ಮಿಟ್ಟೇಮರಿ ಐತಿಹಾಸಿಕ ಲಕ್ಷ್ಮೀನರಸಿಂಹ ಪುರಾತನ ದೇವಾಲಯದ ಕಲ್ಯಾಣಿ ಸ್ವಚ್ಛತೆ

Date:

ಬಾಗೇಪಲ್ಲಿ:-ತಾಲೂಕಿನ ಮಿಟ್ಟೇಮರಿ ಪುರಾಣ ಪ್ರಸಿದ್ಧ ಪುರಾತನ ಕಲ್ಯಾಣಿಯನ್ನು ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ, ತಾಲೂಕು ಆಡಳಿತ, ಕಂದಾಯ ಇಲಾಖೆ ಹಾಗೂ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಸ್ವಯಂ ಸೇವಕರು ಹಾಗೂ ಸಂಘ ಸಂಸ್ಥೆಗಳು ಸ್ವಚ್ಛಗೊಳಿಸಲಾಯಿತು.

- Advertisement -

ಶಾಸಕ ಎಸ್. ಸುಬ್ಬಾರೆಡ್ಡಿ ಕಲ್ಯಾಣಿ ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಬಾಗೇಪಲ್ಲಿ ತಾಲೂಕಿನ ಮಿಟ್ಟೇಮರಿ ಪುರಾಣ ಪ್ರಸಿದ್ಧ ಪುರಾತನ ಶ್ರೀ ಲಕ್ಷ್ಮೀನರಸಿಂಹ ದೇವಾಲಯದ ಕಲ್ಯಾಣಿಯನ್ನು ಸ್ವಯಂಸೇವಕರು ದೇವಾಲಯ ಮತ್ತು ಕಲ್ಯಾಣಿಯಲ್ಲಿ ಬೆಳೆದಿದ್ದ ಗಿಡಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಿ ಕಲ್ಯಾಣಿಗೆ ಮರುಜೀವ ನೀಡಿರುವುದು ಸಂತಸವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬರಗಾಲದಿಂದ ತತ್ತರಿಸಿರುವ ಬಾಗೇಪಲ್ಲಿ ತಾಲ್ಲೂಕು ಕುಡಿವ ನೀರಿಗೂ ಹಾಹಾಕಾರ ಎದುರಾಗಿದೆ. ಮಳೆಯಿಲ್ಲದೆ ಅಂತರ್ಜಲ ಪಾತಾಳಕ್ಕೆ ಕುಸಿದಿದೆ. ಇದು ಹೀಗೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರ ಸ್ಥಿತಿಗೆ ಹೋಗಲಿದೆ. ಹಾಗಾಗಿ ಯಾವುದೇ ನದಿ ಮೂಲಗಳಿಲ್ಲದ ಈ ಭಾಗದಲ್ಲಿ ಪುರಾತನ ಕಲ್ಯಾಣಿಗಳು, ಕೆರೆ, ಕಾಲುವೆಗಳೇ ಪ್ರಮುಖ ಜಲ ಮೂಲಗಳಾಗಿದ್ದು, ಅಂತರ್ಜಲ ಹೆಚ್ಚಳ ಮಾಡುವ ಸಲುವಾಗಿ ಜಲ ಮೂಲಗಳ ಪುನಶ್ಚೇತನ ಮಾಡಲಾಗುತ್ತಿದೆ ಎಂದರು.
ಪುರಾತನ ಕಾಲದ ಐತಿಹಾಸಿಕ ಕೆರೆ, ಕುಂಟೆ, ಕಲ್ಯಾಣಿಗಳನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ವೈ.ನವೀನ್ ಭಟ್ ತಿಳಿಸಿದರು.
ಮಿಟ್ಟೇಮರಿ ಐತಿಹಾಸಿಕ ಪ್ರಸಿದ್ಧ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಕಲ್ಯಾಣಿ ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಈ ಭಾಗದಲ್ಲಿ ಪುರಾತನ ಕಲ್ಯಾಣಿಗಳು, ಕೆರೆ, ಕಾಲುವೆಗಳೇ ಪ್ರಮುಖ ಜಲ ಮೂಲಗಳಾಗಿದ್ದು, ಅಂತರ್ಜಲ ಹೆಚ್ಚಳ ಮಾಡುವ ಸಲುವಾಗಿ ಜಲ ಮೂಲಗಳ ಪುನಶ್ಚೇತನ ಮಾಡಲಾಗುತ್ತಿದೆ ಎಂದರು

