ಹಾಸನ | ಸಮಯಕ್ಕೆ ಸರಿಯಾಗಿ ಸಭೆಗೆ ಆಗಮಿಸದ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಸಚಿವ ರಾಜಣ್ಣ

Date:

  • ಸರಿಯಾದ ಸಮಯಕ್ಕೆ ಆಗಮಿಸಿದ್ದ ಹಾಸನ ಉಸ್ತುವಾರಿ ಸಚಿವ
  • ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಬೇಕು ಎಂದು ತಾಕೀತು

ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಇಂದು ಮೊದಲ ತ್ರೈಮಾಸಿಕ ಕೆಡಿಪಿ ಸಭೆ ನಡೆಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಚೊಚ್ಚಲ ಸಭೆಯಲ್ಲಿ ಸಮಯ ಪಾಲನೆ ಮಾಡದ, ತಪ್ಪು ಮಾಡಿರುವ ಅಧಿಕಾರಿಗಳ ಬೆವರಿಳಿಸಿದರು.

- Advertisement -

ಸರಿಯಾದ ಸಮಯಕ್ಕೆ ಸಚಿವರು ಆಗಮಿಸಿದ್ದರೂ, ಕೆಲ ಅಧಿಕಾರಿಗಳು ಇನ್ನೂ ಬಂದಿರಲಿಲ್ಲ. ಇದರಿಂದ ಗರಂ ಆದ ಸಚಿವರು, ನೀವೆಲ್ಲಾ ಹಿರಿಯ ಅಧಿಕಾರಿಗಳಿದ್ದೀರಾ, ಆದರೆ ಸಕಾಲಕ್ಕೆ ಏಕೆ ಸಭೆಗೆ ಬರುವುದಿಲ್ಲ. ಇದನ್ನು ಇನ್ನು ಮುಂದೆ ನಾನು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕು. ನಾನು ಜಿಲ್ಲೆಗೆ ಏನಾದರೂ ಸಣ್ಣ ಕಾಣಿಕೆ ಕೊಡಬೇಕು. ನನಗೆ ಅದಕ್ಕೆ ಜನ ಅವಕಾಶ ಮಾಡಿಕೊಟ್ಟಿದ್ದಾರೆ. ಯಾವುದೇ ಸರ್ಕಾರ ಇರಲಿ, ಯಾರೇ ಮಂತ್ರಿ ಇರಲಿ, ಅಧಿಕಾರಿಗಳು ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು.

ಸಕಾಲಕ್ಕೆ ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ನೋಟಿಸ್ ನೀಡಿ, ಅದರ ಬಗ್ಗೆ ನನಗೂ ಒಂದು ವರದಿ ಕೊಡಿ. ಯಾವುದೇ ಕಾರಣಕ್ಕೂ ಅಶಿಸ್ತು ಸಹಿಸುವುದಿಲ್ಲ ಎಂದು ಮೊದಲ ಸಭೆಯಲ್ಲಿಯೇ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸುರೇಶ್‌ ಅವರನ್ನು ತರಾಟೆಗೆ ತೆಗೆದುಕೊಂಡ ಸಚಿವರು, ಅಂಗನವಾಡಿಗಳಿಗೆ ಸರಬರಾಜಾದ ಕಳಪೆ ಮೊಟ್ಟೆ ವಿಚಾರವನ್ನು ಪ್ರಸ್ತಾಪಿಸಿದರು. ‘ಮೊಟ್ಟೆ ಕೇಸೂ ನಿಮ್ಮದೇ. ನೀವು ಅಲರ್ಟ್ ಆಗಿದ್ರೆ ದೂರು ಏಕೆ ಬರ್ತವೆ? ಸುಳ್ಳು ಹೇಳಿದ್ರೆ ಅಮಾನತು ಮಾಡುತ್ತೇನೆ’ ಎಂದು ಎಚ್ಚರಿಸಿದರು.

