50ಕ್ಕೂ ಹೆಚ್ಚು ಕಬ್ಬು ಟ್ರ್ಯಾಕ್ಟರ್‌ಗಳಿಗೆ ಬೆಂಕಿ | ಮೂರು ದಿನ ನಿಷೇಧಾಜ್ಞೆ ಜಾರಿ

Date:

ಪ್ರತಿ ಟನ್​​ ಕಬ್ಬಿಗೆ 3,500 ರೂಪಾಯಿ ಘೋಷಿಸುವಂತೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರು ನಡೆಸಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. 50ಕ್ಕೂ ಹೆಚ್ಚು ಕಬ್ಬು ತುಂಬಿದ್ದ ಟ್ರ್ಯಾಕ್ಟರ್‌ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

- Advertisement -

ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯ ಮುಧೋಳ, ಜಮಖಂಡಿ, ರಬಕವಿ-ಬನಹಟ್ಟಿ ತಾಲ್ಲೂಕುಗಳಲ್ಲಿ ನ.13ರ ರಾತ್ರಿಯಿಂದ ನ.16ರ ಬೆಳಗ್ಗೆ 8ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಗೋದಾವರಿ ಸಕ್ಕರೆ ಕಾರ್ಖಾನೆಯಲ್ಲಿ ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಿಚ್ಚಿ ಪ್ರತಿಭಟನೆ ಮಾಡಲಾಗುತ್ತಿದೆ. ಹೆಚ್ಚಿನ ಹಾನಿಯಾಗದಂತೆ ತಡೆಯಲು ಪ್ರತಿಭಟನೆ, ಮುಷ್ಕರ, ಗುಂಪು ಸೇರುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ” ಎಂದು ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದ್ದಾರೆ.

ಕಾರ್ಖಾನೆ ಬಳಿ ನಡೆದ ಕಲ್ಲು ತೂರಾಟದಲ್ಲಿ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಮಹಾಂತೇಶ್ವರ ಜಿದ್ದಿ, ರೈತ ವಿಠ್ಠಲ ಹೊಸಮನಿ ಸೇರಿದಂತೆ ಹಲವರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಬಾಗಲಕೋಟೆ | ಕಲಾ ಪ್ರತಿಭೋತ್ಸವಕ್ಕೆ ಅರ್ಜಿ ಆಹ್ವಾನ

ಮುಧೋಳ ತಾಲೂಕಿನ ಸೈದಾಪುರ ಗ್ರಾಮದ ಸಮೀರವಾಡಿಯ ಗೋದಾವರಿ ಕಾರ್ಖಾನೆ ಬಳಿ ಸಾಲಾಗಿ ನಿಲ್ಲಿಸಿದ್ದ 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಲಾಗಿದೆ. ಕಬ್ಬು ಸೇರಿ ಹಲವು ಟ್ರಾಕ್ಟರ್‌ಗಳು ಬೆಂಕಿಗಾಹುತಿಯಾಗಿವೆ. ಪ್ರತಿಭಟನಾಕಾರರು ಬೆಂಕಿ ಹಚ್ಚಿಲ್ಲ, ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂದು ರೈತರು ಆರೋಪಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...