ರಾಜ್ಯೋತ್ಸವದಂದು ಕನ್ನಡ ಶಾಲೆಗೆ ನೆರವಿನ ಹಸ್ತ ಚಾಚಿದ ‘ಸಂತೋಷ್ ಲಾಡ್ ಫೌಂಡೇಶನ್’

Date:

ಬೆಂಗಳೂರು ದಕ್ಷಿಣ ಜಿಲ್ಲೆ ಆನೇಕಲ್‌ ತಾಲೂಕಿನ ಹೆಬ್ಬಗೋಡಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಕ್ರೀಡಾ ಪರಿಕರಗಳನ್ನು ನೀಡಲಾಗಿದೆ.

- Advertisement -

ಶಾಲೆಯಲ್ಲಿ ಕ್ರೀಡಾ ಪರಿಕರಗಳು ಇಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಶಾಲೆಯ ಹಳೆಯ ವಿದ್ಯಾರ್ಥಿಯೊಬ್ಬರು ಸಂತೋಷ್‌ ಲಾಡ್‌ ಫೌಂಡೇಶನ್‌ಗೆ ಮನವಿ ಮಾಡಿಕೊಂಡಿದ್ದರು. ಇದಕ್ಕೆ ಸ್ಪಂದಿಸಿರುವ ಫೌಂಡೇಶನ್‌ ಶಾಲೆಗೆ ಮಕ್ಕಳಿಗೆ ಅಗತ್ಯವಾಗಿ ಬೇಕಾದ ಎಲ್ಲಾ ಸಾಮಗ್ರಿಗಳನ್ನು ನೀಡಿ ಅನುಕೂಲ ಮಾಡಿಕೊಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ನೂರು ವರ್ಷ ಹಳೆಯ ಈ ಶಾಲೆಯಲ್ಲಿ ಪ್ರತಿಭಾವಂತರ ಮಕ್ಕಳಿದ್ದು, ಕ್ರೀಡೆಯಲ್ಲೂ ಸಾಕಷ್ಟು ಚಟುವಟಿಕೆಗೆ ಹೆಸರು ಮಾಡಿತ್ತು. ಆದರೆ ವಿದ್ಯಾರ್ಥಿಗಳಿಗೆ ಕ್ರೀಡಾ ಸಾಮಗ್ರಿಗಳ ಕೊರತೆಯಿಂದ ತೊಂದರೆಯಾಗಿತ್ತು. ಇದೀಗ ಸಂತೋಷ್‌ ಲಾಡ್‌ ಫೌಂಡೇಶನ್‌ ಇವರಿಗೆ ಅನುಕೂಲ ಮಾಡಿಕೊಟ್ಟಿದೆ. ಕರ್ನಾಟಕ ರಾಜ್ಯೋತ್ಸವದ ದಿನವೇ ಕ್ರೀಡಾ ಸಾಮಗ್ರಿಗಳನ್ನು ವಿತರಿಸಿ ಶಾಲೆಯಲ್ಲಿನ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿದೆ.

ನೂರು ವರ್ಷ ಹಳೆಯ ಈ ಶಾಲೆಯಲ್ಲಿ ಸದ್ಯ 1200 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಇಷ್ಟು ಮಕ್ಕಳಿದ್ದರೂ ಸರಿಯಾದ ಕ್ರೀಡಾ ಸಾಮಗ್ರಿಗಳು ಇರಲಿಲ್ಲ. ಬೆಂಗಳೂರಿನಲ್ಲೇ ಅತ್ಯುತ್ತಮ ಶಾಲೆ ಎಂಬ ಹೆಸರನ್ನೂ ಈ ಶಾಲೆ ಪಡೆದಿತ್ತು. ಇತ್ತೀಚೆಗೆ ದೈಹಿಕ ಶಿಕ್ಷಣ ಶಿಕ್ಷಕರಿಲ್ಲದೆ ಸಮಸ್ಯೆಯಾಗಿತ್ತು. ಈಗ ಶಿಕ್ಷಕರನ್ನು ನಿಯೋಜಿಸಲಾಗಿತ್ತು. ಆದರೆ ಕ್ರೀಡೆಗೆ ಪರಿಕರಗಳಿರಲಿಲ್ಲ. ಇದೀಗ ಸಂತೋಷ್‌ ಲಾಡ್‌ ಫೌಂಡೇಶನ್‌ ಇದೆಲ್ಲದಕ್ಕೆ ಪರಿಹಾರ ಒದಗಿಸಿದೆ ಎಂದು ಶಾಲಾ ಮಂಡಳಿ ಸಂತಸ ವ್ಯಕ್ತಪಡಿಸಿದೆ.

