ಘಟಪ್ರಭಾ ಪ್ರವಾಹದಿಂದ ಉಂಟಾಗಿರುವ ಹಾನಿಗೆ ಸೂಕ್ತ ಪರಿಹಾರ ಒದಗಿಸಲು ನಾನೂ ಸಹ ನಿರಂತರವಾಗಿ ಶ್ರಮಿಸುತ್ತಿದ್ದು, ರೈತರು ಹಾಗೂ ಸಂತ್ರಸ್ತರು ಸರ್ಕಾರದೊಂದಿಗೆ ಸಹಕಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಮನವಿ ಮಾಡಿಕೊಂಡಿದ್ದಾರೆ.
ಸರ್ಕಾರದ ಮಟ್ಟದಲ್ಲಿ ಸಂತ್ರಸ್ತರಿಗೆ ಹಾಗೂ ಬೆಳೆಹಾನಿಯಾದ ರೆೈತರಿಗೆ ಎನ್‌ಡಿಆರ್ ಎಫ್ ಹಾಗೂ ಎಸ್‌ಡಿಆರ್‌ಎಫ್ ಅನ್ವಯ ಪರಿಹಾರ ಒದಗಿಸುವ ಸಲುವಾಗಿ ಹಾಗೂ ಪರಿಹಾರ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸುವ ಸಲುವಾಗಿ ಆಗಸ್ಟ್ 6ರಂದು ನಗರದ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ರೆೈತರು, ಸಂತ್ರಸ್ತರು ಹಾಗೂ ಅಧಿ ಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಸಭೆಯಲ್ಲಿ ರೆೈತರ ಬೇಡಿಕೆ ಆಲಿಸಲು ಮುಖ್ಯಮಂತ್ರಿಗಳನ್ನು ಮುಧೋಳ ನಗರಕ್ಕೆ ಕರೆತರಲು ಸಮಯ ಕೇಳಲಾಗುವುದು ಎಂದು ಭರವಸೆ ನೀಡಿದ್ದೆ. ಈ ಕಾರ್ಯದಲ್ಲಿ ನಾನು ನಿರತನಾಗಿದ್ದೇನೆ ಎಂದು ತಿಳಿಯಪಡಿಸುವೆ ಎಂದು ತಿಳಿಸಿದ್ದಾರೆ.
ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕಿವಡಿ, ಕಾಂಗ್ರೆಸ್ ಮುಖಂಡ ಸದುಗೌಡ ಪಾಟೀಲ, ರೆೈತ ಮುಖಂಡರಾದ ಸುಭಾಷ ಶಿರಬೂರ, ದುಂಡಪ್ಪ ಲಿಂಗರಡ್ಡಿ, ದುಂಡಪ್ಪ ಯರಗಟ್ಟಿ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ತಹಸೀಲ್ದಾರ್ ವಿನೋದ ಹತ್ತಳ್ಳಿ ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.