ಶಿವಮೊಗ್ಗ | ಆನೆ ಬಾಲ ಕತ್ತರಿಸಲು ಯತ್ನಿಸಿದ ದುಷ್ಕರ್ಮಿಗಳು; ತನಿಖೆಗೆ ತಂಡ ರಚನೆ

Date:

Advertisements

ಗರ್ಭಿಣಿ ಆನೆಯೊಂದರ ಬಾಲವನ್ನು ಕತ್ತರಿಸಲು ದುಷ್ಕರ್ಮಿಗಳು ಯತ್ನಿಸಿದ್ದು, ಆನೆಯ ಬಾಲದಲ್ಲಿ ಗಂಭೀರ ಗಾಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಆನೆ ಬಿಡಾರದಲ್ಲಿ ನಡೆದಿದೆ.

ಬಿಡಾರದ ಭಾನುಮತಿ ಎಂಬ ಸಾಕಾನೆಯ ಬಾಲದಲ್ಲಿ ಗಾಯವಾಗಿದೆ. ಬಿಡಾರದ ಆನೆಗಳನ್ನು ಪ್ರತಿದಿನ ಮಧ್ಯಾಹ್ನ ಕಾಡಿಗೆ ಬಿಡಲಾಗುತ್ತದೆ. ಮರುದಿನ ಬೆಳಿಗ್ಗೆ ಮರಳಿ ಬಿಡಾರಕ್ಕೆ ಕರೆತರಲಾಗುತ್ತದೆ.ಅದೇ ರೀತಿ ಸೋಮವಾರ ಭಾನುಮತಿ ಆನೆಯನ್ನು ಕಾಡಿನಿಂದ ಕರೆತರಲು ಸಿಬ್ಬಂದಿಗಳು ಹೋದಾಗ, ದಾರಿಯಲ್ಲಿ ರಕ್ತ ಬಿದ್ದಿರುವುದು ಕಂಡುಬಂದಿದೆ.

ಆನೆ ಮರಿ ಹಾಕಿರಬಹುದೆಂದು ಭಾವಿಸಿ ಆನೆಯ ಬಳಿ ಸಿಬ್ಬಂದಿಗಳು ತೆರಳಿದ್ದಾರೆ. ಈ ವೇಳೆ, ಆನೆಯ ಬಾಲ ಸುಮಾರು 2 ಇಂಚು ಆಳಕ್ಕೆ ಕೋಯ್ದುಕೊಂಡಿರುವುದು ಕಂಡುಬಂದಿದೆ. ನುಣುಪಾದ ಆಯುಧದಿಂದ ಕೊಯ್ದಿರುವಂತೆ ಕಂಡುಬಂದಿದೆ ಎಂದು ತಿಳಿದುಬಂದಿದೆ.

Advertisements

ಆನೆಯನ್ನು ಬಿಡಾರಕ್ಕೆ ಕರೆತರಾಗಿದ್ದು, ವೈದ್ಯರು ಚಿಕಿತ್ಸೆ ನೀಡಿ, ಹೊಲಿಗೆ ಹಾಕಿದ್ದಾರೆ.

“ಆನೆಯ ಬಾಲ ಕತ್ತರಿಸಲು ಯತ್ನಿಸಿದವರು ಯಾರು ಎಂದು ಪತ್ತೆಹಚ್ಚಲು ಎಸಿಎಫ್‌ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದೆ. ವಾರದೊಳಗೆ ವರದಿ ನೀಡುವಂತೆ ಸೂಚನೆ ನೀಡಿದ್ದೇವೆ” ಎಂದು ಶಿವಮೊಗ್ಗ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಸನ್ನ ಪಟಗಾರ್ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಉಡುಪಿ | ಬ್ರಹ್ಮಾವರ ಪೊಲೀಸ್ ಠಾಣೆಯ 500ಮೀ ವಾಪ್ತಿಯಲ್ಲಿ ಆ.22ರವರೆಗೆ ನಿಷೇಧಾಜ್ಞೆ: ಜಿಲ್ಲಾಧಿಕಾರಿ

ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025ಕ್ಕೆ ಸಂಬಂಧಿಸಿದಂತೆ ಸಕ್ರಿಯ ಹಿಂದೂ...

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

Download Eedina App Android / iOS

X