ಕೊಡಗು | ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಸಚಿವ ಎನ್ ಎಸ್ ಭೋಸರಾಜು ಸೂಚನೆ

Date:

ಕೊಡಗು ಜಿಲ್ಲೆ, ವಿರಾಜಪೇಟೆ ತಾಲ್ಲೂಕು ಬಿಟ್ಟಂಗಾಲದ ಹೆಗ್ಗಡೆ ಸಮಾಜದಲ್ಲಿ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕು ಅಧಿಕಾರಿಗಳೊಂದಿಗೆ ಪ್ರಸಕ್ತ ಆರ್ಥಿಕ ವರ್ಷದ ಪ್ರಗತಿ ಸಂಬಂಧಿಸಿದ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಸಚಿವ ಎನ್ ಎಸ್ ಭೋಸರಾಜು ‘ ಕುಡಿಯುವ ನೀರು ಸಮರ್ಪಕ ಪೂರೈಕೆ ‘ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

” ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಮುನ್ನೆಚ್ಚರ ವಹಿಸಬೇಕು. ಕುಡಿಯುವ ನೀರನ್ನು ನಿರಂತರವಾಗಿ ಪೂರೈಸಬೇಕು. ಸಾರ್ವಜನಿಕರಿಂದ ದೂರು ಬರದಂತೆ ಎಚ್ಚರ ವಹಿಸಬೇಕು. ತಹಶೀಲ್ದಾರ್ ಮತ್ತು ತಾಪಂ ಇಒಗಳು ಕುಡಿಯುವ ನೀರು ಪೂರೈಕೆ ಕಡೆಗೆ ಒತ್ತು ನೀಡಬೇಕು. ವಸತಿ ಶಾಲೆ ಹಾಗೂ ವಿದ್ಯಾರ್ಥಿ ನಿಲಯಗಳಿಗೆ ದಿಢೀರ್ ಭೇಟಿ ನೀಡಿ ಕುಂದುಕೊರತೆ ಆಲಿಸಬೇಕು ” ಎಂದು ತಾಕೀತು ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ನಾಗರಹೊಳೆಯಲ್ಲಿನ ಗಿರಿಜನ ಆಶ್ರಮ ಶಾಲೆಯಲ್ಲಿ ಮೂಲ ಸೌಲಭ್ಯ ಇಲ್ಲದೆ ವಿದ್ಯಾರ್ಥಿಗಳು ಪರಿತಪಿಸುತ್ತಿದ್ದಾರೆ. ಸರ್ಕಾರ ಹಲವು ಯೋಜನಾ ಕಾರ್ಯಕ್ರಮಗಳು ಜಾರಿಗೊಳಿಸಿದ್ದರೂ ಸಹ ಪರಿಪೂರ್ಣವಾಗಿ ತಲುಪಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ, ಈ ಬಗ್ಗೆ ಶಾಸಕರು, ಜಿಲ್ಲಾಧಿಕಾರಿಯವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದಲ್ಲಿ ಸರ್ಕಾರದ ಗಮನಕ್ಕೆ ತರಬಹುದಾಗಿದೆ. ಯಾವುದೇ ಮಾಹಿತಿ ನೀಡದಿದ್ದಲ್ಲಿ ಸಮಸ್ಯೆ ಬಗೆ ಹರಿಸುವುದಾದರೂ ಹೇಗೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

