ಚಾಮರಾಜನಗರ | 500 ಗಿಡ ನೆಡುವ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಸಿ. ಪುಟ್ಟರಂಗಶೆಟ್ಟಿ

Date:

ಚಾಮರಾಜನಗರದ ಸೋಮವಾರಪೇಟೆಯ ಸ್ವಾಗತ ಕಮಾನಿನ ಬಳಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಅರಣ್ಯ ಇಲಾಖೆ, ಪರಿಸರ ಇಲಾಖೆ ಹಾಗೂ ನಗರದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಸಸಿ ನೆಡುವ ಕಾರ್ಯದಲ್ಲಿ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ ಅವರು ಗಿಡ ನೆಟ್ಟು ನೀರೆರೆಯುವ ಮೂಲಕ ಚಾಲನೆ ನೀಡಿದರು.

- Advertisement -

ಎಂ.ಎಸ್.ಐ.ಎಲ್. ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ ” ಚಾಮರಾಜನಗರ ಪಟ್ಟಣದಲ್ಲಿ ಬೆಳೆಯುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಸಸ್ಯ ಸಮೃದ್ಧಿ ಹೆಚ್ಚಿಸಬೇಕಿದೆ. ಮರ ಗಿಡಗಳು ಗಾಳಿಯಲ್ಲಿರುವ ಇಂಗಾಲದ ಡೈ ಆಕ್ಸೈಡ್ ಹೀರಿಕೊಂಡು ಉಸಿರಾಡಲು ನಮಗೆ ಸ್ವಚ್ಚಗಾಳಿ ನೀಡುತ್ತವೆ. ಯಾರೇ ಆದರೂ ಒಂದು ಗಿಡಕ್ಕೆ ಹಾನಿ ಮಾಡಿದರೆ ಎರಡು ಗಿಡ ನೆಡಬೇಕು. ಸಸಿ ನೆಡುವುದು ಮಾತ್ರವಲ್ಲ. ಅದನ್ನು ನೀರೆರೆದು ಕಾಪಾಡುವುದು ಅತೀ ಮುಖ್ಯವಾಗಿದೆ ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ ” ವಿಶ್ವ ಪರಿಸರ ದಿನವನ್ನು ವೇದಿಕೆ ಕಾರ್ಯಕ್ರಮ ಆಯೋಜನೆ, ಜಾಗೃತಿಗಾಗಿ ಮ್ಯಾರಥಾನ್, ದಾಖಲೀಕರಣಕ್ಕಾಗಿ ಫೋಟೋ ತೆಗೆಸಿಕೊಳ್ಳುವಂತಹ ಸಾಂಕೇತಿಕ ಕಾರ್ಯಕ್ರಮಗಳಿಗಿಂತ ವಿಭಿನ್ನವಾಗಿ ಹಾಗೂ ಬಹಳ ಅರ್ಥಪೂರ್ಣವನ್ನಾಗಿಸಲು 4 ಗಿಡ ನೆಡುವ ಬದಲು ಈ ಬಾರಿ ವಿಶೇಷವಾಗಿ ಪಟ್ಟಣದಲ್ಲಿ 500 ಸಸಿಗಳನ್ನು ನೆಡಲಾಗುತ್ತಿದೆ. ಬೆಂಗಳೂರು, ಮೈಸೂರಿನಲ್ಲಿ ನೂರಾರು ವರ್ಷಗಳ ಹಿಂದೆ ನೆಟ್ಟಿದ್ದ ಸಸಿಗಳು ಇಂದು ಹೆಮ್ಮರವಾಗಿ ಬೆಳೆದಿವೆ. ಚಾಮರಾಜನಗರ ಪಟ್ಟಣದಲ್ಲಿಯೂ ಅಂತಹ ಪರಿಸರ ಸಮೃದ್ಧಿ ವಾತಾವರಣ ನಿರ್ಮಾಣವಾಗಬೇಕು ಎಂಬುದು ಇದರ ಮುಖ್ಯ ಉದ್ದೇಶವಾಗಿದೆ.

