ಚಿಕ್ಕಬಳ್ಳಾಪುರ | ಎಂಎಲ್‌ಎ ಪ್ರದೀಪ್‌ ಈಶ್ವರ್‌ ಸ್ಕಾಲರ್‌ಶಿಪ್‌ – 2024 ಘೋಷಣೆ

Date:

10ನೇ ತರಗತಿಯಿಂದ ಉನ್ನತ ಶಿಕ್ಷಣದವರೆಗೂ ವಿದ್ಯಾರ್ಥಿ ವೇತನ | ನವೆಂಬರ್‌ 15ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ

ಚಿಕ್ಕಬಳ್ಳಾಪುರ ಕ್ಷೇತ್ರ ವ್ಯಾಪ್ತಿಯಲ್ಲಿ 10ನೇ ತರಗತಿಯಿಂದ ಉನ್ನತ ಶಿಕ್ಷಣದವರೆಗೆ ಸರಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರದೀಪ್‌ ಈಶ್ವರ್‌ ಸ್ಕಾಲರ್‌ ಶಿಪ್‌ – 2024 ಯೋಜನೆಯಡಿ ವಿದ್ಯಾರ್ಥಿವೇತನ ನೀಡಲಾಗುವುದು ಎಂದು ಶಾಸಕ ಪ್ರದೀಪ್ ಈಶ್ವರ್ ಘೋಷಣೆ ಮಾಡಿದರು.

- Advertisement -

ಚಿಕ್ಕಬಳ್ಳಾಪುರ ನಗರ ಹೊರವಲಯದ ಕಂದವಾರ ಬಳಿಯಿರುವ ಶಾಸಕರ ಗೃಹಕಚೇರಿಯಲ್ಲಿ ಬುಧವಾರ ಸುದ್ದಗೋಷ್ಠಿ ನಡೆಸಿ ಮಾತನಾಡಿದ ಶಾಸಕರು, ಸ್ಕಾಲರ್‌ ಶಿಪ್‌ ಪಡೆಯುವ ವಿದ್ಯಾರ್ಥಿಗಳು ಜಿಲ್ಲಾ ವ್ಯಾಪ್ತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು ಮತ್ತು ಅವರ ಪೋಷಕರು ನನ್ನ ಕ್ಷೇತ್ರದವರಾಗಿರಬೇಕು. ಅಂತಹವರು ಮಾತ್ರ ಸ್ಕಾಲರ್‌ ಶಿಪ್‌ ಪಡೆಯಲು ಅರ್ಹರು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

10ನೇ ತರಗತಿ ವಿದ್ಯಾರ್ಥಿಗಳಿಗೆ 1000, ಡಿಪ್ಲೊಮಾ ಮತ್ತು ಐಟಿಐ ವಿದ್ಯಾರ್ಥಿಗಳಿಗೆ 1500, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 2000, ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ 2000, ಸ್ನಾತಕೋತ್ತರ ಪದವಿ ಮತ್ತು ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ 3000 ವಿದ್ಯಾರ್ಥಿ ವೇತನ ನೀಡಲಾಗುವುದು ಎಂದು ತಿಳಿಸಿದರು.

Pradeep Eshwar 12

‌ಸ್ಕಾಲರ್‌ ಶಿಪ್‌ಗಾಗಿ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ https://pradeepeshwarmla.com ಜಾಲತಾಣದಲ್ಲಿ ಮತ್ತು ಕರಪತ್ರದಲ್ಲಿರುವ ಕ್ಯೂಆರ್‌ ಕೋಡ್ ಬಳಸಿ ಸ್ಕಾಲರ್‌ ಶಿಪ್‌ಗೆ ಅರ್ಜಿ ಸಲ್ಲಿಸಬಹುದು ಎಂದು ಮಾಹಿತಿ ನೀಡಿದರು.

ನನ್ನ ಕ್ಷೇತ್ರದ 60,180 ಮನೆಗಳಿಗೂ ವಿದ್ಯಾರ್ಥಿ ವೇತನದ ಕುರಿತು ಒಂದು ತಿಂಗಳ ಅಭಿಯಾನದ ಮೂಲಕ ಕರಪತ್ರ ಹಂಚಿಕೆ ಮಾಡಲಾಗುವುದು. ಪ್ರದೀಪ್ ಈಶ್ವರ್ ಸ್ಕಾಲರ್‌ಶಿಪ್ ಪಡೆಯಲು ಯಾವುದೇ ಜಾತಿ, ಮತ, ಪಕ್ಷದ ನಿರ್ಭಂಧವಿಲ್ಲ. ಇದು ಜಾತ್ಯಾತೀತ ಮತ್ತು ಪಕ್ಷಾತೀತವಾದ ಕಾರ್ಯಕ್ರಮವಾಗಿದೆ. ಸ್ಕಾಲರ್‌ ಶಿಪ್‌ಗಾಗಿ 7 ರಿಂದ 8 ಕೋಟಿ ಖರ್ಚು ಆಗಬಹುದು ಎಂಬ ನಿರೀಕ್ಷೆ ಇದೆ. ಇದನ್ನು ಪ್ರತಿವರ್ಷ ಕೊಡುವ ಸಂಕಲ್ಪ ಮಾಡಲಾಗಿದೆ. ಕಳೆದ ವರ್ಷ ಬೆಂಗಳೂರಿನ ಪೂರ್ಣಿಮಾ ಪ್ಯಾಲೇಸ್‌ನಲ್ಲಿ ಎಂಬಿಬಿಎಸ್, ಇಂಜನಿಯರಿಂಗ್ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಿದ್ದೆ. ಈ ಬಾರಿ ಹೆಚ್ಚಿನ ವಿದ್ಯಾರ್ಥಿಗಳಿಂದ ಬೇಡಿಕೆ ಬಂದ ಕಾರಣ ಸುದ್ದಿಗೋಷ್ಟಿ ಮೂಲಕ ಮಾಹಿತಿ ತಿಳಿಸುತ್ತಿದ್ದೇನೆ ಎಂದರು.