ಕೆರೆ, ಕಲ್ಯಾಣಿಗಳ ಸಂರಕ್ಷ ಣೆ ಹಾಗೂ ಪುನಶ್ಚೇತನಗೊಳಿಸುವುದು ಸಾರ್ವಜನಿಕರ ಜವಾಬ್ದಾರಿಯಾಗಿದೆ. ಅಧಿಕಾರಿಗಳೊಂದಿಗೆ ಸಾರ್ವಜನಿಕರು ಕೈಜೋಡಿಸಿ ಇವುಗಳ ರಕ್ಷ ಣೆಗೆ ಮುಂದಾಗಬೇಕು. ಈಗಾಗಲೇ ಅಧಿಕಾರಿಗಳಿಗೆ ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯಲ್ಲಿರುವ ಕಲ್ಯಾಣಿಗಳನ್ನು ಗುರುತಿಸಿ ಪುನಶ್ಚೇತನಗೊಳಿಸಿ ಸೂಚಿಸಲಾಗಿದೆ. ಈ ಕಾರ್ಯಕ್ಕೆ ನಾಗರಿಕರೂ ಸ್ವಯಂ ಪ್ರೇರಿತರಾಗಿ ತಮ್ಮ ಕೈಲಾದ ಸೇವೆಯನ್ನು ಸಲ್ಲಿಸಿದರೆ ಇತಿಹಾಸದಲ್ಲಿ ನಿರ್ಮಾಣವಾದ ಕಲ್ಯಾಣಿಗಳನ್ನು ರಕ್ಷಿಸುವ ಮೂಲಕ ಅಂತರ್ಜಲದ ಮಟ್ಟವನ್ನು ವೃದ್ಧಿಸಬಹುದಾಗಿದೆ ಎಂದು ಹೇಳಿದರು.

ಇಓ ರಮೇಶ್ ಮಾತನಾಡಿ ಅನೇಕ ವರ್ಷಗಳಿಂದ ಕೈಬಿಡಲ್ಪಟ್ಟ ಕಲ್ಯಾಣಿಯನ್ನು ಸ್ವಚ್ಛಗೊಳಿಸಲಾಗಿದೆ ಮತ್ತು ಪುನರುಜ್ಜೀವನಗೊಳಿಸಲಾಗಿದೆ. ಈ ಕಲ್ಯಾಣಿಗಳು ಸುಸ್ಥಿರ ನೀರಿನ ಮೂಲವಾಗಿರುವುದರ ಜೊತೆಗೆ ದೇವಾಲಯಗಳ ಪ್ರಾಚೀನ ಮತ್ತು ಐತಿಹಾಸಿಕ ಪ್ರಾಮುಖ್ಯತೆಯೊಂದಿಗೆ ಆಳವಾಗಿ ಸಂಬಂಧ ಹೊಂದಿವೆ.

ಬಾವಿಗಳು ಕೇವಲ ಗತಕಾಲದ ಅವಶೇಷಗಳಲ್ಲ ಅವು ರಾಜ್ಯದ ಇತಿಹಾಸ, ಸಂಸ್ಕೃತಿ ಮತ್ತು ಪರಂಪರೆಯ ಬಹುಮುಖಿ ಅಂಶವನ್ನು ಪ್ರತಿನಿಧಿಸುತ್ತವೆ ಮತ್ತು ಸಮಕಾಲೀನ ನೀರಿನ ನಿರ್ವಹಣೆ ಸವಾಲುಗಳನ್ನು ಎದುರಿಸುವ ಸಾಮರ್ಥ್ಯವನ್ನು ಹೊಂದಿವೆ. ಅಮೂಲ್ಯವಾದ ಜಲ ಸಂಪನ್ಮೂಲಗಳ ಸುಸ್ಥಿರತೆಗೆ ಇಂತಹ ಜಲಮೂಲಗಳು ಅತ್ಯಗತ್ಯೆ ಇದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ..? ಕೋಲಾರ ಆರ್.ಟಿ.ಓ ಕಚೇರಿಗೆ ಹುಸಿ ಬಾಂಬ್ ಬೆದರಿಕೆ

ಈ ಸಂದರ್ಭದಲ್ಲಿ ಜಿಲ್ಲಾ ಮಿಟ್ಟೇಮರಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ವೆಂಕಟೇಶಪ್ಪ ಹಾಗು ತಾಲೂಕಿನ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಮುಖಂಡರಾದ ಪಿ. ಮಂಜುನಾಥರೆಡ್ಡಿ, ಬೂರಗಮಾಡ ನರಸಿಂಹಪ್ಪ, ಕಾಮರೆಡ್ಡಿ, ನರಸಿಂಹರೆಡ್ಡಿ ಹಾಗು ಮಿಟ್ಟೇಮರಿ ಪಂಚಾಯ್ತಿಯ ಎಲ್ಲಾ ಸಿಬ್ಬಂದಿ ವರ್ಗದವರು, ಆರೋಗ್ಯ ಅಧಿಕಾರಿಗಳು, ಆಶಾಕಾರ್ಯಕರ್ತೆಯರು, ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...