25 ಪೊಲೀಸರ ವರ್ಗಾವಣೆ ಕೋರಿ ಐಜಿಪಿಗೆ ಶಾಸಕ ಬಸವರಾಜ ರಾಯರೆಡ್ಡಿ ಪತ್ರ: ವರ್ಗಾವಣೆ ದಂಧೆ ಆರೋಪ

Date:

  • ಬಳ್ಳಾರಿ ವಲಯದ ಪೊಲೀಸ ಮಹಾ ನಿರೀಕ್ಷಕರಿಗೆ ಶಾಸಕ ರಾಯರೆಡ್ಡಿ ಪತ್ರ
  • ಪೊಲೀಸ್‌ ಅಧಿಕಾರಿಗಳ ಹೆಸರಿನ ಮುಂದೆ ವರ್ಗಾಯಿಸಬೇಕಾದ ಸ್ಥಳ ನಮೂದು

ವರ್ಗಾವಣೆ ದಂಧೆಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಪದೇ ಪದೇ ಆರೋಪಿಸುತ್ತಲೇ ಇದ್ದಾರೆ. ಎಚ್‌ಡಿಕೆ ಆರೋಪಕ್ಕೆ ಬಿಜೆಪಿ ಕೂಡ ಧ್ವನಿಗೂಡಿಸಿದೆ. ಈ ನಡುವೆಯೇ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರು ಕೊಪ್ಪಳ ಜಿಲ್ಲೆಯ 25ಕ್ಕೂ ಹೆಚ್ಚು ಪೊಲೀಸರನ್ನು ವರ್ಗಾವಣೆ ಮಾಡುವಂತೆ ಕೋರಿ ಐಜಿಪಿಗೆ ಪತ್ರ ಬರೆದಿದ್ದಾರೆ.

- Advertisement -

ವರ್ಗಾವಣೆಯಾಗಬೇಕಾದ ಪೊಲೀಸ್‌ ಅಧಿಕಾರಿಗಳ ಹೆಸರಿನ ಮುಂದೆ ವರ್ಗಾಯಿಸಬೇಕಾದ ಸ್ಥಳವನ್ನು ಕೂಡ ನಮೂದಿಸಿರುವುದು ವರ್ಗಾವಣೆ ದಂಧೆಯ ಅನುಮಾನಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಬಳ್ಳಾರಿ ವಲಯದ ಪೊಲೀಸ್ ಮಹಾ ನಿರೀಕ್ಷಕ ಲೋಕೇ‌ಶ್‌ ಕುಮಾರ್‌ ಅವರಿಗೆ ಪತ್ರ ಬರೆದಿರುವ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ನಡೆ ಮೇಲೆ ಪ್ರತಿಪಕ್ಷದ ನಾಯಕರು ಕಿಡಿಕಾರಿದ್ದಾರೆ. ರಾಯರೆಡ್ಡಿ ಬರೆದ ಪತ್ರ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಸಾಮೂಹಿಕ ವರ್ಗಾವಣೆ ಮಾಡಿಸುವುದಕ್ಕೆ ಇವರ‍್ಯಾರು ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ.

ರಾಯರೆಡ್ಡಿ

ಬಸವರಾಜ ರಾಯರೆಡ್ಡಿ ಅವರ ಹೆಸರಿನ ಲೆಟರ್‌ ಹೆಡ್‌ನಲ್ಲಿಯೇ ಪತ್ರ ಬರೆಯಲಾಗಿದ್ದು, ಕೊಪ್ಪಳ ಜಿಲ್ಲೆಯ 25 ಪೊಲೀಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಮನವಿ ಮಾಡಿದ್ದಾರೆ. ಅದರಲ್ಲೂ ತಮ್ಮ ಕ್ಷೇತ್ರ ಯಲಬುರ್ಗಾ ವ್ಯಾಪ್ತಿಯ ಕುಕನೂರು ಮತ್ತು ಯಲಬುರ್ಗಾ ಪೊಲೀಸ್‌ ಠಾಣೆಗಳಿಗೆ ಸೇರಿದ ಹೆಚ್ಚಿನ ಪೊಲೀಸರನ್ನು ವರ್ಗಾವಣೆ ಮಾಡಲು ಮನವಿ ಮಾಡಿದ್ದಾರೆ. ಜೊತೆಗೆ ಕೊಪ್ಪಳ, ಗಂಗಾವತಿ ಹಾಗೂ ಕುಷ್ಟಗಿ ತಾಲೂಕುಗಳ ಪೊಲೀಸರನ್ನು ಕೂಡ ವರ್ಗಾವಣೆ ಮಾಡಬೇಕೆಂದು ಪತ್ರದಲ್ಲಿ ಹೇಳಿದ್ದಾರೆ.

ರಾಯರೆಡ್ಡಿ ಅವರು ಈ ರೀತಿ ಸಾಮೂಹಿಕ ವರ್ಗಾವಣೆ ಮೂಲಕ ಹಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ತಮಗೆ ಬೇಕಾದವರಿಗೆ ವರ್ಗಾವಣೆ ಮಾಡಿಸಿ ರಾಜಕಾರಣ ಹಾಗೂ ಹಣ ಮಾಡುತ್ತಿದ್ದಾರೆಂದು ಸ್ಥಳೀಯ ಬಿಜೆಪಿ ಮುಖಂಡರು ದೂರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...