ಮಕ್ಕಳ ಸಹಾಯಕ್ಕೆ ಮುಂದಾದ ಹಳೇ ವಿದ್ಯಾರ್ಥಿ: ಈ ಶಾಲೆಯಲ್ಲಿ ಕ್ರೀಡಾ ಸಾಮಗ್ರಿಗಳು ಇಲ್ಲ ಎಂಬುದನ್ನು ತಿಳಿದ ಹಳೆಯ ವಿದ್ಯಾರ್ಥಿ ಕುಮಾರ್‌ ಎಂಬುವರು ಮಕ್ಕಳಿಗೆ ಏನಾದರೂ ಸಹಾಯ ಮಾಡಬೇಕು ಎಂದು ಯೋಚಿಸಿದರು. ಆಗ ಅವರಿಗೆ ನೆನಪಿಗೆ ಬಂದಿದ್ದೇ ಸಂತೋಷ್‌ ಲಾಡ್‌ ಫೌಂಡೇಶನ್‌. ಫೌಂಡೇಶನ್‌ ಹಲವಾರು ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುವುದನ್ನು ಸಾಮಾಜಿಕ ಮಾಧ್ಯಮದ ಮೂಲಕ ತಿಳಿದ ಅವರು, ಫೌಂಡೇಶನ್‌ ಸಂಪರ್ಕ ಮಾಡಿದರು. ಸದ್ಯ ಬೆಂಗಳೂರಿನ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಕುಮಾರ್‌ ಅವರು ಈ ಶಾಲೆಯಲ್ಲಿ ಹೈಸ್ಕೂಲ್‌ ವರೆಗೆ ಓದಿದ್ದಾರೆ. ತಾನು ಓದಿದ ಶಾಲಾ ಮಕ್ಕಳಿಗೆ ಸಹಾಯ ಮಾಡಬೇಕು ಎಂಬ ಅವರ ಆಸೆಗೆ ಫೌಂಡೇಶನ್‌ ಬೆಂಬಲ ನೀಡಿತು.

ಸಾಕಷ್ಟು ಸಹಾಯ ಮತ್ತು ಒಳ್ಳೆಯದಾಯಿತು: ಸಂತೋಷ್‌ ಲಾಡ್‌ ಫೌಂಡೇಶನ್‌ ಸಂಪರ್ಕ ಮಾಡಿದಾಗ ಅವರು ಸಕಾರಾತ್ಮಕವಾಗಿ ಸ್ಪಂದಿಸಿದರು. ಮಕ್ಕಳಿಗೆ ಅತ್ಯುತ್ತಮವಾದ ಕ್ರೀಡಾ ಸಾಮಗ್ರಿಗಳು ಹಾಗೂ ಇತರೆ ಪರಿಕರಗಳನ್ನು ನೀಡಿದರು. ಇದರಿಂದ ಮಕ್ಕಳಿಗೆ ಅನುಕೂಲವಾಗಿದೆ. ಸಂತೋಷ್‌ ಲಾಡ್‌ ಫೌಂಡೇಶನ್‌ ಸಹಕಾರವನ್ನು ಎಂದೂ ಮರೆಯಲಾಗದು ಎಂದು ಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು | ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ

ಫೌಂಡೇಶನ್‌ ನೆರವನ್ನು ಸದಾ ಸ್ಮರಿಸುತ್ತೇವೆ: ನಮ್ಮ ಶಾಲೆಯ ಮಕ್ಕಳು ಸಾಕಷ್ಟು ಪ್ರತಿಭಾವಂತರು. ಇವರಿಗೆ ಕ್ರೀಡಾ ಸಾಮಗ್ರಿಗಳ ಅವಶ್ಯಕತೆ ಇತ್ತು. ಅದನ್ನು ಹಳೇ ವಿದ್ಯಾರ್ಥಿ ಸಂಘದೊಂದಿಗೆ ಚರ್ಚೆ ಮಾಡಿದೆವು. ಅವರು ಸಂತೋಷ್‌ ಲಾಡ್‌ ಫೌಂಡೇಶನ್‌ ಬಗ್ಗೆ ತಿಳಿಸಿದರು. ಈ ಸಾಕಷ್ಟು ಸಾಮಗ್ರಿಗಳು ಬಂದಿವೆ. ಸಚಿವ ಸಂತೋಷ್‌ ಲಾಡ್‌ ಅವರಿಗೆ ಧನ್ಯವಾದಗಳು. ಈ ನೆರವನ್ನು ನಾವು ಸದಾ ಸ್ಮರಿಸುತ್ತೇವೆ ಎಂದು ಶಿಕ್ಷಕಿ ಪವಿತ್ರಾ ತಿಳಿಸಿದ್ದಾರೆ.

ಸಂತೋಷ್‌ ಲಾಡ್‌ ಫೌಂಡೇಶನ್‌ ನೆರವಿನ ವ್ಯಾಪ್ತಿ ಇನ್ನಷ್ಟು ವಿಸ್ತಾರ: ಸಂತೋಷ್‌ ಲಾಡ್‌ ಫೌಂಡೇಶನ್‌ ಹಲವಾರು ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುತ್ತಾ ಬರುತ್ತಿದೆ. ಜಿಲ್ಲೆಯ ವ್ಯಾಪ್ತಿಯ ಮಿತಿಯಿಲ್ಲದೆ ರಾಜ್ಯದ ವಿವಿಧ ಭಾಗದ ವಿದ್ಯಾರ್ಥಿಗಳಿಗೆ, ಜನರಿಗೆ ನೆರವು ಒದಗಿಸುತ್ತಿದೆ. ಇದೀಗ ಆನೇಕಲ್‌ ತಾಲೂಕಿನ ಶಾಲೆಗೆ ಕ್ರೀಡಾ ಸಾಮಗ್ರಿ ಒದಗಿಸುವುದರೊಂದಿಗೆ ಫೌಂಡೇಶನ್‌ ನೆರವಿನ ವ್ಯಾಪ್ತಿ ಇನ್ನಷ್ಟು ಹೆಚ್ಚಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ ಪ್ರಕರಣ!

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ...