ಬೀದರ್‌ | ʼಗಾಂಧಿ ಗ್ರಾಮʼ ಪುರಸ್ಕೃತ ಪಂಚಾಯತಿಯಲ್ಲಿ ಅವ್ಯವಹಾರ; ತನಿಖೆಗೆ ಆಗ್ರಹ

Date:

ಬೀದರ್‌ ತಾಲೂಕಿನ ಆಣದೂರು ಗ್ರಾಮ ಪಂಚಾಯತಿಯಲ್ಲಿ ಮನರೇಗಾ ಯೋಜನೆಯಡಿ ಅವ್ಯವಹಾರ ನಡೆದಿದ್ದು, ಸೂಕ್ತ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಖಾದರನಗರ ಗ್ರಾಮಸ್ಥರಾದ ಗೋವಿಂದ ಜಾಲಿ ಹಾಗೂ ಅನೀಲ್ ಸೈಯದಪ್ಪ ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದ ಅವರು, “ಆಣದೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಖಾದರನಗರ ಗ್ರಾಮದಲ್ಲಿ ಮಹಾದೇವ ಮಂದಿರ ಹತ್ತಿರ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿರುವ ಗುಂಡಿ ಹಾಗೂ ಸಸಿ ನೆಡುವ ಕಾಮಗಾರಿಯಲ್ಲಿ ಅವ್ಯವಾಹರ ನಡೆದಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“2023- 24ನೇ ಸಾಲಿನ ಮನರೇಗಾ ಯೋಜನೆ ಅಡಿಯಲ್ಲಿ ಖಾದರನಗರ ಗ್ರಾಮದಲ್ಲಿ ಅಂದಾಜು 2 ಲಕ್ಷ ರೂ. ಅನುದಾನದಲ್ಲಿ ಕೇವಲ 80 ಗುಂಡಿ ಮಾತ್ರ ತೋಡಿ ಸಸಿ ನೆಟ್ಟಿದ್ದಾರೆ. ಈ ಕಾಮಗಾರಿಯಲ್ಲಿ ಉದ್ಯೋಗ ಖಾತ್ರಿಯಲ್ಲಿ ಕೆಲಸ ನಿರ್ವಹಿಸುವ ಕೂಲಿ ಕಾರ್ಮಿಕರಿಗೆ ಕೆಲಸ ನೀಡದೆ ಕೆಲಸ ಮಾಡದೇ ಇರುವ ಕಾರ್ಮಿಕರ ಖಾತೆಗೆ ಕೂಲಿ ಹಣ ವರ್ಗಾಯಿಸಿದ್ದಾರೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಅನುಮತಿ ಇಲ್ಲದೆ ಪಟಾಕಿ ಅಂಗಡಿ ತೆರೆದರೆ ಕ್ರಿಮಿನಲ್ ಪ್ರಕರಣ; ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಎಚ್ಚರಿಕೆ

ಈ ಅವ್ಯವಹಾರದಲ್ಲಿ ಭಾಗಿಯಾದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಮನರೇಗಾ ಸಹಾಯಕ ಇಂಜಿನಿಯರ್ ಅವರು ಸರ್ಕಾರದ ಹಣ ಲೂಟಿ ಹೊಡೆದು ಸರ್ಕಾರಕ್ಕೆ ನಷ್ಟ ಉಂಟು ಮಾಡಿದ್ದಾರೆ. ಸದರಿ ಕಾಮಗಾರಿ ಬಿಲ್ ತಡೆಹಿಡಿದು ತಪ್ಪಿಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಈ ಬಗ್ಗೆ ಕುಲಂಕುಶವಾಗಿ ಪರಿಸೀಲಿಸಿ ನಿಜವಾದ ಕೂಲಿ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕೆಂದು” ಅವರು ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...