ರಾಯಚೂರು | ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ಎಲ್ಲರೂ ಕೈ ಜೋಡಿಸಿ, ಸಚಿವ ಶರಣಪ್ರಕಾಶ್‌ ಪಾಟೀಲ್

Date:

ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ವಿಫುಲ ಅವಕಾಶಗಳಿದ್ದು, ಪ್ರಾಮಾಣಿಕತೆ, ನಿಸ್ವಾರ್ಥತೆ ಹಾಗೂ ಕಳಕಳಿಯಿಂದ ಎಲ್ಲರೂ ಕೈ ಜೋಡಿಸಿ ಕಾರ್ಯನಿರ್ವಹಿಸಿದಾಗ ಯಶಸ್ವಿಯಾಗಲು ಸಾಧ್ಯವೆಂದು ಜಿಲ್ಲಾ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್ ಹೇಳಿದ್ದಾರೆ.

- Advertisement -

ರಾಯಚೂರು ವಿಜ್ಞಾನ ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ 70ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಗದುಗಿನ ಸಿದ್ದನಗೌಡ ಪಾಟೀಲ್ ಇವರು ಪ್ರಾರಂಭಿಸಿರುವ ಸಹಕಾರಿ ಚಳವಳಿ ರಾಜ್ಯ, ದೇಶ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆದು ನಿಂತಿದೆ. ಗುಜರಾತ್, ಮಹಾರಾಷ್ಟ್ರ ಸೇರಿದಂತೆ ಎಲ್ಲ ಕಡೆಯೂ ಸಹಕಾರಿ ಚಳವಳಿ ಅಭಿವೃದ್ದಿಯತ್ತ ಹೆಜ್ಜೆಯಿಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕಾಲಕ್ರಮೇಣ ಸ್ವಾರ್ಥ ಸೇರಿಕೊಂಡು ಅನೇಕ ಹೆಸರಾಂತ ಸಹಕಾರಿ ಸಂಘಗಳು ವಿನಾಶದತ್ತ ಹೋಗಿವೆ. ನೈತಿಕ ಅಧಃಪತನ ತಾಂಡವವಾಡುತ್ತಿರುವಾಗ, ಸಹಕಾರಿ ಸಂಘಗಳು ನಷ್ಟದ ಹಾದಿ ಹಿಡಿದಿರುವದು ಕಳವಳಕಾರಿ. ಯುವಕರು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಸಮಾಜಕ್ಕೆ ಸೇವೆ ಸಲ್ಲಿಸಲು ಸಮಾನತೆಯಿಂದ ಎಲ್ಲರೂ ಒಂದಾಗಿ ಕಾರ್ಯನಿರ್ವಹಿಸುವ ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕಿದೆ. ಹಿರಿಯ ಸಹಕಾರಿಗಳು ಯುವಕರಿಗೆ ಮಾರ್ಗದರ್ಶನ ನೀಡಿ ಮಾದರಿಯ ಸಹಕಾರಿ ಸಂಘಗಳು ಹೆಚ್ಚು ಹೆಚ್ಚು ಹುಟ್ಟಿಗೆ ಕಾರಣವಾಗಬೇಕಿದೆ ಎಂದರು.

ಕೇವಲ ಸೇವೆಗೆ ಸಹಕಾರಿ ಸಂಘಗಳು ಸೀಮಿತವಾಗದೇ ಹೊಸ ಹೊಸ ಯೋಜನೆಗಳು, ಯೋಚನೆಗಳ ಮೂಲಕ ವ್ಯಾಪಾರಿ ದೃಷ್ಟಿಯಿಂದಲೂ ಯೋಚಿಸಬೇಕಿದೆ. ಪ್ರತಿ ಕುಟುಂಬದ ಆದಾಯ ಹೆಚ್ಚಿಸಲು ಸಹಕಾರಿ ಸಂಘಗಳಿಂದ ಮಾತ್ರ ಸಾಧ್ಯವಿದೆ. ಪ್ರತಿ ಕುಟುಂಬದ ಆರ್ಥಿಕ ಅಭಿವೃದ್ದಿ ಸಮಾಜದ ಅಭಿವೃದ್ದಿಯಾಗಲಿದೆ. ಅನೇಕ ಸಹಕಾರಿಗಳ ನಿರಂತರ ನಿಸ್ವಾರ್ಥ ಪ್ರಯತ್ನ ಯಶಸ್ಸಿಗೆ ಕಾರಣವಾಗಿದೆ ಎಂದರು.

ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಮಾತನಾಡಿ, ಸಹಕಾರಿ ಚಳವಳಿಯಲ್ಲಿ ಹೆಚ್ಚು ಹೆಚ್ಚು ಜನರು ತೊಡಗಿಸಿಕೊಳ್ಳುವ ಅವಶ್ಯಕತೆಯಿದೆ. ಹೊಸ ಹೊಸ ಜನರು ಸದಸ್ಯತ್ವ ಪಡೆಯುವದರಿಂದ ಸಹಕಾರಿ ಕ್ಷೇತ್ರದ ಬೆಳವಣಿಗೆ ಸಾಧ್ಯವಿದೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಸಹಕಾರಿ ರಂಗಕ್ಕೆ ಹೆಚ್ಚು ಒತ್ತು ನೀಡಲು ಸರ್ಕಾರ ಮುಂದಾಗಿದೆ. ಸಹಕಾರಿ ಕ್ಷೇತ್ರದಲ್ಲಿ ಹೊಸ ಹೊಸ ಚಿಂತನೆಗಳು, ಪ್ರಯೋಗಗಳು ನಡೆದು ಜನರನ್ನು ತಲುಪಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ಸಹಕಾರಿಗಳಾದ ವೀರುಪನಗೌಡ ಇಟಗಿ, ಮಲ್ಲನಗೌಟ ಮಟ್ಟೂರು, ಮಲ್ಲಪ್ಪ ಪಾಟೀಲ್, ಎನ್.ವಿ.ಪಾಟೀಲ್, ಮಂಜುಳಾ ಪಾಟೀಲ್ ಸಿಂಧನೂರು ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಅನೇಕ ಸಹಕಾರಿ ಸಂಘಗಳನ್ನು ಸಹ ಗೌರವಿಸಲಾಯಿತು.

ವೇದಿಕೆಯಲ್ಲಿ ಶಾಸಕರುಗಳಾದ ಹಂಪನಗೌಡ ಬಾದರ್ಲಿ, ಹಂಪಯ್ಯನಾಯಕ, ಬಸನಗೌಡ ದದ್ದಲ್, ಕರಿಯಮ್ಮ ನಾಯಕ ಚಿಂತಲಕುಂಟಿ, ವಿಧಾನ ಪರಿಷತ್ ಸದಸ್ಯ ಶರಣಗೌಡ ಭಯ್ಯಾಪುರು, ಮಹಾಂತೇಶ ಪಾಟೀಲ್ ಅತ್ತನೂರು, ವಿಶ್ವನಾಥ ಪಾಟೀಲ್ ತೋರಣದಿನ್ನಿ, ವಿಜಯಕುಮಾರ್ ಶಾವಂತಗೇರಿ‌, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್, ಉಪಾಧ್ಯಕ್ಷ ಬಷೀರುದ್ದೀನ್ ಸೇರಿ ಅನೇಕರಿದ್ದರು.

ಜಿಲ್ಲಾಧಿಕಾರಿ ಚಂದ್ರಶೇಖರನಾಯಕ, ಜಿಲ್ಲಾ ಪಂಚಾಯ್ತಿ ಸಿಇಒ ರಾಹುಲ ತುಕಾರಾಂ ಪಾಂಡ್ವೆ, ಸಹಕಾರ ಸಂಘಗಳ ಅಪರ ನಿಬಂಧಕ ಎಚ್.ಬಾಲಶೇಖರ, ರಾಜ್ಯ ಸಹಕಾರ ಮಹಾಮಂಡಲದ ವ್ಯವಸ್ಥಾಪಕ ನಿರ್ದೇಶಕ ಕೆ.ಎಸ್.ನವೀನ್, ಎಣ್ಣೆ ಬೀಜ ಬೆಳೆಗಾರರ ಸಂಘ ಜಿ.ಸಿ.ರೆಡ್ಡಿ, ಸಹಕಾರ ಗ್ರಾಹಕ ಮಹಾಮಂಡಳದ ಅಪರ ನಿಬಂಧಕ ಡಾ.ಗುರುಸ್ವಾಮಿ, ಪಟ್ಟಣ ಸಹಕಾರ ಬ್ಯಾಂಕ್ ಮುಖ್ಯ ಕಾರ್ಯನಿರ್ವಾಹಕ ಅಧೀಕಾರಿ ಪುಂಡಲೀಕ ಕೆರೂರು, ಜಿಲ್ಲಾ ಸಹಕಾರಿ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶನ ಐ.ಎಸ್.ಗಿರೆಡ್ಡಿ ಸೇರಿದಂತೆ ಅನೇಕ ಸಹಕಾರಿಗಳು ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...