” ಮಕ್ಕಳಿಗೆ ಪೌಷ್ಠಿಕ ಆಹಾರ ವಿತರಿಸಬೇಕು. ಸರ್ಕಾರ ಸಾಕಷ್ಟು ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಿದ್ದು, ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಿದವರಿಗೆ ನಿಲಯ ಪ್ರವೇಶಕ್ಕೆ ಅವಕಾಶ ಮಾಡಬೇಕು. ಕೊರತೆಗಳಿದ್ದಲ್ಲಿ ಗಮನಕ್ಕೆ ತರುವಂತಾಗಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕಾಳಜಿ ವಹಿಸಬೇಕು. ಲೋಕೋಪಯೋಗಿ, ಪಂಚಾಯತ್ ರಾಜ್ ಇಲಾಖೆಯ ರಸ್ತೆ ಅಭಿವೃದ್ಧಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ರಸ್ತೆ ಸುಧಾರಿಸಬೇಕು. ರಸ್ತೆಗಳ ನಿರ್ವಹಣೆಗೆ ಸರ್ಕಾರ ಹಣ ನೀಡಿದ್ದು, ಸರಿಯಾಗಿ ಬಳಸಬೇಕು. ಎಲ್ಲಾ ಇಲಾಖೆಗಳಲ್ಲಿ ಶೇ.91 ರಿಂದ ಶೇ.95 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ವರದಿ ನೀಡಲಾಗಿದೆ. ಆದರೆ, ಕೆಲವು ಕಡೆ ಸಮಸ್ಯೆಗಳು ಇತ್ಯರ್ಥವಾಗದೆ ಇರುವುದಕ್ಕೆ ಉದಾಹರಣೆ ನಾಗರಹೊಳೆ ಗಿರಿಜನ ವಸತಿ ಶಾಲೆಯೇ ಸಾಕ್ಷಿ ಎಂದು ತೀವ್ರ ಆಕ್ಷೇಪ ” ವ್ಯಕ್ತಪಡಿಸಿದರು.

‘ಸಾರ್ವಜನಿಕರಿಂದ ಕುಂದುಕೊರತೆ ಸಂಬಂಧ ಹೆಚ್ಚು ಹೆಚ್ಚು ಮನವಿಗಳು ಸಲ್ಲಿಕೆಯಾಗುತ್ತಿವೆ ಎಂಬುದು ಕಂಡುಬಂದರೆ, ತಳಮಟ್ಟದಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಭಾವಿಸಬೇಕಾಗುತ್ತದೆ. ಆದ್ದರಿಂದ, ಸ್ಥಳೀಯ ಮಟ್ಟದಲ್ಲಿಯೇ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು. ಎಲ್ಲಾ ಹಂತದ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕೆಲಸ ಮಾಡಬೇಕು. ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ.ಹೀಗೆ, ಹಲವು ಕಾರ್ಯಕ್ಕೆ ಸರ್ಕಾರದಿಂದ ಸಹಾಯಧನ ದೊರೆಯಲಿದ್ದು, ಅವುಗಳನ್ನು ಬಳಸಿಕೊಳ್ಳಲು ಮುಂದಾಗಬೇಕು ‘ ಎಂದರು.

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭ ಕ್ಷೇತ್ರದ ಶಾಸಕ ಎ ಎಸ್ ಪೊನ್ನಣ್ಣ ಮಾತನಾಡಿ ‘ ಮುಂದಿನ ವಾರದಲ್ಲಿ ತಾಲ್ಲೂಕುವಾರು ಕುಡಿಯುವ ನೀರು ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಂಭಂಧಿಸಿದಂತೆ ಕೆಡಿಪಿ ಸಭೆ ನಡೆಸಲಾಗುವುದು. ವಿರಾಜಪೇಟೆ ಮತ್ತು ಗೋಣಿಕೊಪ್ಪದಲ್ಲಿ ಸಂಚಾರ ನಿಯಂತ್ರಣ ಸಂಬಂಧ ಅಗತ್ಯ ಕ್ರಮಕೈಗೊಳ್ಳಬೇಕು. ಅರಣ್ಯ ಇಲಾಖೆ ಅಧಿಕಾರಿಗಳು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿ ಮಾಡದೆ ಮೂಲ ಸೌಲಭ್ಯ ಕಲ್ಪಿಸಲು ಮುಂದಾಗಬೇಕು. ಯಾವುದೇ ಕಾರಣಕ್ಕೂ ತಕರಾರು ತೆಗೆಯಬಾರದು. ಸಾರ್ವಜನಿಕ ಕೆಲಸಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು. ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು ‘ ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಮಹಾಡ್ ಸತ್ಯಾಗ್ರಹ ಆಧುನಿಕ ಭಾರತದ ಇತಿಹಾಸದಲ್ಲಿ ಅತ್ಯಂತ ಮಹತ್ವದ್ದು : ಮಾವಳ್ಳಿ ಶಂಕರ್

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಜಾನ್ಸನ್, ತಹಶೀಲ್ದಾರರು, ತಾಪಂ ಇಒಗಳು,ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...