ಮೈಸೂರು ದಸರಾ | ರಾಜಮನೆತನಕ್ಕೆ ಅಧಿಕೃತ ಆಹ್ವಾನ ನೀಡಿದ ಸಚಿವ ಮಹದೇವಪ್ಪ

Date:

Advertisements

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ರಾಜ್ಯ ಸರ್ಕಾರದ ಪರವಾಗಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಮೈಸೂರು ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರಿಗೆ ಅಧಿಕೃತ ಆಹ್ವಾನ ನೀಡಿದರು.

ಭಾನುವಾರ ಅರಮನೆಯಲ್ಲಿರುವ ಅಂಬಾವಿಲಾಸ ನಿವಾಸದಲ್ಲಿ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಯಾಗಿ ಸಾಂಪ್ರದಾಯಿಕವಾಗಿ ಫಲತಾಂಬೂಲ ಹಾಗೂ ಆಮಂತ್ರಣ ಪತ್ರಿಕೆ ನೀಡಿ ದಸರಾ ಉತ್ಸವಕ್ಕೆ ಆತ್ಮೀಯವಾಗಿ ಆಹ್ವಾನಿಸಿದರು. ಬಳಿಕ ಸರ್ಕಾರದಿಂದ ಪ್ರತಿವರ್ಷ ನೀಡಲಾಗುವ ಗೌರವಧನದ (ಚೆಕ್) ನೀಡಿದರು.

ವಿಶೇಷ ವಿಡಿಯೋ ವೀಕ್ಷಿಸಿ : https://www.youtube.com/watch?v=K2_ysCR87bw&t=639s

36609

ಆಹ್ವಾನ ನಿಯೋಗದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷೆ ಪುಷ್ಪ ಅಮರನಾಥ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಸಿಇಒ ಎಸ್.ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಟುವರ್ಧನ್, ನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಷೀಫ್, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು, ಅರಮನೆ ಮಂಡಳಿ ಉಪನಿರ್ದೇಶಕ ಸುಬ್ರಹ್ಮಣ್ಯ ಸೇರಿದಂತೆ ಇನ್ನಿತರರು ಇದ್ದರು.

ವಿಶೇಷ ವಿಡಿಯೋ ವೀಕ್ಷಿಸಿ : https://www.youtube.com/watch?v=FwDgvTROXb4

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

Download Eedina App Android / iOS

X