‘ಯಾವ ಏಜೆನ್ಸಿಯೇ ಮೊಟ್ಟೆ ಪೂರೈಕೆ ಮಾಡುತ್ತಿರಲಿ, ಕಳಪೆ ಮೊಟ್ಟೆ ನೀಡಿದವರ ಕ್ರಿಮಿನಲ್ ಕೇಸ್ ಹಾಕಬೇಕು. ಅವನು ತಪ್ಪು ಮಾಡಿದ್ದಕ್ಕೆ ಮೊಟ್ಟೆ ತೆಗೆದುಕೊಳ್ಳುವುದನ್ನು ನಿಲ್ಲಿಸಿದ್ದೀರಿ. ಅದು ಸರಿಯಾದ ಶಿಕ್ಷೆಯಲ್ಲ. ಅವನ ಮೇಲೆ ಕ್ರಿಮಿನಲ್ ಕೇಸ್ ಹಾಕಬೇಕು’ ಎಂದು ಸೂಚಿಸಿದರು.

ಈ ವೇಳೆ ಮಧ್ಯೆ ಪ್ರವೇಶಿಸಿದ ಶಾಸಕ ಕೆ.ಎಂ.ಶಿವಲಿಂಗೇಗೌಡ, ‘ಅಂಗನವಾಡಿ ಮಕ್ಕಳಿಗೆ ಕಳಪೆ ಮೊಟ್ಟೆ ವಿತರಿಸುತ್ತಿದ್ದಾರೆ. ಇದನ್ನು ತಿನ್ನಲಾಗುತ್ತಿಲ್ಲ’ ಎಂದು ದೂರಿದರು.

ಈ ನಡುವೆ ಸಭೆಯಲ್ಲಿ ಮೈಕ್ ವ್ಯವಸ್ಥೆ ಸರಿಯಿಲ್ಲದ ಬಗ್ಗೆ ಗರಂ ಆದ ಸಚಿವರು, ಜಿಪಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಮೈಕ್ ಯಾಕೆ ಸರಿ ಇಲ್ಲಪ್ಪ ಎಂದು ಸಚಿವರು ಪ್ರಶ್ನಿಸಿದ ವೇಳೆ, ‘ಹೊಸ ಕಟ್ಟಡ ರೆಡಿ ಆಗ್ತಾ ಇದೆ’ ಎಂದು ಅಧಿಕಾರಿಗಳು ಸ್ಪಷ್ಷನೆ ನೀಡಿದರು. ‘ಹೊಸ ಕಟ್ಟಡ ಆಗೋವರೆಗೆ ಇಲ್ಲಿಗೆ ಸರಿಯಾದ ಮೈಕ್ ಬೇಡವೇ?’ ಎಂದು ಪ್ರಶ್ನಿಸಿದರು.

ಇದೇ ವೇಳೆ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳಿಗೂ ಸಚಿವ ರಾಜಣ್ಣ ಕ್ಲಾಸ್ ತೆಗೆದುಕೊಂಡ ಬಳಿಕ, ಇನ್ಮುಂದೆ ಸರಿಯಾಗಿ ಕೆಲಸ ಮಾಡಬೇಕೆಂದು ಸೂಚಿಸಿದರು.

ಆಯುಕ್ತರ ವಿರುದ್ಧ ಆಕ್ರೋಶ
ನಗರಸಭೆ ಅಧಿಕಾರಿಗಳು ಅಧಿವೇಶನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಶಾಸಕ ಸ್ವರೂಪ್ ಪ್ರಕಾಶ್ ಸಚಿವರ ಗಮನಕ್ಕೆ ತಂದರು.

ಸ್ವಚ್ಚತೆ, ನೀರಿನ ವ್ಯವಸ್ಥೆ, ಸೌಕರ್ಯ ಸಂಪೂರ್ಣ ಚೆನ್ನಾಗಿದೆ ಎಂದು ತಪ್ಪು ಮಾಹಿತಿ ಕೊಟ್ಟಿದ್ದಾರೆ. ಸೆಷನ್‌ನಲ್ಲಿ ಪ್ರಶ್ನೆ ಕೇಳಿದ್ದೆ, ಉತ್ತರ ತಪ್ಪಾಗಿ ನೀಡಿದ್ದಾರೆಂದರು. ತಪ್ಪು ಮಾಹಿತಿ ಕೊಟ್ಟಿದ್ದ ನಗರಸಭೆ ಕಮಿಷನರ್ ವಿರುದ್ಧ ಸಚಿವರು ಗರಂ ಆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜನರ ಬಳಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...