ಬೆಳಗಾವಿ | ಕೈ ತಪ್ಪಿದ ಕಾಂಗ್ರೆಸ್‌ ಟಿಕೆಟ್‌; ಜೆಡಿಎಸ್‌ ಸೇರ್ಪಡೆಯಾದ ಸೌರಭ್ ಚೋಪ್ರಾ

Date:

  • ಸವದತ್ತಿ ಸೌರಭ್ ಚೋಪ್ರಾ ಮನೆಗೆ ಭೇಟಿ ನೀಡಿದ ಎಚ್‌ ಡಿ ಕುಮಾರಸ್ವಾಮಿ
  • ಜೆಡಿಎಸ್ ಸೆರ್ಪಡೆಯಿಂದ ಸವದತ್ತಿಯಲ್ಲಿ ಬದಲಾದ ರಾಜಕೀಯ ಸನ್ನಿವೇಶ

ಬೆಳಗಾವಿ ಜಿಲ್ಲೆಯ ಸವದತ್ತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಘೋಷಣೆಯಾದ ನಂತರ ರಾಜಕಾರಣದಲ್ಲಿ ಬದಲಾವಣೆಯಾಗಿದ್ದು, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಸೌರಭ್ ಚೋಪ್ರಾ ಅವರ ಮನೆಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿಯಾಗಿ ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡರು.

- Advertisement -

ಚೋಪ್ರಾ ಅವರು ಸವದತ್ತಿಯಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಖಾತ್ರಿಯಾಗಿದೆ. ಕಾಂಗ್ರೆಸ್ ಟಿಕೆಟ್‌ಗಾಗಿ ಪೈಟ್ ನಡೆಸಿದ್ದ ಸೌರವ್ ಚೋಪ್ರಾ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲ್ಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಆದರೆ, ಜೆಡಿಎಸ್ ಸೆರ್ಪಡೆಯಿಂದ ಸವದತ್ತಿ ಕ್ಷೇತ್ರದಲ್ಲಿ ರಾಜಕೀಯ ಸನ್ನಿವೇಶಗಳು ಬದಲಾಗಿದೆ. ಸೌರವ್ ಚೋಪ್ರಾ ಅವರ ತಂದೆ ಆನಂದ ಚೋಪ್ರಾ ಸಹ  ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಸಿಗದೆ ಸ್ಪರ್ಧಿಸಿ ಬಿಜೆಪಿಗೆ ಪೈಪೋಟಿ ನೀಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವಿಶ್ವಾಸ್ ವೈಧ್ಯ ಇವರಿಗಿಂತ ಹೆಚ್ಚಿನ ಮತ‌ ಪಡೆದಿದ್ದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಅಚ್ಚರಿ ಪ್ರಯೋಗ | ಡಿಕೆಶಿ ಎದುರು ಆರ್‌ ಆಶೋಕ್‌, ಸಿದ್ದರಾಮಯ್ಯ ಎದುರು ವಿ ಸೋಮಣ್ಣ ಕಣಕ್ಕೆ

ಆನಂದ ಚೋಪ್ರಾ ಅವರ ಮರಣದ ನಂತರ ಅವರ ಪುತ್ರ ಸೌರವ್ ಚೋಪ್ರಾ ಸಹ ಕಾಂಗ್ರೆಸ್‌ನಲ್ಲಿ ಟಿಕೆಟ್ ಸಿಗಬಹುದು ಎಂದು ಭಾವಿಸಿದ್ದರು. ಆದರೆ, ಕಾಂಗ್ರೆಸ್‌ನಿಂದ ಟಿಕೆಟ್ ಸಿಗದ ಕಾರಣ ಜೆಡಿಎಸ್ ಪಕ್ಷದ ಕಡೆ ಮುಖ ಮಾಡಿದ್ದು, ಸವದತ್ತಿ ತಾಲೂಕಿನ ಮತದಾರರ ಚಿತ್ತ ಯಾರ ಕಡೆ ಎಂಬುದನ್ನು ಕಾದು ನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...