ಕೋಲಾರ | 9ನೇ ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ಶಾಸಕ ಕೊತ್ತೂರು ಮಂಜುನಾಥ್ ದಿಢೀರ್ ಭೇಟಿ ಪರಿಶೀಲನೆ

Date:

ಕೋಲಾರ: ನಗರದ 9ನೇ ವಾರ್ಡಿನ ರಸ್ತೆಗಳು ತೀವ್ರವಾಗಿ ಹದಗೆಟ್ಟಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೊತ್ತೂರು ಜಿ. ಮಂಜುನಾಥ್ ಅವರು, ಬುಧವಾರ ಸ್ವತಃ ರಸ್ತೆಗಿಳಿದು ವಾರ್ಡಿನ ಪ್ರತಿಯೊಂದು ಗಲ್ಲಿಗಳಲ್ಲೂ ಸಂಚರಿಸಿ ಸಮಗ್ರ ಪರಿಶೀಲನೆ ನಡೆಸಿದರು.

- Advertisement -

ಪರಿಶೀಲನೆ ವೇಳೆ ಸ್ಥಳೀಯ ನಿವಾಸಿಗಳ ಅಹವಾಲು ಆಲಿಸಿದ ಶಾಸಕರು, ನಗರದ ಅಭಿವೃದ್ಧಿ ವಿಚಾರದಲ್ಲಿ ಎಷ್ಟೇ ಅಡೆತಡೆಗಳು ಎದುರಾದರೂ, ಅದನ್ನೆಲ್ಲಾ ಸಮರ್ಥವಾಗಿ ನಿವಾರಿಸಲಾಗುವುದು. ಸಾರ್ವಜನಿಕರ ಮತ್ತು ವಾರ್ಡಿನ ನಿವಾಸಿಗಳ ಹಿತದೃಷ್ಟಿಯಿಂದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು ನನ್ನ ಮೊದಲ ಆದ್ಯತೆಯಾಗಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ, ಶೀಘ್ರದಲ್ಲೇ ವಾರ್ಡಿನ ಮುಖಪುಟ ಬದಲಾಗಲಿದೆ” ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದೇ ವೇಳೆ ಶಾಸಕರ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ವಾರ್ಡಿನ ಸಾರ್ವಜನಿಕರೊಬ್ಬರು, ನಿಮ್ಮ ಅಭಿವೃದ್ಧಿ ಕಾರ್ಯಗಳು ಇಡೀ ಕೋಲಾರ ಕ್ಷೇತ್ರಕ್ಕೆ ಮಾದರಿಯಾಗಿವೆ. ಇದೇ ರೀತಿ ಅಭಿವೃದ್ಧಿ ಪರ್ವ ಮುಂದುವರೆಯಲಿ. ಮುಂಬರುವ ಚುನಾವಣೆಯಲ್ಲಿ ನಮ್ಮ ಇಡೀ ಸಮುದಾಯ ನಿಮ್ಮ ಬೆನ್ನಿಗೆ ನಿಂತು, ನಿಮ್ಮನ್ನು ಬೆಂಬಲಿಸಿ ಹರಸಲಿದೆ ಎಂದು ಜೈಕಾರ ಹಾಕಿದರು. ಸಾರ್ವಜನಿಕರ ಈ ಪ್ರೀತಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು, ಏನೇ ಸಮಸ್ಯೆಗಳಿದ್ದರೂ ತಕ್ಷಣವೇ ಬಗೆಹರಿಸಿ ವಾರ್ಡನ್ನು ಮತ್ತಷ್ಟು ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡಿದರು.

ಸಾರ್ವಜನಿಕರೊಬ್ಬರು ಎಸ್.ಐ.ಆರ್. ಪ್ರಕ್ರಿಯೆಗೆ ಸಂಬಂಧಿಸಿದಂತೆ ಬಿ.ಎಲ್.ಓ.ಗಳು ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಈ ವಾರ್ಡಿನಲ್ಲಿ ಸರಿಯಾಗಿ ಸ್ಪಂದಿಸುತ್ತಿಲ್ಲ, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಶಾಸಕರಲ್ಲಿ ಅಳಲು ತೋಡಿಕೊಂಡರು. ದೂರಿಗೆ ತಕ್ಷಣವೇ ಪ್ರತಿಕ್ರಿಯಿಸಿದ ಶಾಸಕ ಕೊತ್ತೂರು ಜಿ ಮಂಜುನಾಥ್ ಅವರು, ಸಾರ್ವಜನಿಕರ ಕೆಲಸದಲ್ಲಿ ನಿರ್ಲಕ್ಷ್ಯ ತೋರುವ ಬಿ.ಎಲ್.ಓ ೨ ರನ್ನು ಕೂಡಲೇ ಬದಲಾವಣೆ ಮಾಡಲಾಗುವುದು. ನಿಮ್ಮ ವಾರ್ಡಿನ ಬಿ.ಎಲ್.ಓ ೧ ನಾನೇ ಆಗಿದ್ದು, ಜನರಿಗೆ ತೊಂದರೆ ಕೊಡುವ ಬಿ.ಎಲ್.ಓ ೨ ರನ್ನು ಬದಲಾಯಿಸುವ ಅಧಿಕಾರ ನನಗಿದೆ. ಕ್ಷೇತ್ರದ ಯಾವುದೇ ನಾಗರಿಕರು ಎಸ್.ಐ.ಆರ್.ನಿಂದ ವಂಚಿತರಾಗಬಾರದು. ಪ್ರತಿಯೊಬ್ಬ ಅರ್ಹರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಿ, ನಿಮ್ಮೊಂದಿಗೆ ನಾನಿದ್ದೇನೆ ಎಂದು ನಾಗರಿಕರಲ್ಲಿ ಧೈರ್ಯ ತುಂಬಿದರು.

ಶಾಸಕರ ಈ ದಿಢೀರ್ ಭೇಟಿ, ಅಧಿಕಾರಿಗಳಿಗೆ ಸ್ಥಳದಲ್ಲೇ ಖಡಕ್ ಎಚ್ಚರಿಕೆ ಹಾಗೂ ಅಭಿವೃದ್ಧಿಯ ಭರವಸೆಗಳು 9ನೇ ವಾರ್ಡಿನ ನಿವಾಸಿಗಳಲ್ಲಿ ಹೊಸ ಭರವಸೆ ಮೂಡಿಸಿದೆ.

ಇದನ್ನು ಓದಿದ್ದೀರಾ..? ಕೋಲಾರ : ರಾಜಕೀಯ ಪ್ರಮುಖರಿಗೆ ಎಸ್ಐಆರ್ ಆರ್ಜಿ ವಿತರಿಸಿದ ಅಧಿಕಾರಿಗಳು

ಈ ಸಂದರ್ಭದಲ್ಲಿ ಎಂಎಲ್ಸಿ ಅನಿಲ್‌ಕುಮಾರ್, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಪ್ಸರ್, ಮೈಲಾಂಡಹಳ್ಳಿ ಮುರಳಿ, ಆರೋಗ್ಯ ರಕ್ಷಣಾ ಸಮಿತಿ ಸದಸ್ಯ ನದೀಮ್, ಮುಖಂಡರುಗಳಾದ ವೀರೇಂದ್ರ ಪಾಟೀಲ್, ನಗರಸಭೆ ಪೌರಾಯುಕ್ತ ವೆಂಕಟೇಶ್ ಸೇರಿದಂತೆ ಇನ್ನಿತರರು ಶಾಸಕರಿಗೆ ಸಾಥ್ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...