ರಸ್ತೆಬದಿಯಲ್ಲಿ ಮರಗಿಡಗಳನ್ನು ಬೆಳೆಸುವುದರಿಂದ ಸಾಕಷ್ಟು ಉಪಯೋಗಗಳಿವೆ. ಜನರಿಗೆ ನೆರಳು ದೊರೆಯುತ್ತದೆ. ನಗರದಲ್ಲಿ ಶುದ್ಧಗಾಳಿ ಒದಗಿಸುವ ಅಮ್ಲಜನಕದ ಮಟ್ಟ ಹೆಚ್ಚಾಗಲಿದೆ. ಮಾಲಿನ್ಯ ಕಡಿಮೆಯಾಗಲಿದೆ. ಅಂತರ್ಜಲ ವೃದ್ಧಿಸಲಿದೆ. ಮುಂದಿನ 20-25 ವರ್ಷಗಳಲ್ಲಿ ಎಲ್ಲೆಡೆ ಹಸಿರಿನ ಸುಂದರ ಪರಿಸರ ಕಣ್ತುಂಬಲಿದೆ. ಜನರಿಗೆ, ಪ್ರಾಣಿ-ಪಕ್ಷಿಗಳಿಗೆ ಅನುಕೂಲವಾಗಬೇಕು. ಬರೀ ಗಿಡ ನೆಡುವುದಲ್ಲ. ಅದನ್ನು ಒಂದು ವರ್ಷಗಳವರೆಗೆ ನೀರೆರೆದು ಪೋಷಿಸಬೇಕು. 500 ಗಿಡಗಳಲ್ಲಿ 480 ರಿಂದ 490 ಮರಗಳನ್ನಾಗಿ ಬೆಳೆಸುವ ಮಹತ್ವದ ಗುರಿ ಹೊಂದಲಾಗಿದೆ. ಈ ಕಾರ್ಯಕ್ಕೆ ಹಲವಾರು ಸಂಘ ಸಂಸ್ಥೆಗಳು ಜಿಲ್ಲಾಡಳಿತ, ನಗರಸಭೆಯೊಂದಿಗೆ ಕೈಜೋಡಿಸಿವೆ ” ಎಂದು ತಿಳಿಸಿದರು.

ಒಟ್ಟಾರೆ ನಾವು ಚೆಲುವ ಚಾಮರಾಜನಗರ, ಸ್ವಚ್ಚ ಚಾಮರಾಜನಗರದ ಪರಿಸರ ಸಂರಕ್ಷಣೆಗೆ ಉತ್ತಮ ಹೆಜ್ಜೆಯನ್ನಿಟ್ಟಿದ್ದೇವೆ. ಈ ಕಾರ್ಯಕ್ರಮ ಇತರೆಡೆ ಮಾದರಿಯಾಗಬೇಕು. ಪಟ್ಟಣದಲ್ಲಿ 15 ಸಾವಿರ ಸಸಿಗಳನ್ನು ಬೆಳೆಸುವುದರ ಮೂಲಕ ಪರಿಸರ ಸಂರಕ್ಷಣೆಗೆ ಈ ಸಾಲಿನ ರಾಜ್ಯಪ್ರಶಸ್ತಿ ಪಡೆದಿರುವ ನಗರದ ಪರಿಸರಪ್ರೇಮಿ ಸಿ.ಎಂ. ವೆಂಕಟೇಶ್ ಅವರನ್ನು ಅಭಿನಂದಿಸಿದರು.

ಈ ವಿಶೇಷ ವರದಿ ಓದಿದ್ದೀರಾ? ಮೈಸೂರು | ಶವಾಗಾರದಲ್ಲಿ ಕೆಲಸ ಮಾಡುವ ಏಕಮೇವ ಮಹಿಳೆ ರಾಜಮ್ಮ

ನಗರಸಭೆ ಉಪಾಧ್ಯಕ್ಷೆ ಮಮತ, ನಗರಸಭೆ ಸದಸ್ಯೆ ನೀಲಮ್ಮ, ನಗರಸಭೆ ಪೌರಾಯುಕ್ತ ಎಸ್.ವಿ. ರಾಮದಾಸ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್, ನಗರಸಭೆಯ ಪರಿಸರ ಅಭಿಯಂತೆ ರೂಪ, ಸಮುದಾಯ ಸಂಘಟನಾಧಿಕಾರಿ ವೆಂಕಟ್ ನಾಯಕ್, ಹಿರಿಯ ಆರೋಗ್ಯ ನಿರೀಕ್ಷಕ ಮಂಜುನಾಥ್, ಸುಷ್ಮಾ, ಪುಷ್ಪಾ, ನಾರಾಯಣ್, ಸಂತೋಷ್, ಅರಣ್ಯ ಇಲಾಖೆಯ ಅಧಿಕಾರಿಗಳು, ಪರಿಸರ ಅಧಿಕಾರಿಗಳು ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...