ಬಡ ಮೀನುಗಾರರ ಹಕ್ಕುಪತ್ರಕ್ಕೆ ರಿಯಾಯಿತಿ ದರ ನಿಗದಿಗೆ ಶಾಸಕರ ಮನವಿ

Date:

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಡಿ ಗ್ರಾಮ ಬಡ ಮೀನುಗಾರರ ಹಕ್ಕುಪತ್ರಕ್ಕೆ ರಿಯಾಯಿತಿ ದರ ನಿಗದಿಗೊಳಿಸುವಂತೆ ಕಂದಾಯ ಸಚಿವ ಭೈರೇಗೌಡರಿಗೆ ಶಾಸಕ ಕಿರಣ್ ಕೊಡ್ಗಿ ಮನವಿ ಸಲ್ಲಿಸಿದ್ದಾರೆ.

ಬೆಂಗಳೂರಿನ ವಿಕಾಸಸೌಧದಲ್ಲಿ ಕೃಷ್ಣ ಭೈರೇಗೌಡರನ್ನು ಶಾಸಕ ಕಿರಣ್ ಕೊಡ್ಗಿ ಭೇಟಿ ಮಾಡಿದ್ದಾರೆ. ಕೋಡಿ ಗ್ರಾಮದ ಬಡ ಮೀನುಗಾರರ ಹಕ್ಕುಪತ್ರಕ್ಕೆ ನಿಗದಿಗೊಳಿಸಿದ ದರದಲ್ಲಿ ರಿಯಾಯಿತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ.

“ಸುಮಾರು 400ಕ್ಕೂ ಹೆಚ್ಚು ಅರ್ಜಿದಾರರ ಪೈಕಿ ಈಗಾಗಲೇ ಹಲವರಿಗೆ ಮಂಜೂರಾತಿ ನೀಡಲಾಗಿದೆ. ಕಂದಾಯ ಇಲಾಖೆ ನಿಗದಿಕರಿಸಿದ ಮೊತ್ತ ಪಾವತಿಸಲು ಬಡವರಿಗೆ ಕಷ್ಟವಾಗಿದ್ದು, ಇನ್ನೂ ಹಕ್ಕುಪತ್ರ ಪಡೆಯಲಾಗಿಲ್ಲ. ಮಲ್ಪೆ ಪಡುಕರೆಯ ಕೊಳ ಗ್ರಾಮದಲ್ಲಿ ನೀಡಿರುವ ರಿಯಾಯಿತಿ ದರದ ಮಾದರಿಯಲ್ಲಿ ಕೋಡಿ ಗ್ರಾಮದ ಮೀನುಗಾರರಿಗೂ ರಿಯಾಯತಿ ನೀಡಬೇಕು” ಎಂದು ಶಾಸಕರು ಮನವಿ ಕೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹಿಂದಿನ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಇಲಾಖೆಯ ಮುಂದೆ ಮಂಡಿಸಿದ ಮಾಹಿತಿಗಳನ್ನು ಸಚಿವರಿಗೆ ನೀಡಿದ ಕೊಡ್ಗಿಯವರು ಬಹುಬೇಗ ದರ ರಿಯಾಯಿತಿ ಆದೇಶ ನೀಡುವಂತೆ ಮನವಿ ಮಾಡಿದ್ದಾರೆ. ಶಾಸಕ ಕಿರಣ್ ಕೊಡ್ಗಿ ಅವರೊಂದಿಗೆ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಬಿಜೆಪಿ ಸೇರಿದ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಮಂಜುನಾಥ್‌

ಶಾಸಕರ ಕಡೆಗಣನೆಗೆ ಬೇಸತ್ತು ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ...

 ರೈತ ಮುಖಂಡರ ಮೇಲೆ ಬಿಜೆಪಿಗರಿಂದ ದಾಳಿ; ಅಭಿಯಾನ ತೀವ್ರಗೊಳಿಸಲು ಮುಂದಾದ ರೈತರು

ರೈತ ವಿರೋಧಿ ಪಕ್ಷಗಳನ್ನು ಸೋಲಿಸಿ ಎಂದು ಚಾಮರಾಜನಗರದಲ್ಲಿ ಪ್ರಚಾರ ಜಾಥಾ ನಡೆಸುತ್ತಿದ್ದ...

ಬೆಂಗಳೂರು | 23 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

23 ವರ್ಷದ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ...