ಕಲಬುರಗಿ ನಗರವನ್ನು ಸ್ಮಾರ್ಟ್‌ ಸಿಟಿಯಾಗಿ ರೂಪಿಸಲು ಶಾಸಕರು, ಅಧಿಕಾರಿಗಳೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ

Date:

ಕಲಬುರಗಿ ನಗರವನ್ನು ನಾಗರಿಕ ಸ್ನೇಹಿಯಾಗಿಸಲು ಸ್ಮಾರ್ಟ್‌ ಸಿಟಿಯಾಗಿ ರೂಪಿಸುವ ಸಲುವಾಗಿ ಯೋಜನೆಗಳನ್ನು ಹಮ್ಮಿಕೊಳ್ಳಲು ಪೂರ್ವಭಾವಿಯಾಗಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಶಾಸಕರು, ಅಧಿಕಾರಿಗಳು ಹಾಗೂ ಸಂಸ್ಥೆಗಳೊಂದಿಗೆ ಚರ್ಚೆ ನಡೆಸಿದರು.

- Advertisement -

ಬೆಂಗಳೂರು ನಗರದ ತಮ್ಮ ಕಚೇರಿಗೆ ಮಂಗಳವಾರ ಆಗಮಿಸಿದ್ದು, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಅವರೊಂದಿಗೆ ಸಭೆ ನಡೆಸಿದ ಸಚಿವರು ನಗರದ ಸಮಗ್ರ ಅಭಿವೃದ್ಧಿಗೆ ಪೂರಕವಾಗುವಂತೆ ಕಾರ್ಯಕ್ರಮಗಳನ್ನು ರೂಪಿಸುವ ನಿಟ್ಟಿನಲ್ಲಿ ಹಲವಾರು ಸಲಹೆ, ಸೂಚನೆಗಳನ್ನು ನೀಡಿದರು. ವಿಡಿಯೋ ಸಂವಾದದಲ್ಲಿ ಶಾಸಕರಾದ ಅಲ್ಲಮಪ್ರಭು ಪಾಟೀಲ ಹಾಗೂ ಕನಿಝಾ ಫಾತಿಮಾ ಹಾಗೂ ಕಲಬುರಗಿ ನಗರ ಪಾಲಿಕೆಯ ಆಯುಕ್ತರು, ನಗರ ಯೋಜನಾ ಸಂಸ್ಥೆಯಾದ ಐಐಹೆಚ್‌ಎಸ್‌ ಪ್ರತಿನಿಧಿಗಳು ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

“ನಗರಕ್ಕೆ ಸುಸ್ಥಿರ ನೀರು ಸರಬರಾಜು, ಉತ್ತಮ ರಸ್ತೆ, ಉದ್ಯಾನವನ, ತ್ಯಾಜ್ಯ ಮರುಬಳಕೆ, ತ್ಯಾಜ್ಯ ವಿಲೇವಾರಿ, ಸುಗಮ ವಾಹನ ಸಂಚಾರ, ಆಕರ್ಷಕ ಹಾಗೂ ಅನುಕೂಲಕರ ಬಸ್‌ ತಂಗುದಾಣಗಳ ನಿರ್ಮಾಣ ಮುಂತಾದ ಮೂಲಭೂತ ಸೌಲಭ್ಯಗಳನ್ನು ಉತ್ತಮಪಡಿಸಿ ಕಲಬುರಗಿ ನಗರವನ್ನು ಸ್ಮಾರ್ಟ್‌ ಸಿಟಿಯನ್ನಾಗಿ ಪರಿವರ್ತನೆ ಮಾಡುವ ಗುರಿ ಹೊಂದಲಾಗಿದೆ” ಎಂದು ಸಚಿವರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಮುಕ್ತ ವ್ಯಾಪಾರ ಒಪ್ಪಂದ; ಕೇಂದ್ರ ಸರ್ಕಾರದ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕ ಸಮನ್ವಯ ಸಮಿತಿ ವಿರೋಧ

“ನಗರ ಯೋಜನೆಯನ್ನು ರೂಪಿಸುವಲ್ಲಿ ಪರಿಣಿತ ಸಲಹಾ ಸಂಸ್ಥೆಯಾದ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಹ್ಯೂಮನ್‌ ಸೆಟಲ್ಮೆಂಟ್‌ ಸಂಸ್ಥೆಯು ಸ್ಥಳೀಯ ಶಾಸಕರು ಹಾಗೂ ನಗರಸಭೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕಲಬುರಗಿ ನಗರದ ಉತನ್ನತೀಕರಣಕ್ಕೆ ಸಂಬಂಧಿಸಿದಂತೆ ಉತ್ತಮ ಅಭ್ಯಾಸಗಳನ್ನು ಒಳಗೊಂಡ ವರದಿಯನ್ನು ಐದು ದಿನಗಳ ಒಳಗೆ ಸಲ್ಲಿಸಬೇಕು” ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...