ನವೆಂಬರ್‌ 15ರವರೆಗೆ ಕಾಲಾವಕಾಶ

ವಿದ್ಯಾರ್ಥಿಗಳು ಮನೆಯಲ್ಲೆ ಕುಳಿತು ಸುಲಭವಾಗಿ ಪೋನ್ ಮೂಲಕ ನೊಂದಾಯಿಸಿಕೊಂಡು ಯೋಜನೆಯ ಸದುಪಯೋಗಪಡೆದುಕೊಳ್ಳಬಹುದು. ಅಕ್ಟೋಬರ್ ೧೫ ರಿಂದ ನವೆಂಬರ್ ೧೫ರವರೆಗೂ ನೊಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಕ್ಷೇತ್ರ ವ್ಯಾಪ್ತಿಯ ಎಲ್ಲಾ ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಾರಾಷ್ಟ್ರ, ಝಾರ್ಖಂಡ್ ಚುನಾವಣೆ- ಬಿಜೆಪಿ ಪಾಲಿಗೆ ವರವೇ ಅಥವಾ ಶಾಪವೇ?

ದೀಪಾವಳಿಗೆ 20 ಸಾವಿರ ಮಕ್ಕಳಿಗೆ ಬಟ್ಟೆ
ಕ್ಷೇತ್ರದಲ್ಲಿ ನಾನು ಎಂಎಲ್‌ಎ ಆದ ಕೂಡಲೇ ಗಂಟು ಮಾಡುವ ಬದಲಿಗೆ ಜನರ ಸಂಕಷ್ಟಗಳ ಪರಿಹಾರಕ್ಕೆ ಅವರ ಮನೆಬಾಗಿಲಿಗೆ ನಾನೇ ಹೋಗಿದ್ದೇನೆ. ಜನರ ಕಷ್ಟ ಪರಿಹಾರಕ್ಕೆ https://pradeepeshwarmla.com ಜಾಲತಾಣ ಪ್ರಾರಂಭಿಸಿದ್ದೇನೆ. ಒಂದೂವರೆ ವರ್ಷದಿಂದ ವರಮಹಾಲಕ್ಷ್ಮೀ ಹಬ್ಬಕ್ಕೆ ನನ್ನ ತಾಯಂದಿರಿಗೆ ಅಕ್ಕ – ತಂಗಿಯರಿಗೆ ಹರಿಶಿಣ ಕುಂಕುಮ ಕೊಡುತ್ತಿದ್ದೇನೆ. ನನ್ನ ಕುಟುಂಬಕ್ಕೆ ಬಂದ ಸ್ಥಿತಿ ಯಾರಿಗೂ ಬರಬಾರದೆಂದು ವಾರ ಪೂರ್ತಿ ದಿನದ 24 ಗಂಟೆ ಕೆಲಸ ಮಾಡುವ 10 ಆಂಬುಲೆನ್ಸ್ ಮೂಲಕ ಉಚಿತ ಸೇವೆ ನೀಡುತ್ತಿದ್ದೇನೆ. ಪ್ರತಿ ದೀಪಾವಳಿಗೆ 20 ಸಾವಿರ ಶಾಲಾ ಮಕ್ಕಳಿಗೆ ಹೊಸಬಟ್ಟೆ ಕೊಡಿಸುತ್ತಿದ್ದೇನೆ. ಶಿವರಾತ್ರಿಗೆ 5 ಸಾವಿರ ಅಂಗನವಾಡಿ ಮಕ್ಕಳಿಗೆ ಹೊಸಬಟ್ಟೆ ಕೊಡುವ ಕೆಲಸ ಮಾಡುತ್ತಿದ್ದೇನೆ. ನನ್ನ ಬದುಕನ್ನು ಕ್ಷೇತ್ರದ ಜನರಿಗಾಗಿ ಮೀಸಲಾಗಿಟ್ಟಿದ್ದೇನೆ. ಅಧಿಕಾರಕ್ಕಾಗಿ ನಾನು ಆಸೆ ಪಟ್ಟವನಲ್ಲ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...