ಅಲ್ಪಸಂಖ್ಯಾತರ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿದ ಸಚಿವ ಝಮೀರ್ ಅಹಮದ್: ಅವ್ಯವಸ್ಥೆ ಕಂಡು ಕೆಂಡಾಮಂಡಲ!

Date:

Advertisements
  • ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ ಅಮಾನತುಗೊಳಿಸಿದ ಸಚಿವ
  • ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸದಲ್ಲಿರುವ ವಕ್ಪ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ

ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ ವಸತಿ, ವಕ್ಪ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಝಮೀರ್ ಅಹಮದ್ ಖಾನ್ ಅವರು ಅಲ್ಪಸಂಖ್ಯಾತರ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ದಿಢೀರ್ ಹಾಸ್ಟೆಲ್ ಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕಂಡು ಕೆಂಡಾ ಮಂಡಲವಾದರು.

ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರ ಜೊತೆಗೆ ನಗರದ ವೆಲೆನ್ಸಿಯಾ ರಸ್ತೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿದರು. ಈ ವೇಳೆ ಹಾಸ್ಟೆಲ್‌ನಲ್ಲಿ ಶುಚಿತ್ವ ಕಾಪಾಡದಿರುವುದು, ಶೌಚಾಲಯ ನಿರ್ವಹಣೆ ಸರಿ ಇಲ್ಲದಿರುವುದು ಕಂಡು ಬಂದಿದೆ.

ಇದೇ ವೇಳೆ ಅಲ್ಲಿನ ವಿದ್ಯಾರ್ಥಿಗಳು, “ಗುಣಮಟ್ಟದ ಆಹಾರ ಕೊಡುತ್ತಿಲ್ಲ, ವಾರಕ್ಕೊಮ್ಮೆ ಚಿಕನ್ ನೀಡದೇ ಹದಿನೈದು ದಿನಕ್ಕೆ ಚಿಕನ್ ನೀಡಲಾಗುತ್ತಿದೆ. ನಿಯಮದ ಪ್ರಕಾರ ಆಹಾರ ನೀಡುತ್ತಿಲ್ಲ” ಎಂದು ಸಚಿವರಲ್ಲಿ ದೂರಿದರು.

Advertisements

“ಐದು ವರ್ಷ ಆದರೂ ಬೆಡ್ ಶೀಟ್ ಕೊಟ್ಟಿಲ್ಲ, ತಲೆದಿಂಬು ಇಲ್ಲ, ನಮ್ಮ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ” ಎಂದು ಸಚಿವರ ಸಮ್ಮುಖದಲ್ಲಿ ಆರೋಪಿಸಿದರು.

ತಕ್ಷಣ ಸಚಿವರು ತಾಲೂಕು ವಿಸ್ತರಣಾ ಅಧಿಕಾರಿ ಮಂಜುನಾಥ್ ಅವರನ್ನು ಸ್ಥಳದಲ್ಲೇ ಅಮಾನತು ಮಾಡಿ ಆದೇಶ ಹೊರಡಿಸಿದರು.

ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಜಿನೇಂದ್ರ ಹಾಗೂ ವಾರ್ಡನ್ ಅಶೋಕ್ ಅವರಿಗೆ ಶೋಕಾಸ್ ನೋಟಿಸ್ ನೀಡಲು ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X