ಭ್ರಷ್ಟ ಪಿಡಿಒಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

Date:

ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಪಿಡಿಒಗಳ ಮೇಲಿನ ತನಿಖೆಯನ್ನು ಚುರುಕುಗೊಳಿಸಿ ಅಂತಹವರ ವಿರುದ್ಧ ಕಾನೂನುಬ‌ದ್ಧವಾಗಿ ಕ್ರಮ ಜರುಗಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ ನೀಡಿದ್ದಾರೆ.

- Advertisement -

ವಿಧಾನಸೌಧದಲ್ಲಿ ರಾಜ್ಯದ ಎಲ್ಲ ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ ಇಲಾಖೆಯನ್ನು ಜನಸ್ನೇಹಿಗೊಳಿಸಲು ಹಲವು ಸಲಹೆ ಸೂಚನೆ ನೀಡಿದರು. ‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ತಳಮಟ್ಟದಲ್ಲಿ ಪಾರದರ್ಶಕ ಆಡಳಿತ ಜಾರಿಗೊಳಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ), ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ಉತ್ತರದಾಯಿಯಾಗಿಸಲು ಹಾಗೂ ಗ್ರಾಮ ಮಟ್ಟದಲ್ಲಿ ಆಡಳಿತ ಚುರುಕುಗೊಳಿಸಲು ನೀತಿ ರೂಪಿಸುವಂತೆ ಎಲ್ಲ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ (ಸಿಇಒ) ಸೂಚನೆ ನೀಡಿದ್ದಾರೆ. ‌

“ಜಿಲ್ಲಾ ಪಂಚಾಯತ್ ಸಿಇಒಗಳು ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರ, ಉಪಾಧ್ಯಕ್ಷರ ನಡುವಿನ ಸಮನ್ವಯತೆ ಹೆಚ್ಚಿಸಲು ಇಲಾಖಾ ವತಿಯಿಂದಲೇ ಪ್ರತಿ ಹದಿನೈದು ದಿನಕ್ಕೊಮ್ಮೆ ಸಮನ್ವಯ ಸಭೆಗಳನ್ನು ನಡೆಸಲು ನಿರ್ದೇಶನ ನೀಡಿದರು. ಜತೆಗೆ ಸಿಇಒಗಳು ಗ್ರಾಮ ಮಟ್ಟದಲ್ಲಿ ಕಡ್ಡಾಯವಾಗಿ ವೈಯಕ್ತಿಕ ಪರಿಶೀಲನೆ ನಡೆಸಬೇಕು” ಎಂದು ಹೇಳಿದರು.

ಇಬ್ಬರು ಎಂಜಿನಿಯರ್‌ಗಳ ಅಮಾನತು: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆಯಲ್ಲಿ ಬೇಜವಾಬ್ದಾರಿ ಹಾಗೂ ಕರ್ತವ್ಯ ಲೋಪದಿಂದ ಕೋಟ್ಯಂತರ ರೂಪಾಯಿ ನಷ್ಟಉಂಟಾಗಲು ಕಾರಣವಾಗಿರುವ ಇಬ್ಬರು ಕಾರ್ಯನಿರ್ವಾಹಕ ಎಂಜಿನಿಯರ್‌ಗಳನ್ನು ಅಮಾನತು ಮಾಡಿ ಆದೇಶಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಸಂವಿಧಾನ ಬದಲಾಯಿಸಲು ಬಂದವರನ್ನೇ ನಾವು-ನೀವು ಬದಲಾಯಿಸಿದ್ದೀವಿ: ಸಿಎಂ ಸಿದ್ದರಾಮಯ್ಯ

ತುಮಕೂರಿನ ಪಂಚಾಯತ್‌ ರಾಜ್‌ ಎಂಜಿನಿಯರ್‌ ವಿಭಾಗದಲ್ಲಿ ವಿಳಂಬ ಧೋರಣೆ, ಬೇಜವಾಬ್ದಾರಿತನ ಹಾಗೂ ಕರ್ತವ್ಯ ನಿರ್ಲಕ್ಷ್ಯತೆಯಿಂದ ಸುಮಾರು 2.76 ಕೋಟಿ ರೂ. ನಷ್ಟಕ್ಕೆ ನೇರ ಕಾರಣವಾಗಿದ್ದ ಕಾರ್ಯಪಾಲಕ ಎಂಜಿನಿಯರ್‌ ಎಸ್‌ ಆರ್‌ ಹರೀಶ್‌ ಎಂಬುವವರನ್ನು ಸೇವೆಯಿಂದ ಅಮಾನತು ಮಾಡಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚಿಸಿದರು.

ಗ್ರಾಮೀಣಾಭಿವೃದ್ಧಿ ಸಚಿವರ ಸೂವನೆ ಅನ್ವಯದಂತೆ ಕಾರ್ಯಪಾಲಕ ಎಂಜಿನಿಯರ್‌ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಜತೆಗೆ ಯಾದಗಿರಿಯ ಪಂಚಾಯತ್‌ ರಾಜ್‌ ಎಂಜಿನಿಯರ್‌ ವಿಭಾಗದಲ್ಲಿ 41 ವಿವಿಧ ಕಾಮಗಾರಿಗಳಲ್ಲಿ ಕರ್ತವ್ಯಲೋಪವೆಸಗಿ ಸರ್ಕಾರಕ್ಕೆ ಒಟ್ಟು 1.3 ಕೋಟಿ ರೂ. ನಷ್ಟ ಉಂಟು ಮಾಡಿದ್ದ ಕಾರ್ಯಪಾಲಕ ಎಂಜಿನಿಯರ್‌ ಬಸವರಾಜ ಕೆ ಹಲಚೇರ ಅವರನ್ನೂ ಸೇವೆಯಿಂದ ಅಮಾನತು ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...