ಬೆಂಗಳೂರು-ಹಾಸನ ಇಂಟರ್‌ಸಿಟಿ ರೈಲು ಸಂಚಾರ ವಿಸ್ತರಣೆಗೆ ಶಾಸಕ ಸಿಮೆಂಟ್‌ ಮಂಜು ಮನವಿ

Date:

ಬೆಂಗಳೂರು-ಹಾಸನ ಇಂಟರ್‌ಸಿಟಿ ರೈಲು ಸಂಚಾರ ವಿಸ್ತರಣೆಗೆ ಒತ್ತಾಯಿಸಿ ಶಾಸಕ ಸಿಮೆಂಟ್‌ ಮಂಜು ಅವರು ಬೆಂಗಳೂರಿನಲ್ಲಿರುವ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಅವರ ಕಚೇರಿಗೆ ಭೇಟಿ ನೀಡಿ ಮನವಿ ಮಾಡಿದರು.

- Advertisement -

“ಬೆಂಗಳೂರು-ಹಾಸನ ನಡುವೆ ಸಂಚರಿಸುತ್ತಿರುವ ಇಂಟರ್‌ಸಿಟಿ ರೈಲನ್ನು ಸಕಲೇಶಪುರದವರೆಗೂ ವಿಸ್ತರಿಸಲು ಕ್ರಮ ಕೈಗೊಳ್ಳಬೇಕು. ಸಕಲೇಶಪುರ ಹಾಗೂ ಆಲೂರು ತಾಲೂಕಿನಿಂದ ನಿತ್ಯವೂ ನೂರಾರು ಜನ ವಿವಿಧ ಕಾರ್ಯಗಳಿಗಾಗಿ ಬೆಂಗಳೂರಿಗೆ ಹೋಗಿ ಬರುತ್ತಿದ್ದಾರೆ. ಕೆಲವರು ಹಾಸನದಿಂದ ರೈಲು ಮುಖಾಂತರ ಬೆಂಗಳೂರಿಗೆ ಹೋದರೆ ಕೆಲವರು ದುಬಾರಿ ಬಸ್ ದರ ತೆತ್ತು ಬೆಂಗಳೂರಿಗೆ ಹೋಗುತ್ತಿದ್ದಾರೆ. ಇಂಟರ್‌ಸಿಟಿ ರೈಲು ಸದ್ಯ ಬೆಂಗಳೂರು-ಹಾಸನ ನಡುವೆ ಸಂಚರಿಸುತ್ತಿದ್ದು, ಈ ರೈಲನ್ನು ಸಕಲೇಶಪುರದವರೆಗೂ ವಿಸ್ತರಿಸಿದರೆ ಸಕಲೇಶಪುರ ಹಾಗೂ ಆಲೂರು ತಾಲೂಕಿನ ಜನರು ನಿತ್ಯದ ಕೆಲಸ ಕಾರ್ಯಗಳಿಗೆ ಬೆಂಗಳೂರಿಗೆ ಹೋಗಿ ಅಂದೇ ಹಿಂತಿರುಗಿ ಬರಲು ಅನುಕೂಲವಾಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...
ಬೆಂಗಳೂರು ಹಾಸನ ರೈಲು

ಈ ಸುದ್ದಿ ಓದಿದ್ದೀರಾ? ತುಮಕೂರು | ನಗರಾಭಿವೃದ್ಧಿಗಾಗಿ 200 ಕೋಟಿ ರೂ.ಗಳ ಅನುದಾನ : ಮಾದರಿ ನಗರ ನಿರ್ಮಾಣಕ್ಕೆ ಸಚಿವ ಜಿ. ಪರಮೇಶ್ವರ ಸೂಚನೆ

“ಆಸ್ಪತ್ರೆ, ಸರ್ಕಾರಿ ಕೆಲಸ, ವಿದ್ಯಾಭ್ಯಾಸ ಸೇರಿದಂತೆ ಇನ್ನು ಹಲವು ಅಗತ್ಯಗಳಿಗೆ ಆಗಾಗ ಬೆಂಗಳೂರಿಗೆ ಹೋಗಲೇ ಬೇಕಾಗುತ್ತದೆ. ಜೀವನೋಪಾಯಕ್ಕಾಗಿ ಈ ಭಾಗದ ಸಾವಿರಾರು ಜನ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇಂಟರ್‌ಸಿಟಿ ರೈಲನ್ನು ವಿಸ್ತರಿಸಿದರೆ, ಸಕಲೇಶಪುರ ಹಾಗೂ ಆಲೂರು ತಾಲೂಕಿನ ಜನಕ್ಕೆ ಬಹಳ ಅನುಕೂಲವಾಗುತ್ತದೆ. ಆಲೂರು ರೈಲು ನಿಲ್ದಾಣದಲ್ಲಿ ಎಲ್ಲ ರೈಲುಗಳ ನಿಲುಗಡೆಗೆ ಕ್ರಮ ಕೈಗೊಳ್ಳಬೇಕು” ಎಂದು ಮನವಿ ಸಲ್ಲಿಸಿದರು.

ಮನವಿಗೆ ಸ್ಪಂದಿದ ಸಚಿವರು ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...