ಕೊಡಗು ಜಿಲ್ಲೆಯ ಸಾರ್ವಜನಿಕರ ಬಹುದಿನದ ಬೇಡಿಕೆಯಂತೆ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪ್ರಯತ್ನದಿಂದಾಗಿ ಕೇಂದ್ರ ವಿದೇಶಾಂಗ ಸಚಿವಾಲಯ ಸಹಕಾರದಲ್ಲಿ ಪಾಸ್‍ಪೋರ್ಟ್ ಮೇಳಕ್ಕೆ ಬುಧವಾರ ಮಡಿಕೇರಿಯಲ್ಲಿ ಚಾಲನೆ ದೊರೆಯಿತು.
ಕೊಡಗು ಜಿಲ್ಲೆಯ ಜನರು ಪಾಸ್‍ಪೋರ್ಟ್ ಪಡೆಯುವುದಕ್ಕಾಗಿ ಬೇರೆಡೆ ತೆರಳುತ್ತಿದ್ದರು. ಸಾರ್ವಜನಿಕರಿಗಾಗುತ್ತಿರುವ ಅನಾನುಕೂಲದ ಬಗ್ಗೆ ವಿದೇಶಾಂಗ ಸಚಿವಾಲಯಕ್ಕೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ, ಬೆಂಗಳೂರಿನ ಪ್ರಾದೇಶಿಕ ಪಾಸ್‍ಪೋರ್ಟ್ ಕಚೇರಿ ವತಿಯಿಂದ ಮೂರು ದಿನಗಳ ಪಾಸ್‍ಪೋರ್ಟ್ ಮೇಳ ಹಮ್ಮಿಕೊಂಡಿದ್ದು, ಈಗಾಗಲೇ ನೋಂದಣಿ ಮಾಡಿರುವವರು ಇದರ ಪ್ರಯೋಜನವನ್ನು ಪಡೆಯುವಂತೆ ಕೋರಿದರು.
ಈ ಸುದ್ದಿ ಓದಿದ್ದೀರಾ? ಕೊಡಗು | ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸಿ: ದಿನಕರ್ ಶೆಟ್ಟಿ
ಚಾಲನೆ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಪಿ. ಕಲಾವತಿ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ನಗರಸಭೆ ಸದಸ್ಯರು ಸೇರಿದಂತೆ ಇನ್ನಿತರರು ಇದ್ದರು.




