ಶಾಸಕ ಅಖಂಡ ಶ್ರೀನಿವಾಸ ಮೂರ್ತಿಗೆ ಟಿಕೆಟ್‌ ಕೈ ತಪ್ಪುವ ಭೀತಿ; ಸಿದ್ದರಾಮಯ್ಯ ಭೇಟಿ ಮಾಡಿದ ಕೈ ಮುಖಂಡರು

Date:

  • ಪುಲಿಕೇಶಿ ನಗರದ ಹಾಲಿ ಶಾಸಕರಿಗೆ ಟಿಕೆಟ್‌ ತಪ್ಪುವ ಭೀತಿ
  • ಶಿವಾನಂದ ವೃತ್ತದ ಬಳಿ ಇರುವ ಮಾಜಿ ಸಿ ಎಂ ಸರ್ಕಾರಿ ನಿವಾಸ

ಬೆಂಗಳೂರು ನಗರ ವ್ಯಾಪ್ತಿಯ ಪುಲಿಕೇಶಿ ನಗರ ಕ್ಷೇತ್ರದ ಹಾಲಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಗೆ ಕಾಂಗ್ರೆಸ್‌ ಟಿಕೆಟ್‌ ಸಿಗುವುದು ಅನುಮಾನವಾಗಿರುವುದುರಿಂದ ಶಾಸಕರ ಬೆಂಬಲಿಗರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಟಿಕೆಟ್‌ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಶಿವಾನಂದ ವೃತ್ತದ ಬಳಿಯಿರುವ ಸಿದ್ದರಾಮಯ್ಯನವರ ಸರ್ಕಾರಿ ನಿವಾಸಕ್ಕೆ ತೆರಳಿದ ಕೈ ಮುಖಂಡರು ಹಾಗೂ ಮುಸ್ಲಿಂ ಸಮುದಾಯದ ಮೌಲ್ವಿಗಳು ಶಾಸಕ ಶ್ರೀನಿವಾಸ ಮೂರ್ತಿ ಅವರಿಗೆ ಟಿಕೆಟ್ ತಪ್ಪಿಸದೇ, ಅವರೇ ಅಭ್ಯರ್ಥಿಯೆಂದು ಘೊಷಣೆ ಮಾಡಬೇಕು ಎಂದು ಮನವಿ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? : ಡಿಕೆಶಿ ತವರು ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಶಾಕ್‌; ಜೆಡಿಎಸ್ ಸೇರಿದ ಚನ್ನಪಟ್ಟಣ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ಪ್ರಸನ್ನ ಗೌಡ

ಬೆಂಗಳೂರು ವ್ಯಾಪ್ತಿಯಲ್ಲಿ ಬರುವ ಪುಲಿಕೇಶಿ ನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಗೆ ಕಾಂಗ್ರೆಸಿನ ಮೊದಲ ಪಟ್ಟಿಯಲ್ಲಿ ಟಿಕೆಟ್ ಘೋಷಣೆ ಮಾಡಿಲ್ಲ. ಹಾಗಾಗಿ ಇವರಿಗೆ 2ನೇ ಪಟ್ಟಿಯಲ್ಲಿಯೂ ಟಿಕೆಟ್‌ ತಪ್ಪುವ ಅನುಮಾನ ಮೂಡಿರುವುದರಿಂದ ಅಖಂಡ ಶ್ರೀನಿವಾಸ್‌ ಮೂರ್ತಿಗೆ ಆತಂಕ ವ್ಯಕ್ತವಾಗಿದೆ.

ಇದೇ ಕ್ಷೇತ್ರಕ್ಕೆ ಮಾಜಿ ಮೇಯರ್ ಸಂಪತ್ ರಾಜ್ ಮತ್ತು ಮಾಜಿ ಶಾಸಕ ಪ್ರಸನ್ನ ಕುಮಾರ್, ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ್ ಸೇರಿದಂತೆ ಹಲವಾರು ಆಕಾಂಕ್ಷಿಗಳು ಅರ್ಜಿ ಸಲ್ಲಿಸಿರುವುದರಿಂದ ಕಾಂಗ್ರೆಸ್ ಹೈಕಮಾಂಡ್ ಈ ಕ್ಷೇತ್ರಕ್ಕೆ ಟಿಕೆಟ್‌ ಘೊಷಣೆ ಮಾಡಿಲ್ಲ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಯುವತಿಗೆ ಕಿರುಕುಳ ನೀಡಿದವನಿಗೆ ಚಪ್ಪಲಿ ಏಟು

ತನ್ನನ್ನು ಹಿಂಬಾಲಿಸಿ ಬಂದು ಕಿರುಕುಳ ನೀಡಿದ್ದಾನೆಂದು ಆರೋಪಿಸಿ ಯುವತಿಯೊಬ್ಬಳು ಯುವಕನಿಗೆ ಚಪ್ಪಲಿಯಿಂದ...

ಬಳ್ಳಾರಿ | ʼಕೈಗಾರಿಕೆ ಆರಂಭಿಸಿ, ಇಲ್ಲವೇ ಭೂಮಿ ಬಿಡಿʼ; ಸಂತ್ರಸ್ತ ರೈತರ ಹೋರಾಟ

ಬಿಎಸ್‌ಎಎಲ್ ಸ್ಟೀಲ್ ಕೈಗಾರಿಕೆಗಾಗಿ 1995 ಹಾಗೂ 1998ರಲ್ಲಿ ಭೂಮಿ ಕಳೆದುಕೊಂಡು ವಂಚನೆಗೊಳಗಾಗಿರುವ...

ಬಿಜೆಪಿ ಆತ್ಮಾವಲೋಕನ : ಕೆ ಸುಧಾಕರ್ ಕುಯಿಲು, ಎಂಟಿಬಿ ಹುಯಿಲು!

ಬಿಜೆಪಿಯ ಆತ್ಮಾವಲೋಕನ ಸಭೆಯಲ್ಲಿ ಎಂಟಿಬಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಕೆ. ಸುಧಾಕರ್...

ಧಾರವಾಡ | ಶಿವಾಜಿ ಕುರಿತು ಅವಹೇಳನಕಾರಿ ಪೋಸ್ಟ್; ಯುವಕನ ಬಂಧನ

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಶಿವಾಜಿ ಕುರಿತು ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ಯುವಕನನ್ನು...