ್, ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ. ಶಿವಣ್ಣ ಹಾಗೂ ಐಕ್ಯೂಎಸಿ ಸಂಚಾಲಕ ಡಾ. ಎಸ್. ಮುತ್ತುರಾಜ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...