ಚಾಮರಾಜನಗರ | ಕಿತ್ತೂರು ರಾಣಿ ಚನ್ನಮ್ಮ ಶಾಲೆಗೆ ದಿಡೀರ್ ಭೇಟಿ ನೀಡಿದ ಸಚಿವ ಮಹದೇವಪ್ಪ

Date:

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕು ಬೇಗೂರಿನ ಕಿತ್ತೂರು ರಾಣಿ ವಸತಿ ಶಾಲೆಗೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ ದಿಡೀರ್ ಭೇಟಿ ನೀಡಿ ಪರಿಶೀಲನೆ ಮಾಡಿದರು.

- Advertisement -

ಈ ವೇಳೆ ವಿದ್ಯಾರ್ಥಿನಿಲಯಕ್ಕೆ ತೆರಳಿದ ಸಚಿವರು, ವಿದ್ಯಾರ್ಥಿಗಳ ವಾಸದ ಕೊಠಡಿ, ಶೌಚಾಲಯ ವೀಕ್ಷಿಸಿ ನೈರ್ಮಲ್ಯ ಪರಿಶೀಲಿಸಿದ ಸಂತರ ಶಾಲೆಯಲ್ಲಿ ದೊರಕುತ್ತಿರುವ ಸೌಲಭ್ಯಗಳು ಹಾಗೂ ಬೋಧನೆ ಕುರಿತು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಶಿಕ್ಷಕರು ಉತ್ತಮವಾಗಿ ಕಲಿಸುತ್ತಿದ್ದಾರೆಯೇ? ರುಚಿಕರವಾದ ತಿಂಡಿ, ಊಟ ನೀಡುತ್ತಿದ್ದಾರಾ? ವಾಸದ ಕೊಠಡಿಯಲ್ಲಿ ಆರಾಮದಾಯಕವಾಗಿ ಇರಬಹುದಾ? ಶೌಚಾಲಯವು ಯಾವಾಗಲೂ ಶುಚಿತ್ವವಾಗಿರುತ್ತದಾ? ಏನಾದರೂ ಸಮಸ್ಯೆ ಇದಿಯಾ ಎಂದು ಮಕ್ಕಳನ್ನು ಪ್ರಶ್ನಿಸಿ, ಪ್ರತಿಕ್ರಿಯೆ ಪಡೆದರು.

ಬಳಿಕ ಭೋಜನಾಲಯಕ್ಕೆ ಭೇಟಿ ನೀಡಿ ದಾಸ್ತಾನು ಕೊಠಡಿ ಪರಿಶೀಲಿಸಿದರು‌. ಚಹಾ ಸವಿಯುತ್ತಾ ಮಾತನಾಡಿ, ಗ್ರಾಮೀಣ ಭಾಗದ ಅನೇಕ ಮಕ್ಕಳು ಕಲಿಯಲು ಇಲ್ಲಿಗೆ ಬರುತ್ತಾರೆ. ನಿಲಯಪಾಲಕರು ಪ್ರೀತಿಯಿಂದ ನೋಡಿಕೊಳ್ಳಬೇಕು. ಶಿಕ್ಷಕರು ತಮಗೆ ನೀಡಿರುವ ವಸತಿ ಗೃಹದಲ್ಲಿ ಕಡ್ಡಾಯವಾಗಿ ಇರಬೇಕು. ಮಕ್ಕಳ ಆರೋಗ್ಯದಲ್ಲಿ ಜಾಗರೂಕತೆ ವಹಿಸಬೇಕು ಎಂದು ಸೂಚಿಸಿದರು.

ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಪಠ್ಯೇತರ ಚಟುವಟಿಕೆಯಲ್ಲಿ ಮಕ್ಕಳು ಹೆಚ್ಚಾಗಿ ಭಾಗವಹಿಸುವಂತೆ ಪ್ರೇರಿಪಿಸಿ, ಮೆನು ಚಾರ್ಟ್ ಪ್ರಕಾರವೇ ಮಕ್ಕಳಿಗೆ ಊಟ, ತಿಂಡಿ ವಿತರಿಸಬೇಕು. ಒಟ್ಟಾರೆ‌ ಮನೆಗಿಂತಲೂ ವಸತಿ ಶಾಲೆಯಲ್ಲಿ ಉತ್ತಮ ವಾತಾವರಣ ನಿರ್ಮಿಸಬೇಕೆಂದು ಸಲಹೆ ನೀಡಿದರು.

ವಸತಿ ಶಾಲೆಯ ಭೋಜನಾಲಯ, ಶೌಚಾಲಯಗಳು ಹಾಗೂ ಆವರಣವು ನೈರ್ಮಲ್ಯದಿಂದ ಕೂಡಿರಬೇಕು. ಪ್ರತಿದಿನ ಮುಂಜಾನೆ ಯೋಗ, ವ್ಯಾಯಾಮ, ಧ್ಯಾನವನ್ನು ಅಭ್ಯಾಸ ಮಾಡಿಸಬೇಕು. ಮಕ್ಕಳಿಗೆ ಆರೋಗ್ಯ ಕುರಿತು ಅವರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಂಬಂಧಿಸಿದವರಿಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಬೈಕ್, ಟ್ಯಾಕ್ಸಿ ನಿಷೇಧ ವಾಪಸ್ ಪಡೆಯುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ಈ ಸಂದರ್ಭದಲ್ಲಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಗೋಪಾಲ್ ಹೊರೆಯಾಲ, ರವಿಕುಮಾರ್, ಆಪ್ತ ಸಹಾಯಕ ಶ್ರೀನಿವಾಸ್ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶರೈತರ ಹಕ್ಕುಗಳ ಅರಿವಿನಿಂದ ಅರಣ್ಯ ಅಧಿಕಾರಿಗಳಿಗೆ ನಡುಕ: ಆರ್. ಶ್ರೀನಿವಾಸನ್

ರೈತರು ನಿದ್ದೆ ಮಾಡುವ ಸಂದರ್ಭವನ್ನು ಬಳಸಿಕೊಂಡು ಬೆಳಗಿನ ಜಾವ ಪೊಲೀಸ್ ಬೆಂಗಾವಲಿನಲ್ಲಿ...

OBC ವಿದ್ಯಾವಂತ ನಿರುದ್ಯೋಗಿಗಳ ಕುರಿತು ಅಧ್ಯಯನ; ಪ್ರವೀಣ ಪತ್ತಾರಗೆ ಕವಿವಿ ಪಿಎಚ್‌ಡಿ

ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಸಮಾಜಶಾಸ್ತ್ರ ವಿಭಾಗದ ಸಂಶೋಧಕರಾದ ಪ್ರವೀಣ ಪತ್ತಾರ ಅವರು...

ಆಲಗೂರ ಪುನರ್ವಸತಿ ಕೇಂದ್ರವನ್ನು ಮರಳಿ ಗ್ರಾಮ ಪಂಚಾಯತಿಗೆ ಸೇರಿಸಲು ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿರುವ ಆಲಗೂರ ಪುನರ್ವಸತಿ ಕೇಂದ್ರವನ್ನು...

ಬಾಗಲಕೋಟೆ | ಬೆಂಬಲ ಬೆಲೆಯಲ್ಲಿ ಧಾನ್ಯ ಖರೀದಿ; ಯೋಜನೆ ಸದುಪಯೋಗಕ್ಕೆ ಜಿಲ್ಲಾಧಿಕಾರಿ ಸಂಗಪ್ಪ ಕರೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಬಾಗಲಕೋಟೆ ಜಿಲ್ಲೆಯ ರೈತರಿಂದ ಸೂರ್ಯಕಾಂತಿ,...