ಬೀದರ್‌ | ಸಂಸ್ಕಾರವಿಲ್ಲದ ಸಂಸ್ಕೃತಿ ಸಚಿವ; ಶಿವರಾಜ ತಂಗಡಗಿ ಹೇಳಿಕೆಗೆ ಸಚಿವ ಭಗವಂತ ಖೂಬಾ ಖಂಡನೆ

Date:

ದೇಶದ ಪ್ರಧಾನಿಗಳಿಗೆ ಗೌರವಿಸಿ ಮಾತನಾಡಬೇಕೆನ್ನುವ ಕನಿಷ್ಠ ಸಂಸ್ಕಾರವಿಲ್ಲದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿಯವರು, ಪ್ರಧಾನಿಗಳ ಬಗ್ಗೆ ತುಚ್ಚ ಪದ ಬಳಸಿ ಯುವಕರಿಗೆ ಕರೆಕೊಟ್ಟಿರುವುದು ಖಂಡನಾರ್ಹ, ಇದು ಅವರ ಸಂಸ್ಕೃತಿ ಎತ್ತಿ ತೊರಿಸುತ್ತದೆ ಎಂದು ಕೇಂದ್ರ ಸಚಿವ ಖೂಬಾ
ಖಂಡಿಸಿದ್ದಾರೆ.

- Advertisement -

ಕಾರಟಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ “ಯುವಕರು. ವಿದ್ಯಾರ್ಥಿಗಳು  ಮೋದಿ ಮೋದಿ ಎನ್ನುತ್ತಾರೆ,  ಅಂತವರ ಕಪಾಳಕ್ಕೆ ಹೊಡೆಯಬೇಕು” ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದರು. ಅದಕ್ಕೆ ಪ್ರತಿಕ್ರಿಯಿಸಿದ ಸಂಸದ ಖೂಬಾ ಅವರು, “ಪ್ರಧಾನಿ ಮೋದಿಜಿಯವರು ದೇಶದ ಅಭಿವೃದ್ದಿಗಾಗಿ ಹಾಕುತ್ತಿರುವ ಶ್ರಮ, ಇಡಿ ವಿಶ್ವಕ್ಕೆ ಗೊತ್ತು, ಅಂತರಾಷ್ಟ್ರೀಯ ಮಟ್ಟದಲ್ಲಿ ಜಗತ್ತಿನ ಎಲ್ಲಾ ದೇಶಗಳು ಇಂದು ನರೇಂದ್ರ ಮೋದಿಯವರ ಸಲಹೆ ಸೂಚನೆಗಳಿಗಾಗಿ ಕಾಯುತ್ತವೆ, ಇಂತಹ ಪ್ರಧಾನಿಗಳನ್ನು ಪಡೆದ ಭಾರತಿಯರು ಧನ್ಯರು” ಎಂದು ಸಚಿವ ಖೂಬಾ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿ, ಇಂತಹ ಪದಗಳು ಬಳಸುವುದು ಬಿಟ್ಟು, ತಮಗೆ ವಹಿಸಿದ ಸಚಿವಾಲಯದ ಕೆಲಸದ ಕಡೆ ಗಮನಹರಿಸಲಿ, ಇಂತಹ ಸಚಿವರ ಹೇಳಿಕೆಗಳಿಂದ ಇಂದು ಈ ರಾಜ್ಯದ ಜನರು ತಲೆ ತಗ್ಗಿಸುವಂತಾಗಿದೆ, ಇಂತವರನ್ನು ಬೆಳೆಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಬರುವ ಚುನಾವಣೆಯಲ್ಲಿ ಜನರೇ ಬುದ್ದಿ ಕಲಿಸುತ್ತಾರೆ” ಎಂದು ಕೇಂದ್ರ ಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದರು.

ಕೂಡಲೇ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಚಿವರ ಪರವಾಗಿ ರಾಜ್ಯದ ಜನರ ಕ್ಷಮೆಯಾಚಿಸಬೇಕು. ಸಚಿವ ಶೀವರಾಜ ತಂಗಡಗಿ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಸಚಿವ
ಖೂಬಾ ಆಗ್ರಹಿಸಿದರು.

ಬಂಜಾರಾ ಸಮಾಜದವರೊಂದಿಗೆ ಹೋಳಿ ಆಚರಣೆ :

ಹೊಳಿ ಹಬ್ಬದ ನಿಮಿತ್ಯ, ಸಂಸದ ಭಗವಂತ ಖೂಬಾರವರ ಮನೆಗೆ ಜಿಲ್ಲೆಯ ಬಂಜಾರಾ ಸಮಾಜದ ತಾಯಂದಿರು, ಸಹೊದರಿಯವರು ಆಗಮಿಸಿ, ಹಾಡು ಹಾಡಿ, ಆಶೀರ್ವದಿಸಿದರು.

ಜೊತೆಗೆ ಸಂಸದರು ಸಹ ಅವರೊಂದಿಗೆ ಅವರ ಹಾಡಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು.

ಈ ಸುದ್ದಿ ಓದಿದ್ದೀರಾ? ಸುರಪುರ ವಿಧಾನಸಭಾ ಉಪ ಚುನಾವಣೆ: ʼಕೈʼ ಹಿಡಿಯುವುದೇ ಅನುಕಂಪದ ಅಲೆ

ಈ ವೇಳೆ ಪಕ್ಷದ ಮುಖಂಡರು, ವಿವಿಧ ಸಂಘಟನೆಯ, ಸಮಾಜದ ಮುಖಂಡರುಗಳು, ಕಟುಂಬದವರು
ಸಚಿವರಿಗೆ ಬಣ್ಣ ಹಚ್ಚಿ, ಮೂರನೆ ಬಾರಿಗೆ ಆಯ್ಕೆಯಾಗಿ ಎಂದು ಶುಭ ಹಾರೈಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ...

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...