2.53 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಶಂಕುಸ್ಥಾಪನೆ

Date:

ಕೋಲಾರ: ನಗರದ ವಿವಿಧೆಡೆ ಬೀದಿ ವ್ಯಾಪಾರಿಗಳು ಮತ್ತು ಸಂಚಾರಿ ವ್ಯಾಪಾರಿಗಳನ್ನು ಒಂದೇ ಸೂರಿನಡಿ ತರಲು ಪ್ರಯತ್ನವಾಗಿ ಟಿ.ಚೆನ್ನಯ್ಯ ಸಂತೆ ಮೈದಾನ ಹಾಗೂ ಪ್ರಭಾತ್ ಟಾಕೀಸ್ ರಸ್ತೆ ಪಕ್ಕದಲ್ಲಿ ಸ್ಟ್ರೀಟ್ ವೆಂಡರ್ಸ್ ಜೋನ್ ಅಭಿವೃದ್ಧಿ ನಡೆಸಲಾಗುತ್ತಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

- Advertisement -

ಕೋಲಾರ ನಗರಸಭೆ ವತಿಯಿಂದ ನಗರದ ವಿವಿಧೆಡೆ ಅಂದಾಜು 2.53 ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದ ಅವರು ಸತ್ಯನಾರಾಯಣ ಜ್ಯುವೆಲ್ಲರ್ಸ್ ಸಹಯೋಗದಲ್ಲಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಸಮೀಪದ ಅಂತರಗಂಗೆ ರಸ್ತೆಗೆ ಕಮಾನು (ಎ.ಆರ್.ಸಿ. ಹೆಚ್) ನಿರ್ಮಾಣಕ್ಕೆ 1.50 ಕೋಟಿ ಮತ್ತು ಬಸ್ ನಿಲ್ದಾಣದ ಕಡೆಯಿಂದ ಕಾಳಮ್ಮ ಗುಡಿ ರಸ್ತೆ ಸಂಪರ್ಕಿಸುವ ರಾಣಿ ಚೆನ್ನಮ್ಮ ವೃತ್ತದ 52 ಲಕ್ಷ ರೂಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದೇ ವೇಳೆ ನಗರಸಭೆಯ ಐ.ಡಿ.ಎಸ್.ಎಂ.ಟಿ ಯೋಜನೆಯ ಲೆಕ್ಕ ಶೀರ್ಷಿಕೆಯಡಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಸಮೀಪ ಟಿ.ಚನ್ನಯ್ಯ ಸಂತೆ ಮೈದಾನದಲ್ಲಿ 180 ಲಕ್ಷ ವೆಚ್ಚದಲ್ಲಿ ಹೂವು, ಹಣ್ಣು,ತರಕಾರಿ ಮಾರುಕಟ್ಟೆ ನಿರ್ಮಾಣ, ಹಾಗೂ ನಗರಸಭೆ ನಿಧಿಯಲ್ಲಿ ವಾರ್ಡ್ ನಂಬರ್ 9ರ ಸರ್ವಜ್ಞ ಪಾರ್ಕ್ ಹಿಂಭಾಗ ಪ್ರಭಾತ ಟ್ಯಾಕೀಸ್ ರಸ್ತೆಯಲ್ಲಿ ಸ್ಟ್ರೀಟ್ ವೆಂಡರ್ಸ್ ಕಾಮಗಾರಿಗೆ, ಗುದ್ದಲಿ ಪೂಜೆ ನೆರವೇರಿಸಿದರು.

ಇದೇ ವೇಳೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಮುಂಬರುವ ಸಚಿವ ಸಂಪುಟ ವಿಸ್ತರಣೆ ವೇಳೆ ಕೋಲಾರ ಜಿಲ್ಲೆಯ ಯಾರಿಗಾದರೂ ಒಬ್ಬರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿ ಹಾಗೂ ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಿದರು.

ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಬಗ್ಗೆ ಶೀಘ್ರದಲ್ಲೇ ದಾಖಲೆ ಸಮೇತ ಮಾಧ್ಯಮಗಳಿಗೆ ಹಾಗೂ ವಿಪಕ್ಷಗಳಿಗೆ ತಿಳಿಸಲಾಗುವುದು ಎಂದು ಹೇಳಿದರು.

ಇದನ್ನು ಓದಿದ್ದೀರಾ..? ಶ್ರೀನಿವಾಸಪುರ | ಗಾಳಿ-ಮಳೆಗೆ ಮಾವು ಬೆಳೆ ನಾಶ: ರೈತರಿಗೆ ತ್ವರಿತ ಪರಿಹಾರ ನೀಡಲು ಕೆಆರ್‌ಎಸ್ ಪಕ್ಷ ಆಗ್ರಹ

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷ ವೈ.ಶಿವಕುಮಾರ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಸರ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ನಗರಸಭೆ ಮಾಜಿ ಅಧ್ಯಕ್ಷೆ ಲಕ್ಷ್ಮೀ ದೇವಮ್ಮ ರಮೇಶ್, ಕಾಂಗ್ರೆಸ್ ಪರಿಶಿಷ್ಟ ಪಂಗಡಗಳ ವಿಭಾಗದ ಜಿಲ್ಲಾ ಅಧ್ಯಕ್ಷ ಎನ್.ಅಂಬರೀಷ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಪೈರೋಜ್ ಖಾನ್, ಸತ್ಯನಾರಾಯಣ ಜ್ಯುವೆಲ್ಲರ್ಸ್ ಮಾಲೀಕ ಕಾಂಗ್ರೆಸ್ ಮುಖಂಡರಾದ ಕಠಾರಿಪಾಳ್ಯ ಗಂಗಣ್ಣ ಅಮರನಾಥ್, ಸೇರಿದಂತೆ ನಗರಸಭೆ ಅಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...