ಬೀದರ್‌ | ಜಿಲ್ಲೆಯಲ್ಲಿ ಡಯಾಲಿಸಿಸ್ ಕೇಂದ್ರ ಹೆಚ್ಚಿಸಲು ಶಾಸಕ ಡಾ ಶೈಲೇಂದ್ರ ಬೆಲ್ದಾಳೆ ಒತ್ತಾಯ

Date:

ಜಿಲ್ಲೆಯಲ್ಲಿ ಮೂತ್ರಪಿಂಡ ಸಮಸ್ಯೆ ಇರುವ ರೋಗಿಗಳಿಗೆ ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೆ ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಹಣ ಕೊಟ್ಟು ಡಯಾಲಿಸಿಸ್ ಮಾಡಿಸಿಕೊಳ್ಳುವ ಅನಿವಾರ್ಯತೆ ಸೃಷ್ಟಿಯಾಗಿದೆ. ಕೂಡಲೇ ಡಯಾಯಾಲಿಸಿಸ್ ಕೇಂದ್ರ ಹೆಚ್ಚಿಸಬೇಕು ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ ಶೈಲೇಂದ್ರ ಬೆಲ್ದಾಳೆ ಒತ್ತಾಯಿಸಿದ್ದಾರೆ.

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಗುರುವಾರ ಆರೋಗ್ಯ ಸಚಿವ ದಿನೇಶ್ ಗುಂಡುರಾವ ಅವರಿಗೆ  ಸಭಾಧ್ಯಕ್ಷರ ಮೂಲಕ ಮನವಿ ಮಾಡಿದರು.

“ದೈನಂದಿನ ಒತ್ತಡದ ಬದುಕಿನಲ್ಲಿ ಜನರಲ್ಲಿ ಡಯಾಲಿಸಿಸ್ ಸಮಸ್ಯೆ ಹೆಚ್ಚಾಗುತ್ತಿದ್ದು, ಸರಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೌಕರ್ಯ ವಿಳಂಬವಾಗಿ ಪ್ರತಿ ವಾರ ಡಯಾಲಿಸಿಸ್ ಮಾಡಿಸಿಕೊಳ್ಳಬೇಕಾದ ರೋಗಿಗಳು ಚಿಕಿತ್ಸೆ ಸಿಗದೆ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಸೂಕ್ತ ಸಮಯಕ್ಕೆ ಡಯಾಲಿಸಿಸ್ ಮಾಡಿಸಿಕೊಳ್ಳದಿದ್ದರೆ ಮನೆಯಲ್ಲಿ ಕುಳಿತು ನೋವು ಅನುಭವಿಸಬೇಕಾಗುತ್ತದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಜಿಲ್ಲಾ ಆಸ್ಪತ್ರೆಯಲ್ಲಿ ಜನದಟ್ಟಣೆ ಹೆಚ್ಚಾಗಿರುವ ಕಾರಣ ಡಯಾಲಿಸಿಸ್ ಮುಂದೂಡುತ್ತಿರುವುದರಿಂದ ರೋಗಿಗಳು ಸಂಕಟ ಅನುಭವಿಸುತ್ತಿದ್ದಾರೆ. ರೋಗಿಗಳು ಹೆಚ್ಚಿದ್ದು ಡಯಾಲಿಸಿಸ್ ಕೇಂದ್ರ ಕಡಿಮೆಯಿದ್ದ ಕಾರಣ ಜನರು ಸಮಸ್ಯೆಗೀಡಾಗುತ್ತಿದ್ದಾರೆ. ಅನೇಕ ಡಯಾಲಿಸಿಸ್ ರೋಗಿಗಳು ಚಿಕಿತ್ಸೆಗಾಗಿ ತಿಂಗಳುಗಂಟ್ಟಲೆ ಕಾಯುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ಡಯಾಲಿಸಿಸ್ ಕೇಂದ್ರ ಹೆಚ್ಚಿಸಿದರೆ ಜಿಲ್ಲಾ ಆಸ್ಪತ್ರೆಯಲ್ಲಿ ಜನದಟ್ಟಣೆ ಕಡಿಮೆ ಮಾಡುಬಹುದು” ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕುಂಟುತ್ತಾ ಸಾಗುತ್ತಿದೆ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿ; ಧೂಳು ಕುಡಿಯುತ್ತಿದ್ದಾರೆ ಜನರು

“ಹೆಚ್ಚಿನ ಹಳ್ಳಿಗಳು ಒಳಗೊಂಡ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಚಿಟಗುಪ್ಪಾ ಹಾಗೂ ಮನ್ನಾಏಖೆಳ್ಳಿ ಆರೋಗ್ಯ ಕೇಂದ್ರಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಡಯಾಲಿಸಿಸ್ ರೋಗಿಗಳು ಆಗಮಿಸುತ್ತಿದ್ದು ಡಯಾಲಿಸಿಸ್ ಸೌಲಭ್ಯ ಇಲ್ಲದ ಕಾರಣ ಹಳ್ಳಿಗಳಿಂದ ಬರುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಪಡೆಯಲು ತೊಂದರೆ ಆಗುತ್ತಿದೆ. ಹೀಗಾಗಿ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಚಿಟಗುಪ್ಪಾ ಹಾಗೂ ಮನ್ನಾಏಖೆಳ್ಳಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಡಯಾಲಿಸಿಸ್ ವ್ಯವಸ್ಥೆ ಕಲ್ಪಿಸಬೇಕು” ಎಂದು ಸದನದಲ್ಲಿ ಶಾಸಕರು ಮನವಿ ಮಾಡಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...

ಚಾಮರಾಜನಗರ | ದೇಶದ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಗೆ ಕಾಂಗ್ರೆಸ್‌ ಬೆಂಬಲಿಸಿ: ಮಾನವ ಬಂಧುತ್ವ ವೇದಿಕೆ

ದೇಶದ ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಜನರು...

ಮತದಾರರಿಗೆ ಉಚಿತ ಆಹಾರ ನೀಡಲು ಹೋಟೆಲ್‌ಗಳಿಗೆ ಹೈಕೋರ್ಟ್ ಅನುಮತಿ

ಚುನಾವಣೆಯ ದಿನ ಮತದಾನ ಮಾಡಿದವರಿಗೆ ಉಚಿತ ಆಹಾರ ವಿತರಣೆ ಮಾಡಲು ಬೃಹತ್...

ಇಲ್ಲಾ ಗೌಡ್ರೇ, ಇದು ನ್ಯಾಯ ಅಲ್ಲ, ಇನ್ನು ನಿಲ್ಲಿಸ್ಬಿಡಿ ಸಾಕು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮನವಿ

ಪ್ರಜ್ವಲ್‌ ರೇವಣ್ಣನ ವಿಡಿಯೋಗಳನ್ನ ನೋಡಿ ಹಾಸನದ ಜನ ಬೆಚ್ಚಿ ಬಿದ್ದಿದ್ದಾರೆ. ಮೊದಮೊದಲು...