ಹಳಬರು ಎರಡೂವರೆ ವರ್ಷಕ್ಕೆ ಸಚಿವ ಸ್ಥಾನದಿಂದ ಕೆಳಗಿಳಿಯಬೇಕು: ಕೆ ಎಚ್‌ ಮುನಿಯಪ್ಪ ಸಲಹೆ

Date:

  • ‘ದೇಶದಲ್ಲಿ ಹೊಸ ಪರಂಪರೆಗೆ ಕಾಂಗ್ರೆಸ್ ಮುನ್ನುಡಿ ಬರೆಯಬೇಕು’
  • ‘ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೂ ಪ್ರಮುಖ ಹುದ್ದೆ ನೀಡಿ’

ಸಚಿವ ಸಂಪುಟ ಪುನಾರಚನೆ ಬಗ್ಗೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ ಎಚ್‌ ಮುನಿಯಪ್ಪ ಸಲಹೆ ನೀಡಿದ್ದು, “ಮೊದಲ ಬಾರಿ ಸಚಿವರಾಗಿರುವವರನ್ನು ಹೊರತುಪಡಿಸಿ ಹಳಬರೆಲ್ಲರೂ ಎರಡೂವರೆ ವರ್ಷಕ್ಕೆ ಸಚಿವ ಸ್ಥಾನದಿಂದ ಕೆಳಗಿಳಿಯಬೇಕು” ಎಂದು ಹೇಳಿದ್ದಾರೆ.

- Advertisement -

ಸೋಮವಾರ ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, “ಹಳಬರು ಎರಡೂವರೆ ವರ್ಷಕ್ಕೆ ಇಳಿದು ಹೊಸಬರಿಗೆ ಅವಕಾಶ ಕಲ್ಪಿಸಬೇಕು. ಇದರಿಂದ ಉಳಿದವರಿಗೂ ಅವಕಾಶ ಮಾಡಿಕೊಟ್ಟಂತಾಗುತ್ತದೆ. ಈ ಮೂಲಕ ನಾವು ದೇಶದಲ್ಲಿ ಹೊಸ ಪರಂಪರೆಗೆ ಮುನ್ನುಡಿ ಬರೆದಂತಾಗುತ್ತದೆ ಎಂಬುದು ನನ್ನ ವೈಯಕ್ತಿಕ ಸಲಹೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರಿಗೆ ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನ ಕಲ್ಪಿಸಬೇಕು. ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೂ ಪ್ರಮುಖ ಹುದ್ದೆ ನೀಡಬೇಕು” ಎಂದು ಅಭಿಪ್ರಾಯಪಟ್ಟರು.

“ಪಕ್ಷ ಮತ್ತು ಸರ್ಕಾರದಲ್ಲಿ ಭಿನ್ನಾಭಿಪ್ರಾಯ ಇದ್ದರೆ ಅದನ್ನು ಬಹಿರಂಗವಾಗಿ ಚರ್ಚಿಸಬಾರದು. ಅದಕ್ಕೆ ಅವಕಾಶವನ್ನು ಯಾವುದೇ ಕಾರಣಕ್ಕೂ ಮಾಡಿಕೊಡಬಾರದು” ಎಂದು ಕಾಂಗ್ರೆಸ್ ಮುಖಂಡ ಎಂ. ವೀರಪ್ಪ ಮೊಯಿಲಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...

ಮಂಗಳೂರು | ಯುಪಿಐಗೆ ಶುಲ್ಕ? ‘ಡಿಜಿಟಲ್ ಇಂಡಿಯಾ’ ಆಶಯಕ್ಕೆ ವಿರುದ್ಧ: ಪದ್ಮರಾಜ್ ಪೂಜಾರಿ

ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಿಲುವು...