14 ವರ್ಷದ ಅಪ್ತಾಪ್ತ ಬಾಲಕಿಯ ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ, ಅಮಾನುಷ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಬೆಳಗಾವಿಯ ನಾನಾವಾಡಿಯಲ್ಲಿ ಆರೋಪಿ ಬಾಲಕರು ಸಂತ್ರಸ್ತ ಬಾಲಕಿಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ, ಪಾರ್ಟಿ ಮಾಡಿ, ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ.
ಈ ಅಮಾನುಷ ಘಟನೆ ಮೇ 6ರಂದು ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರು ಆರೋಪಿ ಬಾಲಕರನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.
ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾದ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.