ವಿಜಯಪುರ | ಅತ್ಯಂತ ನಿರಾಶಾದಾಯಕ ಹಾಗೂ ಅಸಮತೋಲಿತ ಬಜೆಟ್: ಕಾಂಗ್ರೆಸ್‌ ಮುಖಂಡ

Date:

Advertisements

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಿರಾಶಾದಾಯಕವಾಗಿದೆ. ಬಡವರು, ದೀನದಲಿತ, ರೈತರು, ಜನಸಾಮಾನ್ಯರಿಗೆ ಬಜೆಟ್‌ ವಿರುದ್ಧವಾಗಿದೆ. ಮುಂದಿನ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ತಯಾರಿಸಿದ ಬಜೆಟ್ ಇದು ಎಂದು ಕೆಪಿಸಿಸಿ ವೈದ್ಯರ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ರವಿಕುಮಾರ ಬಿರಾದಾರ ಹೇಳಿದ್ದಾರೆ.

ಕೇಂದ್ರ ಬಜೆಟ್‌ಗೆ ಪ್ರತಿಕ್ರಿಯಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರವು ಅವರು, “ಬಜೆಟ್‌ನಲ್ಲಿ ಕರ್ನಾಟಕಕ್ಕೆ ಯಾವುದೇ ನೀರಾವರಿ ಯೋಜನೆಗಳಾಗಲಿ, ಇನ್ನಿತರ ಯೋಜನೆಗಳನ್ನಾಗಲಿ ನೀಡಿಲ್ಲ. ರೈತರ ಗೊಬ್ಬರ ಮೇಲಿನ ಸಬ್ಸಿಡಿ ಕಡಿತಗೊಳಿಸಿ ಗೊಬ್ಬರ ಬೆಲೆ ಏರಿಕೆ ಮಾಡಿ ರೈತನ ಬೆನ್ನೆಲುಬು ಮುರಿದಿದ್ದಾರೆ. ಬಂಡವಾಳ ಶಾಹಿಗಳ ತೆರಿಗೆ ಕಡಿಮೆ ಮಾಡಿ ಬಡ ಜನರ ತೆರಿಗೆ ಹೆಚ್ಚಿಗೆ ಮಾಡಿದ್ದಾರೆ ಅಲ್ಲದೇ ಆದಾಯ ತೆರಿಗೆಯಲ್ಲೂ ಯಾವುದೇ ಬದಲಾವಣೆ ಮಾಡದೇ ಇರುವದು ನೌಕರರಿಗೆ ನಿರಾಸೆ ಮೂಡಿಸಿದೆ” ಎಂದು ಹೇಳಿದ್ದಾರೆ.

“ಎಲ್ಲ ಯೋಜನೆಗಳನ್ನು ಉತ್ತರ ಭಾರತದವರಿಗೆ ನೀಡಿ, ಅತೀ ಹೆಚ್ಚು ತೆರಿಗೆ ನೀಡುವ ಕರ್ನಾಟಕ ಹಾಗೂ ದಕ್ಷಿಣ ರಾಜ್ಯಗಳಿಗೆ ಘೋರ ಅನ್ಯಾಯ ಮಾಡಲಾಗಿದೆ. ಗಗನಕ್ಕೇರಿರುವ ಪೆಟ್ರೋಲ್, ಡೀಸೆಲ್ ಹಾಗೂ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಗಳ ಬೆಲೆ ಇಳಿಕೆ ಮಾಡುವತ್ತ ಯಾವುದೇ ಯೋಜನೆಗಳನ್ನು ಘೋಷಿಸಿಲ್ಲ” ಎಂದು ಕಿರಿಕಾರಿದ್ದಾರೆ.

Advertisements

“ದೇಶದ ಸಾಲವನ್ನು 18 ಲಕ್ಷ ಹೆಚ್ಚುವರಿ ಮಾಡಿ,2014 ರಲ್ಲಿ 54 ಲಕ್ಷ ಕೊಟ್ಟಿಯಿದ್ದ ಸಾಲವನ್ನು ಸುಮಾರು 163 ಲಕ್ಷ ಕೋಟಿಗೆ ಏರಿಸಿದ್ದಾರೆ. ಮೋದಿ ತಮ್ಮ ಅಧಿಕಾರಾವಾಧಿಯ 9 ವರ್ಷಗಳಲ್ಲಿ ಸುಮಾರು 118ಲಕ್ಷ ಕೋಟಿ ಹೆಚ್ಚುವರಿವಿಪರೀತ ಸಾಲ ಮಾಡಿದ್ದಾರೆ” ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X