ಕರಾವಳಿಯಲ್ಲಿ ಮತ್ತೆ ಅನೈತಿಕ ಪೊಲೀಸ್‌ಗಿರಿ: ಐವರು ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರ ಬಂಧನ

Date:

  • ಜು.29ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ
  • ವೈದ್ಯರು, ಪ್ರಾಧ್ಯಾಪಕರನ್ನು ಅಡ್ಡಗಟ್ಟಿದ್ದ ತಂಡ

ಇತ್ತೀಚೆಗೆಷ್ಟೇ ಮಂಗಳೂರಿನಲ್ಲಿ ‘ಮುಸ್ಲಿಮ್’ ಎಂದು ಭಾವಿಸಿ ಖಾಸಗಿ ಸುದ್ದಿ ಸಂಸ್ಥೆಯ ವರದಿಗಾರನೋರ್ವನಿಗೆ ನಿಂದನೆ, ಬೆದರಿಕೆ ಹಾಕಿದ್ದ ಘಟನೆ ಮಾಸುವ ಮುನ್ನವೇ ಕರಾವಳಿ ಭಾಗದಲ್ಲಿ ಮತ್ತೊಂದು ಅನೈತಿಕ ಪೊಲೀಸ್‌ಗಿರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಾರಿನಲ್ಲಿ ಹೋಗುತ್ತಿದ್ದ ವೈದ್ಯರು ಹಾಗೂ ಪ್ರಾಧ್ಯಾಪಕರನ್ನು ತಡೆದು ಅನೈತಿಕ ಪೊಲೀಸ್‌ಗಿರಿ ನಡೆಸಿದ ಆರೋಪದಲ್ಲಿ ಹಿಂದೂ ಜಾಗರಣಾ ವೇದಿಕೆಯ ಐವರು ಕಾರ್ಯಕರ್ತರನ್ನು ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಸಂತೋಷ್ ನಂದಳಿಕೆ, ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ ಮಿಯ್ಯಾರು, ಸಂದೀಪ್ ಪೂಜಾರಿ ಮಿಯ್ಯಾರು, ಸುಜಿತ್ ಸಫಲಿಗ ತೆಳ್ಳಾರು ಎಂದು ಗುರುತಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಘಟನೆ ಕಳೆದ ಜು.29ರಂದು ನಡೆದಿದ್ದರೂ, ಐದು ದಿನಗಳ ಬಳಿಕ ತಡವಾಗಿ ಬೆಳಕಿಗೆ ಬಂದಿದೆ.

ಮಂಗಳೂರಿನ ಕಾಲೇಜೊಂದರ ನಾಲ್ವರು ವೈದ್ಯರು ಹಾಗೂ ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರೊಂದಿಗೆ ಒಂದೇ ಕಾರಿನಲ್ಲಿ ತೆರಳುತ್ತಿದ್ದಾಗ ಬೆನ್ನಟ್ಟಿಕೊಂಡು ಬಂದು ಹಿಂಜಾವೇ ಕಾರ್ಯಕರ್ತರು, ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿದ್ದಾರೆಂದು ದೂರಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಈ ಹತ್ಯೆಗಳಲ್ಲಿ ಮೋದಿ- ಯೋಗಿ- ಮೀಡಿಯಾ ಸಮಾನ ಪಾಲುದಾರರು

ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ್ದ ಕಾರ್ಕಳ ಡಿವೈಎಸ್ಪಿ ಅರವಿಂದ ಕಲ್ಲಗುಜ್ಜೆ, ಪೊಲೀಸ್ ವೃತ್ತ ನಿರೀಕ್ಷಕ ನಾಗರಾಜ್, ಎಸ್ಸೈ ಸಂದೀಪ್ ಶೆಟ್ಟಿ ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ಘಟನೆಯ ಸಂಬಂಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೂ ನಿಲ್ಲದ ಅನೈತಿಕ ಪೊಲೀಸ್‌ಗಿರಿ
ಮಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಅನೈತಿಕ ಪೊಲೀಸ್‌ಗಿರಿ ನಡೆಯುವುದನ್ನು ತಡೆಯಲು ಸರ್ಕಾರ ಹಾಗೂ ಪೊಲೀಸ್ ಇಲಾಖೆ ‘ಆ್ಯಂಟಿ ಕಮ್ಯೂನಲ್ ವಿಂಗ್’ ಸ್ಥಾಪಿಸಿ ಇಂತಹ ಘಟನೆ ನಡೆಯದಂತೆ ಶ್ರಮ ವಹಿಸುತ್ತಲೇ ಇದೆ. ಆದರೆ ಇಂತಹ ಘಟನೆಗಳಿಗೆ ಬ್ರೇಕ್ ಬಿದ್ದಿಲ್ಲ ಅನ್ನುವುದು ಮಾತ್ರ ವಿಪರ್ಯಾಸ.

ಕಳೆದ ಹತ್ತು ದಿನಗಳ ಅಂತರದಲ್ಲಿ ಕರಾವಳಿ ಭಾಗದಲ್ಲಿ ವರದಿಯಾದ ಮೂರನೇ ಘಟನೆ ಇದು. ವಾರದ ಹಿಂದೆ ಪೊಲೀಸ್ ಕುಟುಂಬ ಹಾಗೂ ಆ ಬಳಿಕ ವರದಿಗಾರನೋರ್ವನಿಗೆ ನಿಂದನೆ, ಬೆದರಿಕೆ ಹಾಕಿದ್ದ ಘಟನೆ ನಡೆದಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧುಗಿರಿ | ಕಾರುಗಳ ನಡುವೆ ಅಪಘಾತ : ಐವರು ಸಾವು

ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಐದು ಜನರು ಮೃತಪಟ್ಟಿರುವ ಘಟನೆ...

ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ಮೊಂತಿ ಫೆಸ್ಟ್ ಆಚರಣೆ

ಜಿಲ್ಲಾದ್ಯಂತ ಕನ್ಯಾಮರಿಯಮ್ಮನವರ ಜನ್ಮದಿನವಾದ ಮೊಂತಿ ಫೆಸ್ಟ್ ಅನ್ನು ಕ್ರೆಸ್ತರು ಭಾನುವಾರ ಸಂಭ್ರಮದಿಂದ...

ಕೊಪ್ಪ | ಮಹಿಳಾ ಪೊಲೀಸ್‌ ಸಿಬ್ಬಂದಿಗೆ ಲೈಂಗಿಕ ಕಿರುಕುಳ; ಪಿಎಸ್ಐ ಬಸವರಾಜ್ ವಿರುದ್ಧ ಆರೋಪ

ಕೊಪ್ಪ ಪಿಎಸ್ಐ ಬಸವರಾಜ್ ತಮ್ಮದೇ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಗೆ ಲೈಂಗಿಕ...