ಕೋಲಾರ | 9ನೇ ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ಶಾಸಕ ಕೊತ್ತೂರು ಮಂಜುನಾಥ್ ದಿಢೀರ್ ಭೇಟಿ ಪರಿಶೀಲನೆ

Date:

ನಗರದ 9ನೇ ವಾರ್ಡಿನ ರಸ್ತೆಗಳು ತೀವ್ರವಾಗಿ ಹದಗೆಟ್ಟಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೊತ್ತೂರು ಜಿ. ಮಂಜುನಾಥ್ ಅವರು, ಬುಧವಾರ ಸ್ವತಃ ರಸ್ತೆಗಿಳಿದು ವಾರ್ಡಿನ ಪ್ರತಿಯೊಂದು ಗಲ್ಲಿಗಳಲ್ಲೂ ಸಂಚರಿಸಿ ಸಮಗ್ರ ಪರಿಶೀಲನೆ ನಡೆಸಿದರು.

- Advertisement -

ಪರಿಶೀಲನೆ ವೇಳೆ ಸ್ಥಳೀಯ ನಿವಾಸಿಗಳ ಅಹವಾಲು ಆಲಿಸಿದ ಶಾಸಕರು, ನಗರದ ಅಭಿವೃದ್ಧಿ ವಿಚಾರದಲ್ಲಿ ಎಷ್ಟೇ ಅಡೆತಡೆಗಳು ಎದುರಾದರೂ, ಅದನ್ನೆಲ್ಲಾ ಸಮರ್ಥವಾಗಿ ನಿವಾರಿಸಲಾಗುವುದು. ಸಾರ್ವಜನಿಕರ ಮತ್ತು ವಾರ್ಡಿನ ನಿವಾಸಿಗಳ ಹಿತದೃಷ್ಟಿಯಿಂದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು ನನ್ನ ಮೊದಲ ಆದ್ಯತೆಯಾಗಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ, ಶೀಘ್ರದಲ್ಲೇ ವಾರ್ಡಿನ ಮುಖಪುಟ ಬದಲಾಗಲಿದೆ” ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ಇದೇ ವೇಳೆ ಶಾಸಕರ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ವಾರ್ಡಿನ ಸಾರ್ವಜನಿಕರೊಬ್ಬರು, ನಿಮ್ಮ ಅಭಿವೃದ್ಧಿ ಕಾರ್ಯಗಳು ಇಡೀ ಕೋಲಾರ ಕ್ಷೇತ್ರಕ್ಕೆ ಮಾದರಿಯಾಗಿವೆ. ಇದೇ ರೀತಿ ಅಭಿವೃದ್ಧಿ ಪರ್ವ ಮುಂದುವರೆಯಲಿ. ಮುಂಬರುವ ಚುನಾವಣೆಯಲ್ಲಿ ನಮ್ಮ ಇಡೀ ಸಮುದಾಯ ನಿಮ್ಮ ಬೆನ್ನಿಗೆ ನಿಂತು, ನಿಮ್ಮನ್ನು ಬೆಂಬಲಿಸಿ ಹರಸಲಿದೆ ಎಂದು ಜೈಕಾರ ಹಾಕಿದರು. ಸಾರ್ವಜನಿಕರ ಈ ಪ್ರೀತಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು, ಏನೇ ಸಮಸ್ಯೆಗಳಿದ್ದರೂ ತಕ್ಷಣವೇ ಬಗೆಹರಿಸಿ ವಾರ್ಡನ್ನು ಮತ್ತಷ್ಟು ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡಿದರು.

ಸಾರ್ವಜನಿಕರೊಬ್ಬರು ಎಸ್.ಐ.ಆರ್. ಪ್ರಕ್ರಿಯೆಗೆ ಸಂಬಂಧಿಸಿದಂತೆ ಬಿ.ಎಲ್.ಓ.ಗಳು ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಈ ವಾರ್ಡಿನಲ್ಲಿ ಸರಿಯಾಗಿ ಸ್ಪಂದಿಸುತ್ತಿಲ್ಲ, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಶಾಸಕರಲ್ಲಿ ಅಳಲು ತೋಡಿಕೊಂಡರು.
ದೂರಿಗೆ ತಕ್ಷಣವೇ ಪ್ರತಿಕ್ರಿಯಿಸಿದ ಶಾಸಕ ಕೊತ್ತೂರು ಜಿ ಮಂಜುನಾಥ್ ಅವರು, ಸಾರ್ವಜನಿಕರ ಕೆಲಸದಲ್ಲಿ ನಿರ್ಲಕ್ಷ್ಯ ತೋರುವ ಬಿ.ಎಲ್.ಓ ೨ ರನ್ನು ಕೂಡಲೇ ಬದಲಾವಣೆ ಮಾಡಲಾಗುವುದು. ನಿಮ್ಮ ವಾರ್ಡಿನ ಬಿ.ಎಲ್.ಓ ೧ ನಾನೇ ಆಗಿದ್ದು, ಜನರಿಗೆ ತೊಂದರೆ ಕೊಡುವ ಬಿ.ಎಲ್.ಓ ೨ ರನ್ನು ಬದಲಾಯಿಸುವ ಅಧಿಕಾರ ನನಗಿದೆ. ಕ್ಷೇತ್ರದ ಯಾವುದೇ ನಾಗರಿಕರು ಎಸ್.ಐ.ಆರ್.ನಿಂದ ವಂಚಿತರಾಗಬಾರದು. ಪ್ರತಿಯೊಬ್ಬ ಅರ್ಹರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಿ, ನಿಮ್ಮೊಂದಿಗೆ ನಾನಿದ್ದೇನೆ ಎಂದು ನಾಗರಿಕರಲ್ಲಿ ಧೈರ್ಯ ತುಂಬಿದರು.

ಶಾಸಕರ ಈ ದಿಢೀರ್ ಭೇಟಿ, ಅಧಿಕಾರಿಗಳಿಗೆ ಸ್ಥಳದಲ್ಲೇ ಖಡಕ್ ಎಚ್ಚರಿಕೆ ಹಾಗೂ ಅಭಿವೃದ್ಧಿಯ ಭರವಸೆಗಳು 9ನೇ ವಾರ್ಡಿನ ನಿವಾಸಿಗಳಲ್ಲಿ ಹೊಸ ಭರವಸೆ ಮೂಡಿಸಿದೆ.

ಇದನ್ನು ಓದಿದ್ದೀರಾ..? ಕೋಲಾರ : ರಾಜಕೀಯ ಪ್ರಮುಖರಿಗೆ ಎಸ್ಐಆರ್ ಆರ್ಜಿ ವಿತರಿಸಿದ ಅಧಿಕಾರಿಗಳು

ಈ ಸಂದರ್ಭದಲ್ಲಿ ಎಂಎಲ್ಸಿ ಅನಿಲ್‌ಕುಮಾರ್, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಪ್ಸರ್, ಮೈಲಾಂಡಹಳ್ಳಿ ಮುರಳಿ, ಆರೋಗ್ಯ ರಕ್ಷಣಾ ಸಮಿತಿ ಸದಸ್ಯ ನದೀಮ್, ಮುಖಂಡರುಗಳಾದ ವೀರೇಂದ್ರ ಪಾಟೀಲ್, ನಗರಸಭೆ ಪೌರಾಯುಕ್ತ ವೆಂಕಟೇಶ್ ಸೇರಿದಂತೆ ಇನ್ನಿತರರು ಶಾಸಕರಿಗೆ ಸಾಥ್ ನೀಡಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸ್ವಾತಂತ್ರ್ಯ ಬಂದು 79 ವರ್ಷ ಕಳೆದರೂ ರೈತರ ನೀರಿನ ಹೋರಾಟಕ್ಕೆ ಮುಕ್ತಿ ಇಲ್ಲ: ವೀರಭದ್ರಸ್ವಾಮಿ

ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷ ಕಳೆಯುತ್ತಾ ಬಂದರೂ ಬೆಳೆಗಳನ್ನು ಉಳಿಸಿಕೊಳ್ಳಲು...

ಧಾರವಾಡ |ಪ್ರಜಾಪ್ರಭುತ್ವದ ಮೌಲ್ಯಗಳನ್ನು ಯುವಜನರಲ್ಲಿ ಬೆಳೆಸಬೇಕು: ಜಕ್ಕಪ್ಪನವರ

ಪ್ರಜಾಪ್ರಭುತ್ವದ ಆಶಯಗಳು ಭಾರತೀಯರ ಜೀವನದ ಅವಿಭಾಜ್ಯ ಭಾಗವಾಗಿದ್ದು, ಸಮಾನತೆ, ಭ್ರಾತೃತ್ವ ಮತ್ತು...

ಉಡುಪಿ | ಪಡುಬಿದ್ರಿಯಲ್ಲಿ ನ.18ರಂದು 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಾರ್ವಜನಿಕ, ಖಾಸಗಿ ಹಾಗೂ...