ಕಲ್ಯಾಣ ಕರ್ನಾಟಕ ಭಾಗದಲ್ಲಿ ಗರಿಷ್ಠ ತಾಪಮಾನ ದಾಖಲಾಗಿದ್ದು, ಬಿಸಿಲಿನ ತಾಪಕ್ಕೆ ತಾಳಲಾರದೇ ಕಲಬುರಗಿ ಸಂಸದ ಡಾ.ಉಮೇಶ ಜಾಧವ್ ರಸ್ತೆಯಲ್ಲೇ ಕುಸಿದು ಬಿದ್ದಿದ್ದಾರೆ.
ಕಲಬುರಗಿ ನಗರದಲ್ಲಿ ವೀರಶೈವ ಲಿಂಗಾಯತ ಸಮುದಾಯದಿಂದ ಪ್ರತಿಭಟನೆ ನಡೆಯುತ್ತಿತ್ತು. ಈ ವೇಳೆ ಸಂಸದರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದರು. ಪ್ರತಿಭಟನಾಕಾರರ ಜೊತೆ ಮಾತನಾಡುವಾಗ ಬಿಸಿಲಿನ ತಾಪಮಾನ ತಡೆದುಕೊಳ್ಳಲಾಗದೇ ಕುಸಿದು ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.
ಕೂಡಲೇ ಸಂಸದರನ್ನು ಅವರನ್ನು ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಆಂಬ್ಯುಲೆನ್ಸ್ ಮೂಲಕ ಜಯದೇವ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಹೃದಯದಲ್ಲಿ ಏರುಪೇರಾಗಿದ್ದರಿಂದ ವೈದ್ಯರು ಸತತ ನಿಗಾ ವಹಿಸುತ್ತಿದ್ದಾರೆ.
ಆರೋಗ್ಯ ವಿಚಾರಿಸಿದ ಬಿ.ಎಸ್.ವಿಜಯೇಂದ್ರ :
ಚುನಾವಣಾ ಪ್ರಚಾರದ ವೇಳೆ ಅಹಿತಕರ ಘಟನೆಯಿಂದ ತಾತ್ಕಾಲಿಕ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸಂಸದ, ಬಿಜೆಪಿ ಅಭ್ಯರ್ಥಿ ಡಾ.ಉಮೇಶ ಜಾಧವ್ ಅವರನ್ನು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ಮತ್ತು ಕ್ಷೇಮ ವಿಚಾರಿಸಿ ಘಟನೆಯ ಮಾಹಿತಿ ಪಡೆದರು.