ಗೃಹಲಕ್ಷ್ಮಿ | ಯೋಜನೆ ಹಣ ಕೂಡಿಟ್ಟು ಕೊಳವೆಬಾವಿ ಕೊರೆಸಿದ ಅತ್ತೆ-ಸೊಸೆ!

Date:

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕವಾಗಿ ಬಂದ ಹಣವನ್ನು ಕೂಡಿಟ್ಟು, ಅತ್ತೆ-ಸೊಸೆ ಇಬ್ಬರು ತಮ್ಮ ಜಮೀನಿನಲ್ಲಿ ಕೊಳವೆಬಾವಿ ಕೊರೆಸಿದ್ದಾರೆ. ಅತ್ತೆ-ಸೊಸೆಯ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.

- Advertisement -

ಗದಗ ಜಿಲ್ಲೆಯ ಗಜೇಂದ್ರಗಡದ ಮಾಲಾದಾರದ ನಿವಾಸಿಗಳಾದ ಮಾಬುಬೀ ಮತ್ತು ಅವರ ಸೊಸೆ ರೋಷನ್ ಬೇಗಂ ಅವರು ತಮಗೆ ಪ್ರತಿ ತಿಂಗಳು ಬರುತ್ತಿದ್ದ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟಿದ್ದಾರೆ. ಇದೀಗ, ಆ ಹಣದಲ್ಲಿ ತಮ್ಮ ಕೈಷಿ ಭೂಮಿಯಲ್ಲಿ ಕೊಳವೆಬಾವಿ ಕೊರೆಸಿದ್ದಾರೆ. ಬಾವಿಯಲ್ಲಿ ಉತ್ತಮ ನೀರು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಅತ್ತೆ-ಸೊಸೆಯ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ನಮ್ಮ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದ ಹಣದಲ್ಲಿ ಬೋರ್ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ-ಸೊಸೆಯ ಮಾತು ಕೇಳಿ ಖುಷಿಯಾಯಿತು. ನಾಡಿನ ಬಡ ಕುಟುಂಬಗಳಿಗೆ ಆರ್ಥಿಕ ಶಕ್ತಿ ತುಂಬಿ, ಅವರನ್ನು ಸ್ವಾವಲಂಬಿಗಳನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯ ಉದ್ದೇಶ ಯಶಸ್ವಿಯಾಗಿ ಈಡೇರುತ್ತಿದೆ. ಯೋಜನೆಯನ್ನು ಜಾರಿಗೆ ತಂದದ್ದು ನನ್ನಲ್ಲಿ ಸಂತೃಪ್ತಭಾವ ಮೂಡಿಸಿದೆ” ಹೇಳಿದ್ದಾರೆ.

“ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಅತ್ತೆ-ಸೊಸೆಯ ನಡುವೆ ಜಗಳ ಆರಂಭವಾಗುತ್ತದೆ, ಸಂಸಾರಗಳು ಒಡೆಯುತ್ತವೆ ಎಂದು ಟೀಕಿಸಿದ ಜನರಿಗೆ ಬಾರಿಸಿದ ತಪರಾಕಿ ಇದು. ಬೆಳಕಿಗೆ ಬಾರದ ಇಂತಹ ಇನ್ನೂ ಸಾವಿರಾರು ಯಶೋಗಾಥೆಗಳಿವೆ, ಗೃಹಲಕ್ಷ್ಮಿ ನಾಡಿನ ತಾಯಂದಿರ ಬಾಳಿಗೆ ಅಕ್ಷರಶಃ ಭಾಗ್ಯಲಕ್ಷ್ಮಿಯಾಗಿದೆ ಎನ್ನುವುದರಲ್ಲಿ ಯಾವ ಸಂಶಯವೂ ಇಲ್ಲ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...